ಸುದ್ದಿಮೂಲ ವಾರ್ತೆ
ಯಾದಗಿರಿ,ಮೇ 17: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಹತ್ಯೆ ಮಾಡಿ ಪತಿ ಪೊಲೀಸರಿಗೆ ಶರಣಾದ ಘಟನೆ ಜಿಲ್ಲೆಯ ಶಹಪುರ್ ತಾಲೂಕಿನ ದೊರನಹಳ್ಳಿ ಗ್ರಾಮದಲ್ಲಿ ನಡೆದಿದೆ.
[video width="640" height="352" mp4="https://suddimoola.in/wp-content/uploads/2023/05/ಯಾದಗಿರಿ.mp4"][/video]
ಕಳೆದ ಎರಡು ವರ್ಷದಿಂದ ದೂರವಿದ್ದ ದಂಪತಿಗಳು ಬೇರೆಯಾಗಿ ಜೀವನ ಮಾಡುತ್ತಿದ್ದರು. ನಿನ್ನೆ ರಾತ್ರಿ ಪತ್ನಿ ನೋಡಲು ಬಂದ ಪತಿ ನಿಂಗಪ್ಪ ತನ್ನ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೂಡಲೇ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.