Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃತ್ಯಕ್ಕೆೆ ಬಳಸಿದ ಇನೋವಾ ಕಾರು ತಿರುಪತಿಯಲ್ಲಿ ವಶ ಹಾಡು ಹಗಲೇ ಹಣ ದರೋಡೆ: ತಿರುಪತಿಯಲ್ಲಿ ಇಬ್ಬರ ಸೆರೆ

ಸುದ್ದಿಮೂಲ ವಾರ್ತೆ ಬೆಂಗಳೂರು, ನ.20:
ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿಿ ವಾಹನವನ್ನು ಆರ್ಬಿಐ ಅಧಿಕಾರಿಗಳ ಸೋಗಿನಲ್ಲಿ ತಡೆದು 7 ಕೋಟಿ ರೂ. ದೋಚಿದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಇಬ್ಬರು ಶಂಕಿತರನ್ನು ತಿರುಪತಿಯಲ್ಲಿ ಬಂಧಿಸಿದ್ದಾರೆ.
ಇನೋವಾ ವಾಹನವನ್ನು ದುಷ್ಕರ್ಮಿಗಳು ತಿರುಪತಿಯಲ್ಲಿ ಬಿಟ್ಟು ಪರಾರಿಯಾಗಿದ್ದರು. ಅದನ್ನು ಕೂಡ ಪೊಲೀಸರು ವಶಕ್ಕೆೆ ಪಡೆದು ತನಿಖೆ ತೀವ್ರಗೊಳಿಸಿದ್ದಾರೆ.
ಬಂಧಿತರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದ ಹಿನ್ನೆೆಲೆಯಲ್ಲಿ ಹಲವು ಮಾಹಿತಿಗಳು ಲಭ್ಯವಾಗಿದ್ದು ಪೊಲೀಸರು ದರೋಡೆಕೋರರ ಬೆನ್ನಟ್ಟಿಿದ್ದಾರೆ.
ಬಂಧಿತ ಇಬ್ಬರು ಶಂಕಿತ ಆರೋಪಿಗಳನ್ನು ನಡೆಸುತ್ತಿಿರುವ ತೀವ್ರ ವಿಚಾರಣೆ ವೇಳೆ ಇಬ್ಬರಿಂದ ಸಿಸಿಬಿ ಪೊಲೀಸರಿಗೆ ಉಳಿದ ಆರೋಪಿಗಳು ಹಾಗೂ ದರೋಡೆ ಮಾಡಿದ ಹಣ ಇನ್ನಿಿತರ ಮಹತ್ವದ ಮಾಹಿತಿ ಲಭ್ಯವಾಗಿದೆ.
ದರೋಡೆಗೆ ಬಳಸಿದ್ದ ಇನ್ನೋೋವಾ ಕಾರು ತಿರುಪತಿಯಲ್ಲಿ ಬಳಿ ಪತ್ತೆೆಯಾಗಿದೆ, ಖಚಿತ ಮಾಹಿತಿಯನ್ನು ಆಧರಿಸಿ ಇನೋವಾ ಕಾರನ್ನು ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆೆ ಪಡೆದಿದ್ದಾರೆ.
ತಿರುಪತಿಯ ಬಳಿಯೇ ಇನೋವಾ ಕಾರು ಬಿಟ್ಟು ಆರೋಪಿಗಳು ಹಣದ ಸಮೇತ ಪರಾರಿಯಾಗಿದ್ದಾರೆ. ಹೀಗಾಗಿ ಆರೋಪಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿಿದ್ದಾರೆ.
ತಿರುಪತಿ ಪೊಲೀಸರ ಜೊತೆ ದಕ್ಷಿಣ ವಿಭಾಗ ಪೊಲೀಸರು ಹೋಟೆಲ್, ಲಾಡ್ಜ್, ದೇವಸ್ಥಾಾನ ಬಳಿ ಮಪ್ತಿಿಯಲ್ಲಿ ಶೋಧ ನಡೆಸಲಾಗುತ್ತಿಿದೆ.
20 ಮಂದಿ ವಿಚಾರಣೆ:
ಈ ನಡುವೆ ದರೋಡೆ ಪ್ರಕರಣದ ಸಂಬಂಧ 20 ಕ್ಕೂ ಹೆಚ್ಚು ಮಂದಿಯನ್ನು ನಗರ ಪೊಲೀಸರು ವಶಕ್ಕೆೆ ತೆಗೆದುಕೊಂಡು ವಿಚಾರಣೆ ಕೈಗೊಂಡಿದ್ದಾರೆ.
ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಎಚ್ ಡಿಎ್ ಸಿ ಬ್ಯಾಾಂಕ್ ಸಿಬ್ಬಂದಿ, ಸಿಎಂಎಸ್ ಸಿಬ್ಬಂದಿಯನ್ನು ತೀವ್ರ ವಿಚಾರಣೆ ಮಾಡಲಾಗಿದ್ದು,ಘಟನೆಯ ಸಮಯವನ್ನು ಆಧರಿಸಿ ಪ್ರಶ್ನೆೆ ಕೇಳಲಾಗುತ್ತಿಿದೆ.
ವೆಬ್ ಸೀರೀಸ್ ಪ್ರೇೇರಿತ:
ಕೃತ್ಯವು ವೆಬ್ ಸೀರೀಸ್ ಪ್ರೇೇರಿತವಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಆರೋಪಿಗಳು ದರೋಡೆಗೆ ಹಲವು ದಿನಗಳಿಂದ ಸಂಚು ರೂಪಿಸಲಾಗಿತ್ತು, ಮೂರು ಠಾಣೆಗೆ ಸೇರುವ ಸ್ಥಳದಲ್ಲಿ ವಾಹನ ಬಿಡುವುದು ಕೂಡ ಯೋಜನೆ ಆಗಿತ್ತು ಎಂಬ ಅನುಮಾನ ವ್ಯಕ್ತವಾಗಿದೆ.
ಸಿಎಂಎಸ್ ವಾಹನ ಸಿಕ್ಕಿಿದ್ದ ಮೇಲು ಸೇತುವೆ ಮೂರು ಪೊಲೀಸ್ ಠಾಣೆಗಳಿಗೆ ಗಡಿಯಾಗಿದೆ. ನಿಮ್ಹಾಾನ್‌ಸ್‌‌ನಿಂದ ಮೇಲ್ಭಾಾಗಕ್ಕೆೆ ಬಂದರೆ ಆಡುಗೋಡಿ ಠಾಣೆ ಸರಹದ್ದು, ವಾಹನದ ಎಡಬದಿಯಲ್ಲಿ ಸುದ್ದುಗುಂಟೆಪಾಳ್ಯ ಠಾಣಾ ವ್ಯಾಾಪ್ತಿಿ ಮತ್ತು ಕೃತ್ಯ ನಡೆದಿರುವುದು ಸಿದ್ದಾಪುರ ಠಾಣಾ ವ್ಯಾಾಪ್ತಿಿಯಲ್ಲಿ. ಆ ಪೈಕಿ ಸಿದ್ದಾಪುರ ಠಾಣೆ ದಕ್ಷಿಣ ವಿಭಾಗಕ್ಕೆೆ ಸೇರಿದರೆ ವಾಹನ ಸಿಕ್ಕಿಿದ್ದು ಸುದ್ದುಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಾಪ್ತಿಿಯಲ್ಲಿ. ಈ ಠಾಣೆ ಸೌತ್ ಈಸ್ಟ್ ವಿಭಾಗಕ್ಕೆೆ ಸೇರಿದ್ದು. ಹೀಗಾಗಿ ವಾಹನ ಸಿಕ್ಕ ಬಳಿಕ ಮೊದಲು ಯಾವ ಠಾಣಾ ವ್ಯಾಾಪ್ತಿಿಗೆ ಘಟನೆ ಬರಲಿದೆ ಎಂಬ ಗೊಂದಲ ಉಂಟಾಗಿದೆ.
ಠಾಣಾ ವ್ಯಾಾಪ್ತಿಿ ಗೊಂದಲ:
ಪೊಲೀಸರು ಸಾಮಾನ್ಯವಾಗಿ ತಮ್ಮ ಠಾಣೆ ಸರಹದ್ದಿನ ಆಧಾರದ ಮೇಲೆ ಕೆಲಸ ಮಾಡಲಿರುವ ಕಾರಣ, ದರೋಡೆಕೋರರ ಯೋಜನೆಯು ಸೇರಿತ್ತಾಾ ಎನ್ನುವ ಅಂಶವೂ ಇತ್ತಾಾ ಎಂಬ ಪ್ರಶ್ನೆೆ ಉದ್ಭವಿಸಿದೆ. ಹೀಗಾಗಿ, ಅನೇಕ ಸ್ಥಳಗಳಲ್ಲಿ ಇರುವಂತೆ ಪೊಲೀಸರನ್ನೇ ಗೊಂದಲಕ್ಕೆೆ ದೂಡಿ ಪರಾರಿ ಆಗುವ ಸಂಚು ಆರೋಪಿಗಳದ್ದಾಗಿತ್ತಾಾ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ