Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ಅಪಘಾತ : ಮೂವರ ಸಾವು 

ಸುದ್ದಿಮೂಲ ವಾರ್ತೆ

ಆನೇಕಲ್‌,ಅ.3: ಲಾರಿಗೆ ಕಾರುಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ತಾಯಿ ಸೇರಿದಂತೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಹೊರವಲಯದ ತಲಘಟ್ಟಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ನಡೆದಿದೆ.



ಪ್ರಣವಿ (6) ಕುಷವಿ (2) ತಾಯಿ ಸಿಂಧು ಮೃತರು.

ಬೆಳಗಿನ ಜಾವ ನಾಲ್ಕು ಗಂಟೆಗೆ ಈ ಘಟನೆ ನಡೆದಿದೆ. ತಮಿಳುನಾಡು ಸೇಲಂ ಮೂಲದ ಮಹೇಂದ್ರನ್ ಹಾಗೂ ಸಿಂಧು ದಂಪತಿಗಳು ಆನ್ಲೈನ್ ಮೂಲಕ ನೆಕ್ಸಸ್ ಕಾರು ಬುಕ್ ಮಾಡಿಕೊಂಡು ಬೆಳಗಿನ‌ ಜಾವ ರಾಮಮೂರ್ತಿ ನಗರದಿಂದ ಕನಕಪುರ ರಸ್ತೆಗೆ ಬಂದಿದ್ದರು. ನೈಸ್ ರಸ್ತೆಯಲ್ಲಿ ಬರುವಾಗ ಬೆಳಗಿನ ಜಾವ ನಾಲ್ಕು ಗಂಟೆಗೆ ಡಿವೈಡರ್ ಗೆ ಡಿಕ್ಕಿ ಹೊಡೆದು ನಂತರ ಲಾರಿಗೆ ಡಿಕ್ಕಿಯಾಗಿ ಕಾರು ಪಾಲ್ಟಿಯಾಗಿದೆ. ಪರಿಣಾಮ ಸ್ಥಳದಲ್ಲೇ ಪತ್ನಿ ಸಿಂಧು ಹಾಗೂ ಇಬ್ಬರು ಹೆಣ್ಣುಮಕ್ಕಳು ಮೃತಪಟ್ಟಿದ್ದಾರೆ. ಪತಿಗೆ ಗಂಭೀರ ಗಾಯಗಳಾಗಿವೆ.

ಡಿಕ್ಕಿ ರಭಸಕ್ಕೆ ಕಾರಿನಲ್ಲಿ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಗಂಭೀರ ಗಾಯಗೊಂಡಿರುವ ಪತಿ ಮಹದೇವ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ