Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದು ಶಿಕ್ಷಣದ ಗುರಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.5: ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ 43 ಮಂದಿ ಪುರಸ್ಕೃತ ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಡಿಗ್ರಿ ಪಡೆದು, ಡಾಕ್ಟರೇಟ್ ಪಡೆದರೂ ಅವರಲ್ಲಿ ವೈಜ್ಞಾನಿಕ ಮನೋಭಾವ, ವೈಚಾರಿಕತೆ ಬೆಳೆಯದಿದ್ದರೆ, ತಲೆಯೊಳಗೆ ಮೌಡ್ಯ ತುಂಬಿಕೊಂಡಿದ್ದರೆ ಅವರನ್ನು ಸುಶಿಕ್ಷಿತರು ಎಂದು ಕರೆಯಲು ಸಾಧ್ಯವಿಲ್ಲ. ಡಿಗ್ರಿ ಪಡೆದವರೇ ಹೆಚ್ಚೆಚ್ವು ಜಾತಿವಾದಿಗಳಾದರೆ ಈ ಚಂದಕ್ಕೆ ಶಿಕ್ಷಣ ಏಕೆ ಪಡೆಯಬೇಕು ಎಂದು ಪ್ರಶ್ನಿಸಿದರು.

ಶೂದ್ರರು ಮತ್ತು ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ಹೊರಗೆ ಇಡಲಾಗಿತ್ತು. ನಮ್ಮ ಸಂವಿಧಾನ ಎಲ್ಲರಿಗೂ ಶಿಕ್ಷಣದ ಅವಕಾಶವನ್ನು ಒದಗಿಸಿತು. ಈಗ ಈ ಸಂವಿಧಾನಕ್ಕೆ ಅಪಾಯ ಬಂದೊದಗಿದೆ. ಆದ್ದರಿಂದ ಸಂವಿಧಾನವನ್ನು ರಕ್ಷಿಸಿಕೊಳ್ಳುವ ಹೊಣೆ ನಮ್ಮೆಲ್ಲರ ಮೇಲಿದೆ.

ಸ್ವಾತಂತ್ರ್ಯ ಬಂದು 76 ವರ್ಷವಾದರೂ ಶೇ ನೂರು ಸಾಕ್ಷರತೆ ಸಾಧ್ಯವಾಗಿಲ್ಲ. ಶಿಕ್ಷಣದಿಂದ ವಂಚಿತರಾದವರು ಅಸಮಾನತೆಗೆ ಬಲಿಯಾಗುತ್ತಾರೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸಾಗಬೇಕಾದರೆ ಎಲ್ಲರಿಗೂ ವೈಜ್ಞಾನಿಕ, ವೈಚಾರಿಕ ಶಿಕ್ಷಣ ದೊರೆತು ದೇಶ ಪ್ರಗತಿ ಪಥದಲ್ಲಿ ಮುನ್ನಡೆಯಬೇಕು ಎಂದರು.

ಶಿಕ್ಷಕ ವೃತ್ತಿಗೆ ಬರುವಾಗ ಎಲ್ಲಾ ಶಿಕ್ಷಕರಿಗೂ ಒಂದೇ ರೀತಿಯ ತರಬೇತಿ ಇರುತ್ತದೆ. ಆದರೆ ಬೇರೆ ಬೇರೆ ಜಿಲ್ಲೆಗಳ ಫಲಿತಾಂಶದ ಪ್ರಮಾಣ, ಶೈಕ್ಷಣಿಕ ಗುಣಮಟ್ಟ ಭಿನ್ನವಾಗಿರುವುದು ಏಕೆ ಎನ್ನುವುದನ್ನು ಪ್ರತಿಯೊಬ್ಬ ಶಿಕ್ಷಕರೂ ತಮ್ಮನ್ನು ತಾವು ಕೇಳಿಕಂಡು ದಿನದಿಂದ ದಿನಕ್ಕೆ ಉನ್ನತೀಕರಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ನಮ್ಮ ಸರ್ಕಾರ ಬಂದ ಬಳಿಕ 10 ಸಾವಿರ ಶಾಲೆಗಳಿಗೆ ಶಿಕ್ಷಕರನ್ನು ನೇಮಿಸಿದ್ದೂ ಸೇರಿ ಹಲವು ಕಾರ್ಯಕ್ರಮ ಮಾಡಿದೆವು. ಪರಿಶಿಷ್ಟ ಜಾತಿ, ವರ್ಗದ ಮಕ್ಕಳಿಗೆ ನಾವು ನಮ್ಮ ಸರ್ಕಾರದ ಅವಧಿಯಲ್ಲಿ ಲ್ಯಾಪ್ ಟಾಪ್ ನೀಡುವ ಕಾರ್ಯಕ್ರಮ ಆರಂಭಿಸಿದೆವು. ನಂತರ ಬಂದ ಸರ್ಕಾರ ಇದನ್ನು ಸ್ಥಗಿತಗೊಳಿಸಿತ್ತು. ಈಗ ಮತ್ತೆ ನಾವು ಅಧಿಕಾರಕ್ಕೆ ಬಂದು ಲ್ಯಾಪ್ ಟಾಪ್ ಕೊಡುವುದನ್ನು ಮುಂದುವರೆಸಿದ್ದೇವೆ ಎಂದರು.

ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಎಸ್.ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಹಲವು ಹಾಲಿ, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಎಸ್‌ಎಸ್‌ಎಲ್‌ಸಿವರೆಗೂ ಮೊಟ್ಟೆ

ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆಗಳಿಗೆ ಶೇ 80 ರಷ್ಟು ಮಕ್ಕಳು ತಳಸಮುದಾಯದಿಂದ ಬರುತ್ತಾರೆ. ಅವರ ಓದಿಗೆ ಅನುಕೂಲ ಆಗಲಿ ಎನ್ನುವ ಕಾರಣದಿಂದ ಕ್ಷೀರಭಾಗ್ಯ ಯೋಜನೆ ಜಾರಿ ಮಾಡಿದೆವು. ವಾರಕ್ಕೆರಡು ಮೊಟ್ಟೆ ಕೊಡುವುದನ್ನು ಎಸ್‌ಎಸ್‌ಎಲ್‌ಸಿವರೆಗೂ ಮುಂದುವರೆಸಿದೆವು. ಶೂ ಭಾಗ್ಯ ಕಲ್ಪಿಸಿದೆವು ಎಂದು ಮುಖ್ಯಮಂತ್ರಿ ನುಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ