Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭರದಿಂದ ಸಾಗಿದ ತುಂಗಭದ್ರಾಾ ಜಲಾಶಯ 20 ನೇ ಗೇಟ್ ತೆರವು

ಸುದ್ದಿಮೂಲ ವಾರ್ತೆ ಹೊಸಪೇಟೆ, ಡಿ.09:
ತುಂಗಭದ್ರಾಾ ಜಲಾಶಯದ 33 ಕ್ರಸ್‌ಟ್‌ ಗೇಟ್‌ಗಳ ಪೈಕಿ 18 ನೇ ನಂಬರ್ ಗೇಟ್‌ನ್ನು ಯಶ್ವಸಿಯಾಗಿ ತೆರವುಗೊಳಿಸಿದ ಬಳಿಕ ಇದೀಗ 20 ನೇ ಗೇಟ್ ತೆರವುಗೊಳಿಸುವ ಕಾರ್ಯ ಭರದಿಂದ ಸಾಗಿದೆ.ತುಂಗಭದ್ರಾಾ ಮಂಡಳಿ ಈ ಕಾರ್ಯ ಕೈಗೆತ್ತಿಿಕೊಂಡಿದೆ ಎಂದು ಮಂಡಳಿಯ ಅಧಿಕೃತ ಮೂಲಗಳು ತಿಳಿಸಿವೆ.
ಉಳಿದ ಗೇಟ್ ಗಳನ್ನು ಹಂತ, ಹಂತವಾಗಿ ತೆರವುಗೊಳಿಸಿದ ಬಳಿಕ ಹೊಸ ಗೇಟ್ ಅಳವಡಿಸಲು ಮಂಡಳಿ ನಿರ್ಧರಿಸಿದೆ. ಪ್ರಸ್ತುತ ಜಲಾಶಯದಲ್ಲಿ 63.998 ಟಿಎಂಸಿ ನೀರು ಸಂಗ್ರಹ ಇದೆ. ಈ ನೀರನ್ನು ಕಡಿಮೆಗೊಳಿಸಿ, 43 ಟಿಎಂಸಿ ಮಟ್ಟಕ್ಕೆೆ ತರ ಬೇಕಿದೆ. ಆಗ ಗೇಟಿನ ಪೂರ್ಣ ಭಾಗ ತೆರವುಗೊಳಿಸಲು ಸಾಧ್ಯವಾಗಲಿದೆ. ಈ ಹಿನ್ನೆೆಲೆಯಲ್ಲಿ ಜಲಾಶಯದ ನೀರಿನ ಮಟ್ಟ ಇಳಿಸುವ ಕುರಿತು ರಾಜ್ಯ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳ ಸೂಪರಿಂಟೆಂಡಿಂಗ್ ಎಂಜಿನಿಯರ್‌ಗಳ ಮಟ್ಟದ ವರ್ಚುವಲ್ ಸಭೆಯನ್ನು ಮಂಗಳವಾರ ನಡೆಸಲಾಯಿತು.
ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ಆಯಾ ರಾಜ್ಯಗಳಿಗೆ ಹರಿಸಬಹುದಾದ ನೀರನ್ನು ಕಾಲುವೆ ಹಾಗೂ ನದಿಯ ಮೂಲಕ ಹರಿಸಲು ಸಭೆ ನಿರ್ಣಯ ಕೈಗೊಂಡಿತು. ಆಯಾ ರಾಜ್ಯಗಳ ಅಗತ್ಯಕ್ಕೆೆ ಅನುಗುಣವಾಗಿ ಕುಡಿಯುವ ನೀರನ್ನು ಬಿಡುಗಡೆ ಮಾಡಲು ಸಹ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯ ತೀರ್ಮಾನದಂತೆ ಮೊದಲ ಹಂತದಲ್ಲಿ ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳಿಗೆ ಜಲಾಶಯದಿಂದ ನದಿಯ ಮೂಲಕ 5500 ಕ್ಯೂಸೆಕ್ ನೀರು ಇಂದು ಹರಿಸಲಾಗಿದೆ. ಡಿ.20ರಿಂದ ಹಳೇ ಗೇಟ್ ತೆರವು ಸೇರಿದಂತೆ ಹೊಸಗೇಟ್ ಅಳವಡಿಕೆಗೆ ಕಾರ್ಯ ಚುರುಕುಗೊಳ್ಳಲಿದೆ ಎಂದು ಮಂಡಳಿಯ ಅಧಿಕೃತ ಮೂಲಗಳು ತಿಳಿಸಿವೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ