Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರಿಗೆ ನೌಕರರ ಮುಷ್ಕರಕ್ಕೆ ಬ್ರೇಕ್ ನೀಡಿದ ಹೈಕೋರ್ಟ್

ಸುದ್ದಿಮೂಲ ವಾರ್ತೆ

ಬೆಂಗಳೂರು, ಮಾ.23: ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ನೀಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಮಾ.24ರಿಂದ ಕರೆ ನೀಡಿದ್ದ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ.

ಸಾರಿಗೆ ನೌಕರರು ಮುಂದಿನ ಮೂರು ವಾರಗಳ ಕಾಲ ಯಾವುದೇ ರೀತಿಯ ಮುಷ್ಕರ ನಡೆಸಬಾರದು ಎಂದು ಹೈಕೋರ್ಟ್ ಗುರುವಾರ ಆದೇಶ ಮಾಡಿದೆ. ಈ ಹಿನ್ನೆಲೆಯಲ್ಲಿ ಬಸ್‌ಗಳ ಸಂಚಾರ ಬಂದ್‌ ಮಾಡಿ ಪ್ರತಿಭಟಿಸುವ ನಿರ್ಧಾರವನ್ನು ಸಾರಿಗೆ ನೌಕರರು ವಾಪಸ್ ಪಡೆದಿದ್ದಾರೆ.

ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರಿದ್ದ ಪೀಠ ಆದೇಶ ಈ ಹೊರಡಿಸಿದೆ. ಇನ್ನೂ ಮೂರು ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಆದೇಶಿಸಿದೆ.

ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮಾ.21ರಿಂದ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಆದರೆ, ಸರ್ಕಾರ ಸರ್ಕಾರ ಶೇ.15ರಷ್ಟು ವೇತನ ಹೆಚ್ಚಳ ಮಾಡಿದ ಬಳಿಕ ಮುಷ್ಕರ ವಾಪಸ್ ಪಡೆದಿದ್ದರು. ಸಾರಿಗೆ ನಿಗಮಗಳಲ್ಲಿ ಎರಡು ಬಣಗಳಿದ್ದು, ಮತ್ತೊಂದು ಬಣ ಶುಕ್ರವಾರದಿಂದ ಬಂದ್‌ಗೆ ಕರೆ ನೀಡಿತ್ತು.

ಸರ್ಕಾರಿ ನೌಕರರ ಸರಿಸಮಾನಾದ ವೇತನ ನೀಡಬೇಕು, ನಾಲ್ಕು ನಿಗಮಗಳ ನೌಕರರ ಸಂಘಕ್ಕೆ ಚುನಾವಣೆ ನಡೆಸಬೇಕು, ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನಾಲ್ಕೂ ನಿಗಮಗಳ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಮರುನೇಮಕಾತಿ ಮಾಡಿಕೊಳ್ಳುವುದು, ಮುಷ್ಕರದ ಸಮಯದಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬಸ್ಥರ ಮೇಲೆ ದಾಖಲಾಗಿರುವ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು

ಸಾರಿಗೆ ಸಂಸ್ಥೆಯಲ್ಲಿ ನಿವೃತ್ತಿಗೊಂಡಿರುವ ನೌಕರರಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ನೀಡುವುದು, ಅವರಿಗೆ ಸರಿಯಾದ ರೀತಿ ಪಿಂಚಣೆ ಸೌಲಭ್ಯವನ್ನು ಒದಗಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ