Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ವಿಧೇಯಕ ಶೀಘ್ರ ಜಾರಿ: ತಂಗಡಗಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.31: ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ವಿಧೇಯಕ 2022ನ್ನು ಜಾರಿ ಗೊಳಿಸಲು ವಿಧೇಯಕಕ್ಕೆ ಅಗತ್ಯವಾದ ನಿಯಮಗಳನ್ನು ರೂಪಿಸುವ ಪ್ರಕ್ರಿಯೆ ಜಾರಿಯಲ್ಲಿದೆ, ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಒಂದು ಉಪ ಸಮಿತಿಯನ್ನು ರಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು‌.

ಮಂಗಳವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ವಿಧೇಯಕ ಈಗಾಗಲೇ ಎರಡು ಸದನಗಳಲ್ಲೂ ಅಂಗೀಕರಗೊಂಡಿದೆ. ವಿಧೇಯಕ ಜಾರಿಗೆ ನಿಯಮಗಳನ್ನು ರೂಪಿಸಲಾಗುತ್ತಿದ್ದು, ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅವರ ನೇತೃತ್ವದ ಉಪ ಸಮಿತಿ ಮೂರು ಬಾರಿ ಸಭೆ ಕೂಡ ನಡೆಸಿದೆ.‌ ಈ ಹಿನ್ನೆಲೆಯಲ್ಲಿ ಗೃಹ ಇಲಾಖೆ ಸೇರಿದಂತೆ ಕೆಲ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ನಿಯಮ ರೂಪಿಸುವಿಕೆ ಅಂತಿಮ ಹಂತದಲ್ಲಿದೆ,ಅದು ಪೂರ್ಣಗೊಂಡ ಕೂಡಲೇ ಶೀಘ್ರವೇ ವಿಧೇಯಕ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದರು.

ಕಠಿಣ ಕ್ರಮದ ಎಚ್ಚರಿಕೆ:

ಎಂಇಎಸ್ ಸಂಘಟನೆ ಕರಾಳ ದಿನಾಚರಣೆ ಮಾಡಿದರೆ ಅದಕ್ಕೆ ಕಠಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಸಚಿವ ಶಿವರಾಜ್ ತಂಗಡಿ ಅವರು ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮದವರ‌ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಸರಳ ಭಾಷೆಯಲ್ಲಿ ಎಂಇಎಸ್ ಸಂಘಟನೆ ಅವರಿಗೆ ಹೇಳುತ್ತೇನೆ. ನಮ್ಮ ನೆಲ, ಜಲ, ಇಲ್ಲಿನ ಗಾಳಿ ಪಡೆದು ಇದೀಗ ಈ ರೀತಿ ವರ್ತಿಸುವುದು ಸರಿಯಲ್ಲ. ಇದನ್ನೇ ಮುಂದುವರೆಸಿದರೆ ಸರ್ಕಾರ ಸುಮ್ಮನಿರುವುದಿಲ್ಲ ಎಂದು ತೀಕ್ಷ್ಣವಾಗಿ ಹೇಳಿದರು.

ನೀವುಗಳು ಎಲ್ಲಿ ಇರುತ್ತೀರಾ ಅಲ್ಲಿನ ಭಾಷೆ ಗೌರವಿಸುವ ಕೆಲಸ ಮಾಡಬೇಕು. ಇಲ್ಲಿನ ಎಲ್ಲ ಸವಲತ್ತು ಪಡೆದು, ಇಂತಹ ವರ್ತನೆ ತೋರುವುದು ಸರಿಯಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ