Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೇಜಸ್ವಿ ಸೂರ್ಯ, ಮೋಹನ್‌ ದಾಸ್‌ ಪೈ ಕಾರ್ಪೋರೇಟ್‌ ಏಜೆಂಟರು

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.8: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯ ತೇಜಸ್ವಿ ಸೂರ್ಯ, ಉದ್ಯಮಿ ಟಿ.ವಿ.ಮೋಹನದಾಸ್ ಪೈ ಅವರು ಕಾರ್ಪೊರೇಟ್ ಸಂಸ್ಥೆಗಳ ಏಜಂಟರು ಎಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಅಧ್ಯಕ್ಷ ಎಸ್.ನಟರಾಜ್ ಶರ್ಮಾ ಆರೋಪಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇವರು ಐಟಿ ಸಂಸ್ಥೆಗಳ ಪರ‌ ಲಾಭಿ ಮಾಡುವ ಮೂಲಕ ಬಡ ಆಟೋ‌ ಹಾಗೂ ಟ್ಯಾಕ್ಸಿ ಚಾಲಕರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇವರ ಜೊತೆಗೆ ಬೆಂಗಳೂರು ನಗರದ ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಸೇರಿಕೊಂಡು ಬಡ ಚಾಲಕರು ಹೊಟ್ಟೆ ಮೇಲೆ ಒಡೆಯುತ್ತಿದ್ದಾರೆ. ಇವರ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ 80 ಲಕ್ಷ ಮಂದಿ ಈ ಉದ್ಯಮವನ್ನು ನಂಬಿ ಬದುಕುತ್ತಿದ್ದು, ಹಲವಾರು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಕೈ ಜೋಡಿಸಿ ಸ್ಥಳೀಯ ಚಾಲಕರನ್ನು ಹತ್ತಿಕ್ಕಲು ಪ್ರಯತ್ನ ನಡೆಸುತ್ತಿದ್ದು, ಇದಕ್ಕೆ ಐಟಿ ಏಜೆಂಟರು ಕೈಜೋಡಿಸಿದ್ದಾರೆ. ಕಾರ್‌ ಪೂಲಿಂಗ್‌ ವ್ಯವಸ್ಥೆಗೆ ಚಾಲನೆ ನೀಡುವಂತೆ ತೇಜಸ್ವಿ ಸೂರ್ಯ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಐಟಿ ಕಂಪೆನಿಗಳ ಒತ್ತಾಸೆಯಂತೆ ಅವರು ಕಾರ್ಯನಿರ್ವಹಿಸುತ್ತಿರುವುದು ಸಾಬೀತಾಗಿದೆ. 11 ಲಕ್ಷ ಚಾಲಕ ಕುಟುಂಬಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ನಟರಾಜ್‌ ಶರ್ಮಾ ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಯ ಪದಾಧಿಕಾರಿಗಳಾ ನಾರಾಯಣ ಸ್ವಾಮಿ.ಜಿ, ರಘು ನಾರಾಯಣಗೌಡ, ಗಂಡಸಿ ಸದಾನಂದಸ್ವಾಮಿ, ಜಯಣ್ಣ ಹಾಗೂ ಚಂದ್ರಕುಮಾರ್.ವಿ. ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ