ಪಾರು ಮಾಡಲು ಹೋದ ಆಟೋ ಚಾಲಕ ಸಾವು
ಸುದ್ದಿಮೂಲ ವಾರ್ತೆ
ಮೈಸೂರು, ಜು.28 : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಸಿಕ್ಕಿಕೊಂಡಿದ್ದವರನ್ನು ರಕ್ಷಿಸಲು ಹೋದ ಅಟೋ ಚಾಲಕ ಮತ್ತು ಕಾರಿನಲ್ಲಿ ಇದ್ದ ಒಬ್ಬರು ಮೃತಪಟ್ಟಿರುವ ದುರ್ಘಟನೆ ನಗರದ ಮಾನಂದವಾಡಿಯ ರಸ್ತೆಯ ಅಶೋಕಪುರಂನ ರೈಲ್ವೆ ವರ್ಕ್ ಶಾಪ್ ಬಳಿ ಗುರುವಾರ ತಡರಾತ್ರಿ ನಡೆದಿದೆ.
ಆಟೋ ಚಾಲಕ ರವಿ ಎಂಬುವರೇ ಮೃತಪಟ್ಟ ದುರ್ದೈವಿ. ಇದೇ ವೇಳೆ ಕಾರು ಚಾಲನೆ ಮಾಡುತ್ತಿದ್ದ ಕಿರಣ್ ಎಂಬುವರು ಸಹ ಮೃತಪಟ್ಟಿದ್ದಾರೆ.
ಘಟನೆ ನಡೆದಿದ್ದು ಹೇಗೆ ?
ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಸಹೋದರಿಯ ಮಗ ಧೀರಜ್ ಪ್ರಸಾದ್ ಗೆ ಸೇರಿದ ಕಾರು ಅಶೋಕಪುರಂನ ರೈಲ್ವೆ ವರ್ಕ್ ಶಾಪ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಬಳಿಕ ಅಪಘಾತವಾದ ಸ್ಥಳದಿಂದ ಕಾರನ್ನು ತಳ್ಳಲು ಕಾರಿನಲ್ಲಿದ್ದ ನಾಲ್ವರು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಅಲ್ಲೇ ಇದ್ದ ಆಟೋ ಚಾಲಕ ರವಿನನ್ನು ಸಹಾಯಕ್ಕೆ ಬರುವಂತೆ ಕರೆದಿದ್ದಾರೆ. ಅದರಂತೆ ರವಿ ನೆರವಿಗೆ ಧಾವಿಸಿದ್ದು, ಎಲ್ಲರೂ ಸೇರಿ ತಳ್ಳುವಾಗ ಕಾರಿನಲ್ಲಿ ಏಕಾಏಕಿ ವಿದ್ಯುತ್ ಪ್ರವಹಿಸಿದೆ. ಪರಿಣಾಮ ಕಾರು ಚಾಲನೆ ಮಾಡುತ್ತಿದ್ದ ಕಿರಣ್ ಹಾಗೂ ಸಹಾಯಕ್ಕೆ ಬಂದಿದ್ದ ಆಟೋ ಚಾಲಕ ರವಿ ಸಾವನ್ನಪ್ಪಿದ್ದಾರೆ.
ಸಂದೇಶ್, ಶಿವಕುಮಾರ್ ವಿದ್ಯುತ್ ಶಾಕ್ ನಿಂದ ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.