Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಶ್ರಮದಾನ

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.1: ಗಾಂಧಿಯವರ 154ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ 1,900ಕ್ಕೂ ಹೆಚ್ಚು ಸ್ಥಳಗಳಲ್ಲಿ 2.5 ಲಕ್ಷಕ್ಕೂ ಹೆಚ್ಚು ಮಂದಿಯಿಂದ ಸ್ವಚ್ಛತಾ ಹೀ ಸೇವಾ ಶ್ರಮದಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.



‘ಸ್ವಚ್ಛ ಸರ್ವೇಕ್ಷಣ್-2023’ ಪಾಲಿಕೆ ವ್ಯಾಪ್ತಿಯಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಸಂಸದರು, ಸ್ಥಳೀಯ ಶಾಸಕರುಗಳು, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್, ಎಲ್ಲಾ ವಲಯ ಜಂಟಿ ಆಯುಕ್ತರು, ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡು ಸ್ವಚ್ಛತಾ ಕಾರ್ಯವನ್ನು ನಡೆಸಿದರು.

ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ ವಿಭಾಗದಿಂದ ನಗರದ ಕೆರೆಗಳು, ರೈಲ್ವೆ ನಿಲ್ದಾಣ, ರಸ್ತೆ ಬದಿ, ಸೇತುವೆಯ ಕೆಳಗೆ, ಮೇಲ್ಸೇತುವೆ ಕೆಳಗೆ, ಕೊಳೆಗೇರಿ ಪ್ರದೇಶಗಳು, ಮಾರುಕಟ್ಟೆ ಸ್ಥಳಗಳು, ಆರಾಧನೆ ಸ್ಥಳಗಳು, ಉದ್ಯಾನವನಗಳು, ಬಸ್ ನಿಲ್ದಾಣಗಳು, ಪ್ರಮುಖ ಜಂಕ್ಷನ್ ಗಳು, ಶಾಲಾ-ಕಾಲೇಜುಗಳ ಸುತ್ತಮುತ್ತಲಿನ ಪ್ರದೇಶ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ನಾಗರೀಕರು, ಸ್ಥಳೀಯ ಎನ್ಜಿಒಗಳು, ಎನ್ಎಸ್ಎಸ್- ಎನ್ಸಿಸಿ ವಿದ್ಯಾರ್ಥಿಗಳು, ಸ್ವಯಂ ಸೇವಕರು, ಬಿಎಸ್ಎಫ್ ಯೋಧರು, ಅಗ್ಲಿ ಇಂಡಿಯನ್ಸ್, ಸರ್ಕಾರಿ ಅಧಿಕಾರಿಗಳು, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ತ್ಯಾಜ್ಯವನ್ನು ತೆರವುಗೊಳಿಸಲಾಯಿತು.

20ಕ್ಕೂ ಹೆಚ್ಚು ಟನ್ ತ್ಯಾಜ್ಯ ಸಂಗ್ರಹ

ಸ್ವಚ್ಛತಾ ಅಭಿಯಾನದ ವೇಳೆ ರಸ್ತೆಗಳು, ಬೀದಿ ಮತ್ತು ಇನ್ನಿತರೆ ಸ್ಥಳಗಳು ಸೇರಿಂದಂತೆ ಅಂದಾಜು 4,000 ಕಿ.ಮೀ ಪ್ರದೇಶದಲ್ಲಿ ಸುಮಾರು 20-25 ಟನ್‌ಗಳಷ್ಟು ತ್ಯಾಜ್ಯವನ್ನು ಸಂಗ್ರಹಿಸಲಾಗಿದೆ. ಸಂಗ್ರಹವಾದ ತ್ಯಾಜ್ಯವನ್ನು ಒಣ ಹಾಗೂ ಹಸಿ ತ್ಯಾಜ್ಯವನ್ನು ಬೇರ್ಪಡಿಸಿ ಆಟೋ ಟಿಪ್ಪರ್ ಗಳ ಮೂಲಕ ಕಾಂಪ್ಯಾಕ್ಟರ್ ಗಳಿಗೆ ಹಾಕಿ ತ್ಯಾಜ್ಯವನ್ನು ವಿಲೇವಾರಿ ಮಾಡಲಾಯಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ