Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಯುವಕರಿಗೆ ಹೆಚ್ಚಿನ ಸ್ಥಾನ ನೀಡುವಂತೆ  ವರಿಷ್ಠರಿಗೆ ಮನವಿ : ತೇಜಸ್ವಿ ಸೂರ್ಯ

ಸುದ್ದಿಮೂಲ ವಾರ್ತೆ,


ಕಲಬುರಗಿ, ಏ.8: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯುವಕರಿಗೆ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಪಕ್ಷದ ವರಿಷ್ಠರಿಗೆ ಮನವಿ ಮಾಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರು ಹಾಗೂ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.


 ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಪಕ್ಷದ ವೇದಿಕೆಯಲ್ಲಿ ಇಂತಿಷ್ಟು ಸೀಟುಗಳನ್ನು ಯುವಕರಿಗೆ ನೀಡಬೇಕೆಂದು ವಿನಂತಿಸಲಾಗಿದೆ. ಅದನ್ನು ಬಹಿರಂಗವಾಗಿ ಪ್ರಸ್ತಾಪಿಸುವುದಿಲ್ಲ ಎಂದರು.


ಬಿಜೆಪಿ ಕಳೆದ ವಾರದಿಂದ ಸ್ಪರ್ಧಾ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಟಿಕೆಟ್ ಯಾರಿಗೆ ನೀಡಬೇಕೆಂಬ ಅಭಿಯಾನದಲ್ಲಿ ಶಕ್ತಿ ಕೇಂದ್ರದ 22 ಸಾವಿರ ಕಾರ್ಯಕರ್ತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತದನಂತರ ಜಿಲ್ಲಾ ಹಾಗೂ ರಾಜ್ಯ ಕೋರ್ ಕಮಿಟಿಯಲ್ಲಿ ಚರ್ಚೆಯಾಗಿದೆ. ಈಗ ಏ.‌10 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ಸಂಸದೀಯ ಮಂಡಳಿ ಸಭೆಯಲ್ಲಿ ಚರ್ಚೆಯಾಗಿ ಪಟ್ಟಿ ಅಂತೀಮಗೊಳ್ಳಲಿದೆ ಎಂದರು.


ಕಾಂಗ್ರೆಸ್ ಪಕ್ಷ ಬಣಕ್ಕೊಂದು ಟಿಕೆಟ್ ನೀಡಿದ್ದರಿಂದ ಅವರ ಜಗಳ ಬೀದಿಗೆ ಬಂದು ನಿಂತಿದೆ. ಪರಿಣಾಮ ಭಿನ್ನಮತ ಸ್ಪೋಟಗೊಂಡಿದೆ. ಅದೇ ರೀತಿ ಮನೆಯಲ್ಲಿ ಕುಳಿತು ಟಿಕೆಟ್ ಅಂತೀಮಗೊಳಿಸುತ್ತಿದ್ದ ಜೆಡಿಎಸ್ ಪಕ್ಷದಲ್ಲೂ ಭಿನ್ನ ಹಾದಿ ಹಿಡಿದಿದೆ.‌ ಆದರೆ ಬಿಜೆಪಿ ಹಾಗಿಲ್ಲ. ಕೆಳ ಹಂತದ ಕಾರ್ಯಕರ್ತರನ್ನು ಗುರುತಿಸುವ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ.‌ ಅದಕ್ಕೆ ತಾವೊಬ್ಬರು ಉದಾಹರಣೆ. ತಾವು ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದನಾಗಿರುವುದೇ ಸಾಕ್ಷಿ ಎಂದು ಹೇಳಿದರು.


ಬಿಜೆಪಿ ಚುನಾವಣೆ ಸಂಬಂಧ ಯಾವುದೇ ರಣತಂತ್ರ ರೂಪಿಸುವುದಿಲ್ಲ. ಯಾಕೆಂದರೆ ಸದಾ ಜನರೊಂದಿಗಿರುವ ಬಿಜೆಪಿಗೆ ರಣತಂತ್ರ ರೂಪಿಸುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷವೇ ರಣತಂತ್ರ ರೂಪಿಸಬೇಕಾಗಿದೆ ಎಂದು ವ್ಯಂಗ್ಯವಾಡಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ