Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಲಿಕೆ ನೌಕರರ ಕ್ರೀಡಾಕೂಟಕ್ಕೆ ಮುಖ್ಯ ಆಯುಕ್ತರಿಂದ ಚಾಲನೆ

ಸುದ್ದಿಮೂಲ ವಾರ್ತೆ


ಬೆಂಗಳೂರು, ಜೂನ್‌ 8 : ಕೆಂಪೇಗೌಡ ದಿನಾಚರಣೆಯ ಪ್ರಯುಕ್ತ ಗುರುವಾರ ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆ ಮುಂಭಾಗದಲ್ಲಿರುವ ಬಿಬಿಎಂಪಿ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ 2023-24ನೇ ಸಾಲಿನ ಪಾಲಿಕೆಯ ಅಧಿಕಾರಿಗಳು ಮತ್ತು ನೌಕರರ ಕ್ರೀಡಾ ಕೂಟಕ್ಕೆ  ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ ನೀಡಿದರು.


ಬಳಿಕ ಮಾತನಾಡಿದ ಆಯುಕ್ತರು, ಎಲ್ಲಾ ಪಾಲಿಕೆ ಅಧಿಕಾರಿಗಳು ಮತ್ತು ನೌಕರರು ಹುಮ್ಮಸ್ಸಿನಿಂದ ಕ್ರೀಡಾ ಕೂಟದಲ್ಲಿ ಭಾಗವಹಿಸುತ್ತಿರುವುದು ಹರ್ಷ ತರುವ ವಿಷಯ. ಎಲ್ಲರೂ ಇದೇ ರೀತಿ ಕ್ರೀಡಾ ಹವ್ಯಾಸವನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ನಿಮ್ಮ ಜೀವನ ಶೈಲಿಯು ಶಿಸ್ತು ಬದ್ಧವಾಗಿರುತ್ತದೆ ಹಾಗೂ ನಮ್ಮ ಆರೋಗ್ಯವು ಚೆನ್ನಾಗಿರುತ್ತದೆ ಎಂದು ತಿಳಿಸಿದರು.


ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ಮಾತನಾಡಿ, ಸದರಿ ಕ್ರೀಡಾ ಕೂಟವು ಏಳು ದಿನಗಳ ಕಾಲ ನಡೆಯುತ್ತಿದ್ದು, ಪಾಲಿಕೆಯ ಎಲ್ಲಾ ಅಧಿಕಾರಿಗಳು, ನೌಕರರು ಭಾಗವಹಿಸಬೇಕು. ಎಲ್ಲರೂ ದಿನ ನಿತ್ಯದ ಕೆಲಸದ ಒತ್ತಡದಿಂದ ಬಿಡುವು ಮಾಡಿಕೊಂಡು ಭಾಗವಹಿಸಬೇಕು ಇದರಿಂದ ಆರೋಗ್ಯ ವೃದ್ಧಿಯಾಗುವುದು ಎಂದು ತಿಳಿಸಿದರು.


ಈ ಕ್ರೀಡಾ ಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪ ಆಯುಕ್ತ ಮಂಜುನಾಥ್ ಸ್ವಾಮಿ, ವೆಂಕಟರಾಜು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.




Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ