Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟ ಉಪೇಂದ್ರ ವಿರುದ್ಧ ಎಫ್‌ ಐ ಆರ್‌ - ಕ್ಷಮೆ ಕೇಳಿದ ನಟ


ಸುದ್ದಿಮೂಲ ವಾರ್ತೆ




ಬೆಂಗಳೂರು, ಆ. 13 : ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ಮಾಡಿದ್ದ ನಟ ಉಪೇಂದ್ರ, ದಲಿತ ಸಮುದಾಯದವರ ಭಾವನೆಗಳಿಗೆ ಧಕ್ಕೆ ಆಗುವ ಗಾದೆಯೊಂದನ್ನು ಬಳಸಿದ್ದರ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ನಟನ ವಿರುದ್ಧ ದೂರು ದಾಖಲಾಗಿದೆ.


ಉಪೇಂದ್ರ ಅವರು ಕಟ್ಟಿರುವ ಪ್ರಜಾಕೀಯ ಪಕ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾಮಾಜಿಕ ಜಾಲತಾಣದಲ್ಲಿ ಲೈವ್ಗೆ ಬಂದಿದ್ದರು. ಈ ವೇಳೆ ಮಾತನಾಡುವಾಗ ‘ಊರೆಂದ ಮೇಲೆ ಹೊಲಗೇರಿ ಇದ್ದೇ ಇರುತ್ತದೆ’ ಎಂದು ಹೇಳಿದ್ದರು. ಆದರೆ ಇವರ ಮಾತಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆಗಳು ನಡೆದಿವೆ.


ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್‌ ನೀಡಿದ ದೂರಿನ ಮೇರೆಗೆ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಉಪೇಂದ್ರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ.


ದಲಿತ ಸಮುದಾಯ ಸೇರಿದಂತೆ ಎಲ್ಲೆಡೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಉಪೇಂದ್ರ ಅವರು ಕ್ಷಮೆ ಕೇಳಿದ್ದರು. “ನೇರ ಪ್ರಸಾರದಲ್ಲಿ ಬಾಯಿ ತಪ್ಪಿ ಗಾದೆ ಮಾತನ್ನು ಬಳಸಿದ್ದೆ., ಆದರೆ ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡು ಬಂದ ತಕ್ಷಣವೇ ಲೈವ್ ವಿಡಿಯೋವನ್ನು ಡಿಲೀಟ್ ಮಾಡಿದ್ದೇನೆ. ನನ್ನ ಮಾತಿಗೆ ಕ್ಷಮೆಯಿರಲಿ” ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು.


ಕ್ಷಮೆ ಕೇಳಿದ ಮೇಲೂ ಆಕ್ಷೇಪಗಳು ವ್ಯಕ್ತವಾಗುತ್ತಿರುವ ಕಾರಣ ಮತ್ತೊಂದು ಪೋಸ್ಟ್ ಮಾಡಿರುವ ಉಪೇಂದ್ರ, “ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ  ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ ? ನನಗೆ ಹುಚ್ಚೇ ? ಅದಕ್ಕೆ ಕಾರಣವಾದರೂ ಏನು ? ಅದರಿಂದ ನನಗೆ ಸಿಗುವ ಲಾಭವಾದರೂ ಏನು ? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ ? ಯಾಕೆ ಇಷ್ಟೊಂದು ದ್ವೇಷ ?” ಎಂದು ಬರೆದುಕೊಂಡಿದ್ದಾರೆ.







Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ