Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯರ ಆರಾಧನ ಮಹೋತ್ಸವದಲ್ಲಿ ಸಂಗ್ರಹಗೊಂಡ ಕಸ ಸ್ವಚ್ಛಗೊಳಿಸಿದ ತಂಡಗಳು

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ,ಸೆ.25:ಸ್ವಚ್ಛ ಭಾರತದ ಅಭಿಯಾನದ ಪ್ರೇರಣೆಯಾಗಿ ಸ್ವಚ್ಚ ಮಂತ್ರಾಲಯ ಶೀರ್ಷಿಕೆ ಅಡಿಯಲ್ಲಿ ಶ್ರೀಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿ ಮಂತ್ರಾಲಯದಲ್ಲಿ ಎರಡು ದಿನಗಳ ಕಾಲ ಮಾಜಿ ಶಾಸಕ ಅರವಿಂದ ಲಿಂಬಾವಳಿ ಅವರ ನೇತ್ರತ್ವದಲ್ಲಿ ಹಮ್ಮಿಕೊಂಡಿರುವ ಸ್ವಚ್ಛ ಮಂತ್ರಾಲಯ ಕಾರ್ಯಕ್ರಮಕ್ಕೆ ಮಠದ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥ ಸ್ವಾಮಿಗಳು ಚಾಲನೆ ನೀಡಿದರು.

ನಂತರ ಮಾತನಾಡಿದ ಶ್ರೀಸುಬುಧೇಂದ್ರ ಸ್ವಾಮೀಜಿ, ಮಹಾತ್ಮ ಗಾಂಧಿಯವರ ಕನಸಿನ ಭಾರತ ಸುಂದರವಾಗಿಸುವ ದೃಷ್ಟಿಯಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹಮ್ಮಿಕೊಳ್ಳುತ್ತ ಬರಲಾಗುತ್ತದೆ. ಇದೇ ದೃಷ್ಟಿಯಿಂದ ತೀರ್ಥ ಕ್ಷೇತ್ರ ಮಠ ಮಂದಿರಗಳಲ್ಲಿನ ಸ್ವಚ್ಛತೆ ಕೊರತೆ ಇರುವುದನ್ನು ಮನಗಂಡು ಸ್ವಚ್ಛ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಹದೇವಪುರ ಕ್ಷೇತ್ರದ ಮುಖಂಡರು ಕಾರ್ಯಕರ್ತರ ತಂಡ ಸ್ವಚ್ಛ ಮಂತ್ರಾಲಯ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.

ಭಾರತ ದೇಶಕ್ಕೆ ವಿಶಿಷ್ಟ ಸ್ಥಾನವಿದೆ. ಭಾರತ ದೇಶ ಸ್ವಚ್ಛವಾಗಿಲ್ಲ ಎನ್ನುವ ಅಪವಾದ ಸರಿಯಲ್ಲ. ವಿದೇಶದಲ್ಲಿ ಸ್ವಚ್ಛತೆಗೆ ಪ್ರಾಮುಖ್ಯತೆ ಕೊಡಲಾಗುತ್ತದೆ. ಆದರೆ ಭಾರತ ದೇಶದಲ್ಲಿ ಕಸ ನಿರ್ವಹಣೆ ಬಗ್ಗೆ ಜಾಗೃತಿ ಇಲ್ಲದೆ ಇರುವುದರಿಂದ ಸ್ವಚ್ಛತೆಗೆ ಪ್ರಾಮುಖ್ಯತೆ ಕೊಡಲಾಗುತ್ತಿಲ್ಲ. ಸ್ವಚ್ಛತೆ ಬಗ್ಗೆ ಗಮನ ಕೊಡಬೇಕಾದ ಅವಶ್ಯಕತೆ ಇದೆ. ಉಪನ್ಯಾಸ ಮಾಡಿದರೆ ಸಾಲದು ಕಸದ ಪ್ರತಿಯೊಬ್ಬರೂ ಜಾಗೃತಿ ವಹಿಸಬೇಕು ಎಂದರು.

ಮಾಜಿ ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ, ಇದೇ ತಿಂಗಳಲ್ಲಿ ನಡೆದ ಗುರು ರಾಯರ ಆರಾಧನಾ ಮಹೋತ್ಸವದಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರಿಂದ ಅಲ್ಲಲ್ಲಿ ಕಸ ಸಂಗ್ರಹಗೊಂಡಿತ್ತು. ಸಾವಿರಾರು ಜನ ಪಾಲ್ಗೊಳ್ಳುವ ಮಂತ್ರಾಲಯದಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಸ್ವಚ್ಛ ಭಾರತ ಅಭಿಯಾನದ ಭಾಗವಾಗಿ ಎರಡು ದಿನಗಳ ಕಾಲ ಸ್ವಚ್ಛ ಮಂತ್ರಾಲಯ ಹಮ್ಮಿಕೊಳ್ಳಲಾಗಿದೆ. ಮಹದೇವಪುರದ ಕ್ಷೇತ್ರದ ಮುಖಂಡರು ಕಾರ್ಯಕರ್ತರ ತಂಡ ಮಠದ ವಿವಿಧ ಭಾಗಗಳಲ್ಲಿ ಸ್ವಚ್ಛತೆ ನಡೆಸಲಿದ್ದಾರೆ ಎಂದು ಹೇಳಿದರು.

ಮಹದೇವಪುರ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಒಳಗೊಂಡಿರುವ ಕರಸೇವಕರ ಎಂಟು ನೂರಕ್ಕೂ ಹೆಚ್ಚು ಜನ ಒಳಗೊಂಡಿರುವ ತಂಡ ಮಠದ ವಿವಿಧ ಭಾಗಗಳಾದ ಗೋಶಾಲೆ, ತುಂಗಭದ್ರಾ ನದಿ ತೀರ, ಕಲ್ಯಾಣಿ, ಸಾರ್ವಜನಿಕ ಗಾರ್ಡನ್, ಪಾಕಶಾಲೆ, ಪ್ರಸಾದ ವಿತರಣೆ ಕೇಂದ್ರ ಮುಂತಾದಡೆ ಸ್ವಚ್ಛಗೊಳಿಸುವ ಕಾರ್ಯ ನಡೆಸಿದರು.

ಈ ಸಂಧರ್ಭದಲ್ಲಿ ಮಹದೇವಪುರ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಮನೋಹರ್ ರೆಡ್ಡಿ, ಗ್ರಾಮಾಂತರ ಮಂಡಲ ಅಧ್ಯಕ್ಷ ನಟರಾಜ್, ವೆಂಕಟಸ್ವಾಮಿ ರೆಡ್ಡಿ, ಮಹೇಂದ್ರ ಮೋದಿ, ರಾಜೇಶ್, ಪಿಳ್ಳಪ್ಪ, ಜಯದೇವ್, ಬಾಬುರೆಡ್ಡಿ, ಬಿದರಹಳ್ಳಿ ರಾಜೇಶ್, ಅಶೋಕ್, ನಲ್ಲೂರಹಳ್ಳಿ ಚಂದ್ರಶೇಖರ್ ರೆಡ್ಡಿ, ಚನ್ನಸಂದ್ರ ಚಂದ್ರಶೇಖರ್, ವರ್ತೂರು ಶ್ರೀಧರ್, ಸತೀಶ್ ರೆಡ್ಡಿ ಮತ್ತಿತ್ತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ