Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೀಬರ್ಡ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಸುದ್ದಿಮೂಲ ವಾರ್ತೆ

ಹೊಸಕೋಟೆ, ಸೆ. 13 : ಶಿಕ್ಷಕರು ಕೇವಲ ಶಾಲಾ ತರಗತಿಗಳಿಗೆ ಮೀಸಲಾಗದೇ ಸಾಮಾಜಿಕ ರಾಯಭಾರಿಗಳಾಗಿ ಕೆಲಸ ಮಾಡಬೇಕು ಎಂದು ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಠ್ ಅಭಿಪ್ರಾಯಪಟ್ಟರು.

ಹೊಸಕೋಟೆ ತಾಲೂಕು ಸೂಲಿಬೆಲೆ ಸೀಬರ್ಡ ಆಂಗ್ಲ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ

ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಡಾ.ಸರ್ವಪಲ್ಲಿ ರಾಧಾಕೃಷ್ಣ ಅವರ ಜನುಮ ದಿನವನ್ನು ಶಿಕ್ಷಕರ ದಿನಾಚರಣೆಯಾಗಿ ಇಡೀ ದೇಶವೇ ಹೆಮ್ಮೆಯಿಂದ ಆಚರಣೆ ಮಾಡುತ್ತಿದೆ. ಈ ಮೂಲಕ ಶಿಕ್ಷಕರಿಗೂ ದಿನಾಚರಣೆ ಮಾಡುವ ಅವಕಾಶ ಸಿಕ್ಕಿದೆ ಎಂದರು.

ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಅಮೀನಾ ಮಾತನಾಡಿ, ದೇಶದ ಅಭಿವೃದ್ದಿ ಆರ್ಥಿಕ ಪರಿಸ್ಥಿತಿ ವ್ಯವಹಾರಿಕವಾದ ಪ್ರಕ್ರಿಯೆಗಳಲ್ಲಿ ಶಿಕ್ಷಣ ಮತ್ತು ಶಿಕ್ಷಕರ ಸೇವೆ ಅನನ್ಯವಾಗಿದ್ದು, ಗುರುವಿನ ಕೆಲಸ ಮಹತ್ತರವಾದ ಕೆಲಸವಾಗಿರುತ್ತದೆ.

ಕಲ್ಲು ಬಂಡೆಗಳಂತಿರುವ ಮಕ್ಕಳನ್ನು ಸುಂದರ ವಿಗ್ರಹಗಳಾಗಿ ಕೆತ್ತನೆ ಮಾಡಿ ರೂಪ ನೀಡುತ್ತಾರೆ ಶಿಕ್ಷಕರು ಎಂದು ಬಣ್ಣಸಿದರು.

ಇದೇ ಸಂಧರ್ಭದಲ್ಲಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕ ವೃಂದಕ್ಕೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಸಮಾಜ ಸೇವಕ ಎಂ.ಆರ್.ಉಮೇಶ್, ಸಹಕಾರ ಬ್ಯಾಂಕ್ ಮೇಲ್ವಿಚಾರಕ ಎಸ್.ಕೆ.ವಸಂತಕುಮಾರ್, ಜೇನುಗೂಡು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಬೆಟ್ಟಹಳ್ಳಿ ಗೋಪಿನಾಥ್, ಪತ್ರಕರ್ತ ಅತ್ತಿಬೆಲೆ ಮಂಜುನಾಥ್, ಸಹ ಶಿಕ್ಷಕ ವರ್ಗ ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ