ಟಿ.ನರಸೀಪುರ ದುರಂತ: ಚಿಕಿತ್ಸೆ ಫಲಕಾರಿಯಾಗದೇ ಮತ್ತೋರ್ವ ಸಾವು
ಮೈಸೂರು, ಮೇ 2: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಸಮೀಪದ ಅಡ್ಡಹಳ್ಳ ತಿರುವಿನಲ್ಲಿ ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಇಲ್ಲಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊರ್ವ ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದು, ಇದರಿಂದ ದುರಂತದಲ್ಲಿ ಮೃತಪಟ್ಟವರ ಸಂಖೈ 11 ಕ್ಕೆ ಏರಿದೆ.
ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬಳ್ಳಾರಿ ಜಿಲ್ಲೆ ಸಂಗನಕಲ್ಲು ಗ್ರಾಮದ ಸಂದೀಪ್ (28) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಚೇತರಿಸಿಕೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆ ವೈದ್ಯ ಡಾ. ಯೋಗೀಶ್ ಕುಮಾರ್ ತಿಳಿಸಿದ್ದಾರೆ.
ಮೇ 27ರಂದು ಬಳ್ಳಾರಿಯ ಸಂಗನಕಲ್ ನಿಂದ ಮೈಸೂರಿಗೆ ಪ್ರವಾಸಕ್ಕೆಂದು ಬಂದಿದ್ದ ವೇಳೆ ಇನೋವಾ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ 10 ಮಂದಿ ಅಸುನೀಗಿದ್ದರು. ಶ್ರೀ ಮಲೆಮಹದೇಶ್ವರ ಬೆಟ್ಟಕ್ಕೆ ಹೋಗಿ ಕಾರಿನಲ್ಲಿ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ನಡೆದಿತ್ತು. ಅಪಘಾತದ ಭೀಕರ ದೃಶ್ಯ ಬಸ್ ನಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.