Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂಗಾರಗೊಂಡ ಕಂಠೀರವ ಕ್ರೀಡಾಂಗಣ: ಎಲ್ಲೆಡೆ ಬಿಗಿ ಭದ್ರತೆ

ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 19:  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೆ ನಗರದ ಕಂಠೀರವ ಕ್ರೀಡಾಂಗಣ ಸಜ್ಜಾಗಿದೆ.

ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಮೈಸೂರು, ಮಂಡ್ಯ, ರಾಮನಗರ, ಉತ್ತರ ಕರ್ನಾಟಕ ಹಾಗೂ ಕೋಲಾರದಿಂದ ಸಾವಿರಾರು ಮಂದಿ ಬೆಂಬಲಿಗರು, ಕಾರ್ಯಕರ್ತರು ಆಗಮಿಸುವ ನಿರೀಕ್ಷೆಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಶುಕ್ರವಾರವೇ ಕೈಗೊಳ್ಳಲಾಗಿದೆ.

ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ಕಾರ್ಯಪ್ರವೃತ್ತರಾಗಿರುವ ಪೊಲೀಸರು ಸ್ಟೇಡಿಯಂನ ಅಷ್ಟ ದಿಕ್ಕುಗಳಲ್ಲಿ ಭಾರಿ ಭದ್ರತೆ ಕೈಗೊಂಡಿದ್ದಾರೆ. ಈಗಾಗಲೇ ಸಿದ್ಧತೆ ಆರಂಭವಾಗಿದ್ದು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸಿದ್ದತೆ ಪರಿಶೀಲನೆ ನಡೆಸಿದ್ದಾರೆ.

ಸ್ಟೇಡಿಯಂನ ಎರಡು ಗೇಟ್‌ಗಳಲ್ಲಿ ವಿವಿಐಪಿ ವಾಹನಗಳಿಗೆ ಪ್ರವೇಶ ಕಲ್ಪಿಸಲಾಗಿದ್ದು ಪ್ರತ್ಯೇಕವಾಗಿ ಒಳ ಹೋಗಲು ವ್ಯವಸ್ಥೆ ಮಾಡಲಾಗುತ್ತಿದೆ. ನಗರ ಪೊಲೀಸ್ ಆಯುಕ್ತರು, ಸಂಚಾರ ವಿಭಾಗದ ವಿಶೇಷ ಆಯುಕ್ತರು, ಜಂಟಿ ಆಯುಕ್ತರು, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರಲ್ಲದೇ 8 ಮಂದಿ ಡಿಸಿಪಿಗಳು ಭದ್ರತೆಗೆ ನಿಯೋಜನೆಗೊಂಡಿದ್ದಾರೆ‌.

ಪ್ರಮಾಣವಚನ ಕಾರ್ಯಕ್ರಮವನ್ನು ತನ್ನ ಶಕ್ತಿ ಪ್ರದರ್ಶನದ ವೇದಿಕೆಯನ್ನಾಗಿಸಿ ಕಹಳೆ ಮೊಳಗಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದ್ದು ಭಾರಿ ಪ್ರಮಾಣದಲ್ಲಿ ಜನಸ್ತೋಮ ಸೇರುವ ನಿರೀಕ್ಷೆ ಇದೆ‌. ಆದ್ದರಿಂದ 1,500 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಹತ್ತು ಮಂದಿ ಎಸಿಪಿ, 28 ಮಂದಿ ಇನ್ಸ್‌ಪೆಕ್ಟರ್ಸ್‌  ನೇತೃತ್ವದಲ್ಲಿ ಭದ್ರತೆ ಇರಲಿದೆ. ಎಂಟು ಗೇಟ್‌ಗಳಲ್ಲಿ ಓರ್ವ ಎಸಿಪಿ ರ್ಯಾಂಕ್ ಅಧಿಕಾರಿಗಳು ಭದ್ರತೆಯ ನೇತೃತ್ವ ವಹಿಸಲಿದ್ದು, 500 ಮಂದಿ ಸಂಚಾರಿ ಪೊಲೀಸರು ಮೈದಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆ ನಿರ್ವಹಿಸಲಿದ್ದಾರೆ.

ಪ್ರಮಾಣವಚನ ಸಮಾರಂಭಕ್ಕೆ ಕಾಂಗ್ರೆಸ್ ಸಮಾನಮನಸ್ಕ ಪಕ್ಷಗಳ ನಾಯಕರನ್ನು ನಿನ್ನೆಯೇ ಆಹ್ವಾನಿಸಿದೆ. ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ತೇಜಸ್ವಿ ಯಾದವ್ ಆಗಮಿಸಲಿದ್ದಾರೆ. ಹೇಮಂತ್ ಸೋರೆನ್, ಸೀತಾರಾಮ್ ಯೆಚೂರಿ, ಉದ್ಧವ್ ಠಾಕ್ರೆ, ಶರದ್ ಪವಾರ್, ಮತ್ತು ಫಾರೂಕ್ ಅಬ್ದುಲ್ಲಾ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೇರಿದಂತೆ ಸಮಾನ ಮನಸ್ಕ ವಿರೋಧ ಪಕ್ಷಗಳು ಮತ್ತು ಅವರ ನಾಯಕರಿಗೂ ಆಹ್ವಾನ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸಲಾಗಿದೆ.

ಗಣ್ಯರಿಗೆ Z+ ಕೆಟಗರಿ ಭದ್ರತೆ:
ಕಾರ್ಯಕ್ರಮದಲ್ಲಿ ಭಾಗಿಯಾಗುವ ಕಾಂಗ್ರೆಸ್ ಹೈಕಮಾಂಡ್ ವರಿಷ್ಠರು ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಹಾಗೂ ವಿಐಪಿಗಳಿಗೆ Z+ ಹಾಗೂ Z ಕೆಟಗರಿಯ ಭದ್ರತೆಗೆ ಸಿದ್ಧತೆ ನಡೆಸಲಾಗಿದ್ದು ಸಿಆರ್‌ಪಿಎಫ್, ಎಎಸ್‌ಎಲ್‌ ತಂಡ ಭದ್ರತೆ ವಹಿಸಲಿದೆ. 12 ಎಸಿಪಿ, 11 ರಿಸರ್ವ್ ಪೊಲೀಸ್ ಇನ್ಸ್‌ಪೆಕ್ಟರ್ಸ್‌, 11 ರಿಸರ್ವ್ ಸಬ್ ಇನ್ಸ್‌ಪೆಕ್ಟರ್ಸ್‌, 24 ಅಸಿಸ್ಟೆಂಟ್ ರಿಸರ್ವ್ ಸಬ್ ಇನ್ಸ್‌ಪೆಕ್ಟರ್ಸ್‌, 206 ಜನ ಕಾನ್ಸ್‌ಟೆಬಲ್ಸ್ ಭದ್ರತೆಗೆ ನಿಯೋಜನೆಗೊಂಡಿದ್ದಾರೆ.

ಚಿತ್ರಶೀರ್ಷಿಕೆ...
ಪ್ರಮಾಣ ವಚನ ಬೋಧನಕೆ ಕಾರ್ಯಕ್ರಮ ನಡೆಯುವ ಕಂಠೀರವ ಕ್ರೀಡಾಂಗಣದಲ್ಲಿ ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿದ್ಧತೆಗಳನ್ನು ಪರಿಶೀಲಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ