Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಪೆ ತೋರದ ಮುಂಗಾರು: ಕೆಆರ್‌ಎಸ್‌ ಬರಿದು


ಸುದ್ದಿಮೂಲ ವಾರ್ತೆ





ಮೈಸೂರು, ಜೂ.19: ಹೋದ ವರ್ಷ ಏಪ್ರಿಲ್‌ ನಲ್ಲಿ ಮುಂಗಾರು ಅಬ್ಬರಿಸಿ ಆರ್ಭಟಿಸಿತ್ತು. ಆದರೆ ಈ ವರ್ಷ ಜೂನ್‌ ಕಳೆಯುತ್ತಿದ್ದರೂ ಮುಂಗಾರು ಮಳೆ ಕೃಪೆ ತೋರುತ್ತಿಲ್ಲ. ಇದರಿಂದ ಮೈಸೂರು ಭಾಗದ ಜನರ ಜೀವನಾಡಿಯಾಗಿರುವ ಕೃಷ್ಣರಾಜಸಾಗರ (ಕೆಆರ್‌ಸ್‌) ಜಲಾಶಯದ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಸೋಮವಾರ 79 ಅಡಿಗಳಿಗೆ ಇಳಿಕೆ ಆಗಿತ್ತು.

ಇನ್ನೊಂದು ವಾರದೊಳಗೆ ಮಳೆಯಾಗದಿದ್ದರೇ ಈ ಜಲಾಶಯದ ಕಾವೇರಿ ನೀರನ್ನು ಅವಲಂಬಿಸಿರುವ ಜನರು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಅಲ್ಲದೆ ಕೃಷಿ ಚಟುವಟಿಕೆಗಳಿಗೂ ತೊಂದರೆ ಆಗುತ್ತದೆ.

ಜಲಾಶಯದಲ್ಲಿ ಈಗ ಕೇವಲ 10.811 ಟಿಎಂಸಿ ನೀರಿದೆ. ಈ ಪೈಕಿ 3.811 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಬಹುದು. ಉಳಿದ 7 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದೆ. ಇದನ್ನು ಬಳಸುವಂತಿಲ್ಲ. ಮಳೆರಾಯ ಕೃಪೆ ಮಾಡಿದರೆ ಮಾತ್ರ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಭಾಗದ ಜನರಿಗೆ ಕುಡಿಯುವ ನೀರಿಗೆ ಅನುಕೂಲವಾಗಲಿದೆ.

ನೀರು ಅತಿ ಕಡಿಮೆಯಾದರೆ ಲಭ್ಯ ನೀರನ್ನು ಬಳಕೆ ಮಾಡಿಕೊಳ್ಳಲು, ಮುನ್ನೆಚ್ಚರಿಕೆಯಾಗಿ ಜಲಾಶಯ ನಿರ್ಮಾಣದ ವೇಳೆಯೇ ಮಾಡಿರುವ ಒಳಭಾಗದ ನಾಲೆಯಿಂದ ಈಗ ಕುಡಿಯಲು ನೀರು ಬಿಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಳೆಯಾಗದೇ ಇದ್ದರೆ ಈ ನಾಲೆಯಿಂದಲೂ ನೀರು ಬಿಡಲು ಸಾಧ್ಯವಿಲ್ಲ.

ಇಂದಿನ ನೀರಿನಮಟ್ಟ(ಜೂ. 19)

ಗರಿಷ್ಠ ಮಟ್ಟ - 124.80 ಅಡಿಗಳು

ಇಂದಿನ ಮಟ್ಟ - 79.01 ಅಡಿಗಳು

ಗರಿಷ್ಠ ಸಾಂದ್ರತೆ - 49.452 ಟಿಎಂಸಿ

ಇಂದಿನ ಸಾಂದ್ರತೆ -10.811 ಟಿಎಂಸಿ

ಒಳ ಹರಿವು - 289 ಕ್ಯೂಸೆಕ್

ಹೊರ ಹರಿವು - 3,10 ಕ್ಯೂಸೆಕ್





Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ