Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಪೀಳಿಗೆಗೆ ಸಾಧಕರೇ ಸ್ಫೂರ್ತಿ : ರಾಜ್ಯಪಾಲರು

ಬೆಂಗಳೂರು,ನ.4 : ನಿಸ್ವಾರ್ಥದಿಂದ ಸಮಾಜಕ್ಕೆ ತಮ್ಮನ್ನು ಅರ್ಪಿಸಿಕೊಳ್ಳುವ ಮೂಲಕ, ತಮ್ಮ ಬದ್ಧತೆ, ಕಠಿಣ ಪರಿಶ್ರಮ, ಧೈರ್ಯ ಮತ್ತು ಸ್ಥೈರ್ಯದಿಂದ ಪ್ರಗತಿಗೆ ಕೊಡುಗೆ ನೀಡುತ್ತಿರುವ ಸಾಧಕರ ಸೇವೆ ನಿರಂತರವಾಗಿರಲಿ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಶಿಸಿದರು.

ನಮ್ಮ ಬೆಂಗಳೂರು ಫೌಂಡೇಶನ್ ವತಿಯಿಂದ ನಗರದಲ್ಲಿ ಆಯೋಜಿಸಲಾಗಿದ್ದ " ನಮ್ಮ ಬೆಂಗಳೂರು ಪ್ರಶಸ್ತಿ" ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಬೆಂಗಳೂರು ನಗರವು ಶಿಕ್ಷಣ, ಮಾಹಿತಿ ತಂತ್ರಜ್ಞಾನ ಹಾಗೂ ಅನೇಕ ಸ್ಟಾರ್ಟ್‌ಅಪ್‌ಗಳು ಮತ್ತು ಭಾರತೀಯ ಟೆಕ್ ಕಂಪನಿಗಳ ಉದ್ಯಮಕ್ಕೆ ಪ್ರಮುಖ ಕೇಂದ್ರವಾಗಿದೆ. ಹಿತಕರವಾದ ಹವಾಮಾನ ಮತ್ತು ಪರಿಸರದ ಕಾರಣದಿಂದ ಅತ್ಯಂತ ವಾಸಯೋಗ್ಯ ಭಾರತೀಯ ನಗರ ಎನ್ನಲಾಗಿದೆ.

ನಿವೃತ್ತ ನ್ಯಾಯಮೂರ್ತಿ ಎಂ ಎನ್ ವೆಂಕಟಾಚಲಯ್ಯ, ಡಾ. ರಘುನಾಥ್, ಅಂಕಿತ್ ಪುರಿ, ಅಲ್ಬಿನಾ ಶಂಕರ್, ಇಂದುಮತಿ ಅವರಿಗೆ ನಮ್ಮ ಬೆಂಗಳೂರು ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಈ ಸಾಧಕರೇ ಯುವಪೀಳಿಗೆಗೆ ಸ್ಫೂರ್ತಿ. ಪ್ರಶಸ್ತಿ ಪಡೆದ ಎಲ್ಲಾ ಸಾಧಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಹಾಗೂ ಸಮಾಜ, ಸಾರ್ವಜನಿಕ ಹಿತಾಸಕ್ತಿ ಮತ್ತು ದೇಶದ ಹಿತಾಸಕ್ತಿಯಲ್ಲಿ ನಿಮ್ಮ ಸೇವೆ ನಿರಂತರವಾಗಿರಲಿ ಎಂದು ರಾಜ್ಯಪಾಲರು ಹಾರೈಸಿದರು.

ಕಾರ್ಯಕ್ರಮದಲ್ಲಿ ಮೈಕ್ರೊಲೆಂಡ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್, ಎವಿಎಎಸ್ ನ ಸ್ಥಾಪಕ ಟ್ರಸ್ಟಿ ಅನಿತಾ ರೆಡ್ಡಿ, ಏಷ್ಯನ್ ನ್ಯೂಸ್ ನೆಟ್‌ವರ್ಕ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಕೆ. ಸಂಜಯ್ ಪ್ರಭು, ವಿನೋದ್ ಜೆಕವ್ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ