Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಆ. 9 : ತಾಲೂಕಿನ ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷರಾಗಿ ವೆಂಕಟಸ್ವಾಮಿ ಹಾಗು ಉಪಾಧ್ಯಕ್ಷರಾಗಿ ಶುಭಾವತಿ ವೆಂಕಟೇಶ್ ಆಯ್ಕೆಯಾಗಿದ್ದಾರೆ.

ಒಟ್ಟು 14 ಸದಸ್ಯ ಬಲ ಹೊಂದಿರುವ ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಎಸ್‍ಸಿ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಮೀಸಲು ನಿಗದಿಪಡಿಸಲಾಗಿದ್ದು, ಚುನಾವಣೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಆಂಜಿನಪ್ಪ ಪುಟ್ಟು ಅವರ ಬಂಡಾಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವೆಂಕಟಸ್ವಾಮಿ ಮತ್ತು ಕಾಂಗ್ರೆಸ್ ಬೆಂಬಲಿತ ವೆಂಕಟರೋಣಪ್ಪ ನಾಮಪತ್ರ ಸಲ್ಲಿಸಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಶುಭಾವತಿ ವೆಂಕಟೇಶ್ ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಅಧ್ಯಕ್ಷ ಸ್ಥಾನದ ಬಂಡಾಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವೆಂಕಟಸ್ವಾಮಿ 07 ಮತಗಳನ್ನು ಪಡೆದರೆ ಕಾಂಗ್ರೆಸ್ ಬೆಂಬಲಿತ ವೆಂಕಟರೋಣಪ್ಪ 06 ಮತಗಳನ್ನು ಪಡೆದು ಪರಾಭವಗೊಂಡರು. ಒಂದು ಮತ ತಿರುಸ್ಕೃತಗೊಂಡಿದೆ. ಉಪಾಧ್ಯಕ್ಷ ಸ್ಥಾನದ ಶುಭಾವತಿ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಗರಸಭೆ ಪೌರಾಯುಕ್ತ ಆರ್.ಶ್ರಿಕಾಂತ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಹೆಚ್.ಸಿ.ಮುನಿರಾಜು, ಸದಸ್ಯರಾದ ಅಶ್ವತ್ಥನಾರಾಯಣರೆಡ್ಡಿ, ಸರಸ್ವತಮ್ಮ, ದ್ಯಾವಮ್ಮ, ಸಾವಿತ್ರಮ್ಮ, ಜಯಮ್ಮ, ಚಿಕ್ಕನರಸಿಂಹಪ್ಪ, ಶೋಭಾ, ಕೆ.ವಿ.ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ