Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವರೇ.. ನೀವೇ ಹೇಳಿದರೂ ಬಾಲಕಿಗೆ ಚಿಕಿತ್ಸೆ ದೊರೆಯಲಿಲ್ಲ

ಸುದ್ದಿಮೂಲ ವಾರ್ತೆ

ಚಿಕ್ಕಬಳ್ಳಾಪುರ, ಜು. 31: ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋಟ್ಯಂತರ ರೂಗಳನ್ನು ಖರ್ಚು ಮಾಡಿದರೂ ಸಹ ಇನ್ನೂ ಪರಿಸ್ಥಿತಿ ಮಾತ್ರ ಸುಧಾರಣೆಯಾಗಿಲ್ಲ ಎಂಬುದಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯೇ ಜೀವಂತ ಸಾಕ್ಷಿಯಾಗಿದೆ.



ಹೌದು, ಮಲ ವಿಸರ್ಜನೆಯಾಗದೆ ಹೊಟ್ಟೆನೋವಿನಿಂದ ತೀವ್ರವಾಗಿ ನರಳಾಡುತ್ತಿದ್ದ ಬಾಲಕಿಯೊಬ್ಬಳಿಗೆ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದರು.

ಆದರೆ, ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ಬಾಲಕಿಯನ್ನು ಕರೆದುಕೊಂಡು ಪೋಷಕರು ತೆರಳಿದಾಗ ಅಲ್ಲಿ ಅವರಿಗೆ ಸೂಕ್ತ ಸ್ಪಂದನೆ ನೀಡಿಲ್ಲ. ಬದಲಿಗೆ ಈಗ ಸಂಬಂಧಿಸಿದ ವೈದ್ಯರು ಇಲ್ಲ. ಹೀಗಾಗಿ ನೀವು ನಾಳೆ ಬೆಳಗ್ಗೆ ಬಂದು ಚಿಕಿತ್ಸೆ ಪಡೆಯಿರಿ ಎಂದು ಹೇಳಿ ಹೊಟ್ಟೆ ನೋವಿಗೆ ಕೆಲವೊಂದು ಚುಚ್ಚುಮದ್ದು ನೀಡಿ ವಾಪಸ್ ಕಳುಹಿಸಿ ಅಮಾನವೀಯತೆ ಮೆರೆದಿದ್ದಾರೆ. ಬಡ ರೋಗಿಗಳು ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ಬಂದರೆ ದಾಖಲು ಮಾಡಿಕೊಳ್ಳದೆ ವಾಪಸ್ ಕಳುಹಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸಾಮಾನ್ಯವಾಗಿ ಜಿಲ್ಲೆಯ ವಿವಿಧ ತಾಲೂಕುಗಳ ಕೇಂದ್ರಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಕೆಲ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ಅಗತ್ಯವಿದ್ದಾಗ ಮಾತ್ರ ಸ್ಥಳೀಯ ವೈದ್ಯರು ಜಿಲ್ಲಾ ಆಸ್ಪತ್ರೆಗೆ ರವಾನಿಸುತ್ತಾರೆ. ಆದರೆ, ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಸಮರ್ಪಕವಾಗಿ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದ್ದು ಇಂದು ಅಕ್ಷರಶಃ ಅದು ನಿಜವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ:

ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾದ ರೋಗಿಯನ್ನು ವಾಪಸ್ ಕಳುಹಿಸಲಾಗಿದೆ ಎಂದು 'ಸುದ್ದಿಮೂಲ' ಪತ್ರಿಕೆಯ ವರದಿಗಾರರ ಗಮನಕ್ಕೆ ಬಂದಾಗ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂಸಿ ಸುಧಾಕರ್ ಅವರಿಗೆ ಕರೆ ಮಾಡಿ ಈ ಬಗ್ಗೆ ವಿವರಣೆ ನೀಡಲಾಯಿತು. ಆಗ ಸಚಿವರು ಸಹ ತಕ್ಷಣಕ್ಕೆ ಸ್ಪಂದಿಸಿ ಜಿಲ್ಲಾ ಆರೋಗ್ಯ ಅಧಿಕಾರಿಗಳನ್ನು ಸಂಪರ್ಕ ಮಾಡಿ ಕೂಡಲೇ ಹೆಣ್ಣುಮಗುವಿಗೆ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಲು ಸೂಚನೆ ನೀಡಿದರು.

ಹೀಗೆ ಸಚಿವರ ಸೂಚನೆ ಮೇರೆಗೂ ಸಹ ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರಿಯಿತು. ಜಿಲ್ಲಾ ಆರೋಗ್ಯ ಅಧಿಕಾರಿಗಳು ಬಾಲಕಿಯ ಕುಟುಂಬ ಸದಸ್ಯರಿಗೆ ಕರೆ ಮಾಡಿ ತಾವು ನಾಳೆ ಬನ್ನಿ ಸಂಬಂಧಿಸಿದ ವೈದ್ಯರಿಂದ ಚಿಕಿತ್ಸೆ ಮಾಡುತ್ತೇವೆ ಎಂದು ಹೇಳಿ ಮತ್ತೆ ವಾಪಸ್ ಕಳುಹಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಆದೇಶಕ್ಕೆ ಬೆಲೆ ಕೊಟ್ಟು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಕನಿಷ್ಠ ಇಂದು ರಾತ್ರಿ ಚಿಕಿತ್ಸೆ ನೀಡಿ ಬೆಳಗ್ಗೆ ಸಂಬಂಧಿಸಿದ ವೈದ್ಯರ ಬಳಿ ಚಿಕಿತ್ಸೆ ನೀಡುವ ತಾಳ್ಮೆ ಜಿಲ್ಲಾ ಆಸ್ಪತ್ರೆಯ ವೈದ್ಯರಿಗೆ ಇಲ್ಲವೇ? ಎಂಬ ಪ್ರಶ್ನೆಗೆ ಉತ್ತರ ಇಲ್ಲಂತಾಗಿದೆ. ಬಡ ಹೆಣ್ಣು ಮಗುವಿಗೆ ಚಿಕಿತ್ಸೆ ನೀಡಿ ಎಂದು ಉಸ್ತುವಾರಿ ಸಚಿವರೇ ಖುದ್ದಾಗಿ ಸೂಚಿಸಿದರು ಸಹ ಜಿಲ್ಲಾ ಆರೋಗ್ಯ ಅಧಿಕಾರಿಗಳು ಕ್ಯಾರೆ ಎನ್ನದೆ ನಿರ್ಲಕ್ಷ ವಹಿಸಿದ್ದಾರೆಯೇ? ಎಂಬ ಅನುಮಾನ ಮೂಡಿದೆ.

ಬಡ ರೋಗಿಗಳು ಚಿಕಿತ್ಸೆಗಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಗಮನಕ್ಕೆ ತರುವ ಸ್ಥಿತಿ ನಿರ್ಮಾಣವಾಗಿರೋದು ನೋಡಿದರೆ ಬಹುಶಃ ಆರೋಗ್ಯ ಕ್ಷೇತ್ರದಲ್ಲಿ ಮತ್ತಷ್ಟು ಸುಧಾರಣೆ ಆಗಬೇಕಾಗಿದೆ ಎಂಬುದು ಮಾತ್ರ ದುರಂತವೇ ಸರಿ ಸಂಬಂಧಿಸಿದ ಹಿರಿಯ ಅಧಿಕಾರಿಗಳು ಸಚಿವರು ಗಮನಹರಿಸಿ ಜಿಲ್ಲಾ ಆಸ್ಪತ್ರೆಯಲ್ಲಿ ಬಡವರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ