Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತ ದಸರಾದಲ್ಲಿ ಜನಮನ ಸೆಳೆದ ಎತ್ತಿನ ಗಾಡಿ ಮೆರವಣಿಗೆ 

ಸುದ್ದಿಮೂಲ ವಾರ್ತೆ

ಮೈಸೂರು, ಅ.20 : ಮೈಸೂರಿನಲ್ಲಿ ರೈತ ದಸರಾ ಅಂಗವಾಗಿ ಶುಕ್ರವಾರ ನಡೆದ ಅನ್ನದಾತದ ಬೃಹತ್‌ ಮೆರವಣಿಗೆಯಲ್ಲಿ ಕಲಾ ತಂಡಗಳು ಗಮನ ಸೆಳೆದವು.



ಡೊಳ್ಳು ಕುಣಿತ ಹಾಗೂ ಗಾರುಡಿ ಗೊಂಬೆಗಳು. ಹೀಗೆ . ರೈತ ದಸರಾ ಭಾಗವಾಗಿ ಅಕರ್ಷಕ ಭಾರೀ ಮೆರವಣಿಗೆಯೂ ನಡೆಯಿತು. ಸಚಿವರಾದ ಎನ್‌.ಚೆಲುವರಾಯಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ.ಮಹದೇವಪ್ಪ, ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ಮತ್ತಿತರರು ಹಸಿರು ರುಮಾಲು ಧರಿಸಿ ಕೊಂಚ ದೂರ ಮೆರವಣಿಗೆಯಲ್ಲಿ ಸಾಗಿದರು.

ಇದೇ ವೇಳೆ ಕೃಷಿ ಸಚಿವರು ಎತ್ತಿನಗಾಡಿ ಓಡಿಸಿದರು. ನಂತರ ವೈದ್ಯಕೀಯ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘದ ಸಭಾಂಗಣದಲ್ಲಿ ನಡೆದ ರೈತ ದಸರಾ ಸಮಾರಂಭದಲ್ಲಿ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು.

ಈ ವೇಳೆ ಸಚಿವ ಡಾ.ಮಹದೇವಪ್ಪ ಮಾತನಾಡಿ, ದೇಶಕ್ಕೆ ಮಾದರಿ ಆಡಳಿದ ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ಭಾಗದಲ್ಲಿ ಕೃಷಿ, ನೀರಾವರಿ, ಹೈನುಗಾರಿಕೆ ಸೇರಿದಂತೆ ಎಲ್ಲಾ ಕ್ಷೇತ್ರವನ್ನು ಪ್ರೋತ್ಸಾಹಿಸಿ ಗ್ರಾಮೀಣ ಜನರ ಬೆನ್ನುಲುಬಾದ ಕೃಷಿ ಅಭಿವೃದ್ಧಿಗೆ ಉತ್ತೇಜನ ನೀಡಿರುವುದು ಅವಿಸ್ಮರಣೀಯ ಎಂದು ಸ್ಮರಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ಕೃಷಿ ಮತ್ತು ನೀರಾವರಿ ಗಮನದಲ್ಲಿರಿಸಿ ಬಾಕ್ರನಂಗಲ್ ಅಣೆಕಟ್ಟೆ ನಿರ್ಮಿಸಲು ಸಲಹೆ ನೀಡಿದ್ದನ್ನು ಅಂದಿನ ಪ್ರಧಾನಿ ನೆಹರು ಅವರ ಸರ್ಕಾರ ಪರಿಗಣಿಸಿತ್ತು. ಲಾಲ್ ಬಹದ್ದೂರು ಶಾಸ್ತ್ರಿ ಅವರ ಕಾಲದಲ್ಲಿ ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆ ಮಾಡಿ ಆಹಾರ ಸ್ವಾವಲಂಬೆನೆಯನ್ನು ಬಲಪಡಿಸಿದರು.

ರೈತ ಸಮಸ್ಯೆಗಳ ಪರಿಹಾರಕ್ಕೆ ಹೊಸ ತಂತ್ರಜ್ಞಾನ ಮತ್ತು ವೈಜ್ಞಾನಿಕ ಉಪಾಯಗಳ ಮೂಲಕ ಕೃಷಿ ಅಭಿವೃದ್ಧಿ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ಕಾಂಗ್ರೆಸ್‌ ಸರ್ಕಾರ ಮಾಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಚಳುವಳಿಯಿಂದ ಬಂದಿದ್ದು, ರೈತರ ಸಮಸ್ಯೆಗಳು ಅವರ ಗಮನದಲ್ಲಿದೆ. ಸಂಕಷ್ಟದ ಕಾಲದಲ್ಲಿ ರೈತರ ಪರ ನಿಂತು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಡಳಿತ ನಡೆಸಲಿದ್ದಾರೆ ಎಂದು ಹೇಳಿದರು.

ಕಿಡಿಕಾರಿದ ಕೃಷಿ ಸಚಿವರು

ಈ ಮಧ್ಯೆ ರೈತ ದಸರಾದ ವೇದಿಕೆಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಕೇಂದ್ರ ಸರ್ಕಾರ ಮತ್ತು ರಾಜ್ಯದ ಸಂಸದರ ವಿರುದ್ಧ ಕಿಡಿಕಾರಿದರು. ಕಾವೇರಿ ನೀರು ಹಂಚಿಕೆ ವಿಚಾರವಾಗಿ ದೆಹಲಿಯ ಕೇಂದ್ರ ನಾಯಕರನ್ನ ಭೇಟಿಯಾಗಲು ತೆರಳಿದ್ದ ವೇಳೆ ಒಂದು ಅವಕಾಶವನ್ನು ಕಲ್ಪಿಸಿಕೊಡಲಿಲ್ಲ. ರಾಜ್ಯದ ಸಂಸದರು ಈ ಬಗ್ಗೆ ಆಸಕ್ತಿ ತೋರಲಿಲ್ಲ. ಪ್ರಧಾನಿಯನ್ನು ಭೇಟಿಯಾಗಲು ತೆರಳಿದ್ದೆವು. ಸತತ ಎರಡು ತಿಂಗಳಾದರೂ ಭೇಟಿಗೆ ಸಮಯವಕಾಶ ಕೊಡಲಿಲ್ಲ.

ಕೇಂದ್ರ ಸಚಿವರು ಹಾಗೂ ಅಧಿಕಾರಿಗಳು ಸಹ ಭೇಟಿಗೆ ಅವಕಾಶ ನೀಡಲಿಲ್ಲ. ಇದು ಒಕ್ಕೂಟ ವ್ಯವಸ್ಥೆಯಲ್ಲಿ ದುರಂತ. ಚುನಾವಣೆ ವೇಳೆ ಜನರು ಈ ಅಂಶಗಳನ್ನ ಗಮನಿಸಿ ಆಯ್ಕೆ ಮಾಡಬೇಕು. ಸುಳ್ಳು ಹೇಳುವವರ ಬಗ್ಗೆ ಜನರು ಸೂಕ್ಷ್ಮವಾಗಿ ಗಮನಿಸಬೇಕು. ವಾಸ್ತವತೆಯನ್ನ ತಿಳಿದುಕೊಳ್ಳಬೇಕು. ಈ ವಿಚಾರದಲ್ಲಿ ನಾವು ನಮ್ಮ ಪ್ರಯತ್ನ ಮಾಡಿದ್ದೇವೆ ಎಂದು ಕೇಂದ್ರ ಬಿಜೆಪಿ ನಾಯಕರು, ಸಂಸದರ ವಿರುದ್ಧ ಹರಿಹಾಯ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ