Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊರರಾಜ್ಯಗಳ ಪ್ರವಾಸಿಗರ ವಾಹನಗಳಿಗೆ ತೆರಿಗೆ ವಿನಾಯ್ತಿ

ಸುದ್ದಿಮೂಲ ವಾರ್ತೆ

ಮೈಸೂರು, ಅ.10:ಬರಗಾಲ ಬಲಗಾಲಿಟ್ಟು ಬಂದಿರುವ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಮಹೋತ್ಸವವನ್ನು ಸರಳವೂ ಅಲ್ಲದೇ, ಅದ್ದೂರಿಯೂ ಅಲ್ಲದೇ ಸಾಂಪ್ರದಾಯಿಕವಾಗಿ ಪ್ರಾಯೋಜಕತ್ವದ ಮೂಲಕ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಮಂಗಳವಾರ ಅರಮನೆ ಆಡಳಿತ ಮಂಡಳಿಯ ಕಚೇರಿಯಲ್ಲಿ ನಗರ ಪೋಲಿಸ್ ಕಮಿಷನರ್ ರಮೇಶ್ ಬಾನೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಜಿಪಂ ಸಿಇಒ ಗಾಯತ್ರಿ ಸೇರಿದಂತೆ ಉನ್ನತ ಅಧಿಕಾರಿಗಳು ದಸರಾ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದರು.

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ರಾಜ್ಯದಲ್ಲಿ ಬರ ಕಾಣಿಸಿಕೊಂಡಿರುವ ಕಾರಣ ಸಾಂಪ್ರದಾಯಿಕವಾಗಿ ನಡೆಸಲಾಗುತ್ತಿದ್ದು, ಸಾಂಪ್ರದಾಯಿಕ ದಸರಾವನ್ನು ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಾಯೋಜಕತ್ವ ಪಡೆದುಕೊಳ್ಳುವವರಿಗೆ ಸರ್ಕಾರ ಕೆಲವು ಸೂಚನೆ ನೀಡಿದೆ.

ಪ್ರವಾಸಿಗರನ್ನು ಸೆಳೆಯಲು

ಪ್ರವಾಸಿಗರನ್ನು ಸೆಳೆಯಲು ದಸರಾವನ್ನು ಸರಳ ದಸರಾ ಎಂದು ಕರೆಯದೇ ಬಹುತೇಕ ಕಾರ್ಯಕ್ರಮಗಳನ್ನು ಪ್ರಾಯೋಜಕತ್ವದಲ್ಲಿ ನಡೆಸಲು ಕೈಗೊಳ್ಳಲಾಗಿದೆ. ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರ ವಾಹನಗಳಿಗೆ ತೆರಿಗೆ ವಿನಾಯ್ತಿ ನೀಡಲಾಗುವುದು ಎಂದು ತಿಳಿಸಿದರು.

ಏರ್‌ಶೋ

ಅ. 23ರಂದು ಏರ್ ಶೋ : 5 ವರ್ಷಗಳ ಬಳಿಕ ದಸರಾ ಮಹೋತ್ಸವದಲ್ಲಿ ಮತ್ತೆ ಪೂರ್ಣ ಪ್ರಮಾಣದ ಏರ್ ಶೋ ನಡೆಯುತ್ತಿದೆ. ಅ. 22 ರಂದು ಪೂರ್ವಾಭ್ಯಾಸ ನಡೆಯಲಿದ್ದು, ಅ. 23 ರಂದು ಪೂರ್ಣ ಪ್ರಮಾಣದ ಏರ್ ಶೋ ನಗರದ ಬನ್ನಿ ಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ ನಡೆಯಲಿದೆ. 23ರ ಸಂಜೆ 4 ಗಂಟೆಗೆ ಶೋ ಆರಂಭವಾಗಲಿದ್ದು, 45 ನಿಮಿಷ ನಡೆಯಲಿದೆ ಎಂದು ಹೇಳಿದರು.

ಅ.18 ರಿಂದ 21 ರವರೆಗೆ ಯುವ ದಸರಾ

ಎಸ್ಪಿ ಸೀಮಾ ಲಾಟ್ಕರ್ ಮಾತನಾಡಿ, ಅಕ್ಟೋಬರ್ 18 ರಿಂದ 21ರವರೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ನಡೆಯಲಿದ್ದು, ಉದ್ಘಾಟನೆಯಲ್ಲಿ ನಟ ಶಿವರಾಜ್ ಕುಮಾರ್ ಭಾಗಿಯಾಗುವರು. ಕನ್ನಡ ಹಿನ್ನೆಲೆ ಗಾಯಕ ಸಂಚಿತ್ ಹೆಗ್ಡೆ ಮತ್ತು ತಂಡ ಯುವ ದಸರಾದಲ್ಲಿ ಪಾಲ್ಗೊಳ್ಳುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್. ಸಿ ಮಹದೇವಪ್ಪ ಉದ್ಘಾಟಿಸುವರು.

ಸಂಜೆ 6.30 ರಿಂದ ರಾತ್ರಿ 10.30 ರವರಿಗೆ ಯುವ ದಸರಾ ನಡೆಯಲಿದೆ. ಮೊದಲ ದಿನ ಸಾಧು ಕೋಕಿಲ ಮತ್ತು ತಂಡದಿಂದ ಸಂಗೀತದ ರಸದೌತಣ, ಕನ್ನಡ ರ್ಯಪರ್ ಅಲೋಕ್ ತಂಡದಿಂದ ಸಂಗೀತ ಕಾರ್ಯಕ್ರಮ, ಬಾಲಿವುಡ್ ಹಾಡುಗಾರರು ಕೂಡ ಈ ಬಾರಿ ಯುವ ದಸರಾದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ಸ್ಥಳೀಯ ಪ್ರತಿಭೆಗಳಿಗೂ ಈ ಬಾರಿ ಯುವ ದಸರಾ ಸಂಭ್ರಮದಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ ಎಂದು ವಿವರ ನೀಡಿದರು.

ಇಸ್ರೇಲ್‌ನಲ್ಲಿ ಸಿಲುಕಿರುವವರ ಮಾಹಿತಿ ಇಲ್ಲ

ಇಸ್ರೇಲ್ ಯುದ್ಧಪೀಡಿತ ಪ್ರದೇಶದಲ್ಲಿ ಮೈಸೂರಿನ ನಿವಾಸಿಗಳು ಹಾಗೂ ಕುಟುಂಬದವರು ಸಿಲುಕಿರುವ ಮಾಹಿತಿ ಇಲ್ಲ. ಹಾಗೊಂದು ವೇಳೆ ಸಿಲುಕಿದ್ದರೆ ಮಾಹಿತಿ ನೀಡಿ. ನಂಜನಗೂಡಿನ ಕುಟುಂಬಕ್ಕೆ ಸಂಬಂಧಿಸಿದ ಮಾಹಿತಿ ಇಲ್ಲಿಯವರೆಗೆ ಸಿಕ್ಕಿಲ್ಲ. ಅವರ ಕುಟುಂಬದವರು ನಮ್ಮನ್ನು ಸಂಪರ್ಕಿಸಿಲ್ಲ. ಸಾರ್ವಜನಿಕರು 1128 ಸಹಾಯವಾಣಿಗೆ ಮಾಹಿತಿ ನೀಡಬಹುದು ಎಂದು ಹೇಳಿದರು.

ಹೆಚ್ಚಿನ ಭದ್ರತೆ

ನಗರ ಪೊಲೀಸ್‌ ಆಯುಕ್ತ ರಮೇಶ್ ಬನೋತ್‌ ಮಾತನಾಡಿ, ಜಂಬೂಸವಾರಿಯ ದಿನ ಹಾಗೂ ನವರಾತ್ರಿಯ ಇತರ ದಿನಗಳಲ್ಲಿ ಈ ಬಾರಿ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಮುಖ್ಯವಾಗಿ ಜಂಬೂಸವಾರಿ ಮೆರವಣಿಗೆ ಶಿಸ್ತುಬದ್ಧವಾಗಿ ಸಾಗಲು ರೂಪುರೇಷೆಗಳನ್ನು ಸಿದ್ಧಗೊಳಿಸಲಾಗಿದೆ. ಪ್ರತಿಯೊಂದು ಜಿಲ್ಲೆಯ ಸ್ತಬ್ಧ ಚಿತ್ರಗಳು ಹಾಗೂ ಕಲಾತಂಡಗಳು ಒಟ್ಟಿಗೆ ಸಾಗಲಿದ್ದು, ಚಿನ್ನದ ಅಂಬಾರಿ ಹೊತ್ತು ಸಾಗುವ ಆನೆಯ ಮುಂದೆ ಮೊದಲ ಬಾರಿಗೆ ಸಾಂಪ್ರದಾಯಿಕ ಉಡುಪಿನಲ್ಲಿ ಹಲವರು ಸಾಗಲಿದ್ದಾರೆ ಮಾಹಿತಿ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ