Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಾಳಿಂಬೆ ಗಿಡಕ್ಕೆ ಕತ್ತರಿ ಹಾಕಿದ ಕಿಡಿಗೇಡಿಗಳು

ಸುದ್ದಿಮೂಲ ವಾರ್ತೆ

ದೇವನಹಳ್ಳಿ , ನ.19: ಸಂಪಾಗಿ ಬೆಳೆದು ನಿಂತಿದ್ದ ದಾಳಿಂಬೆ ಗಿಡವನ್ನು ಕಿಡಿಗೇಡಿಗಳು ಕತ್ತರಿಸಿದ ಘಟನೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಹ್ಯಾಡಾಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವೆಂಕಟೇಗೌಡ ಎಂಬ ರೈತನಿಗೆ ಇರುವುದು 11 ಗುಂಟೆ ಜಮೀನು ಮಾತ್ರ. ಆದ್ರೆ, ಕೃಷಿಯಲ್ಲೆ ಮೇಲೆ ಬರಬೇಕು ಎಂಬ ಚಲದಿಂದ ತನ್ನ ಜಮೀನಿನ ಪಕ್ಕದ ಬೇರೆಯವರ ಜಮೀನನ್ನು ಲೀಸ್ಗೆ ತೆಗೆದುಕೊಂಡು ಸುಮಾರು ಒಂದು ಎಕರೆ ಜಮೀನಿನಲ್ಲಿ ದಾಳಿಂಬೆ ಬೆಳೆಯನ್ನು ಬೆಳೆದಿದ್ದಾನೆ. ಇನ್ನು ಸಂಪಾಗಿ ಬಂದಿದ್ದ ದಾಳಿಂಬೆಗೆ ಯಾರೋ ಕಿಡಿಗೇಡಿಗಳ ಕಣ್ಣು ಬಿದ್ದಿದ್ದು, ರಾತ್ರೋರಾತ್ರಿ ರೈತನ ತೋಟಕ್ಕೆ ನುಗ್ಗಿದ ಕಿಡಿಗೇಡಿಗಳು ದಾಳಿಂಬೆ ಗಿಡ ಬುಡಗಳನ್ನು ಕಟಾವು ಮಾಡಿ ಎಸ್ಕೆಪ್ ಆಗಿದ್ದಾರೆ.

ಒಂದು ಎಕರೆ ಭೂಮಿಯಲ್ಲಿ ಸುಮಾರು 400 ದಾಳಿಂಬೆ ಗಿಡಗಳನ್ನು ರೈತ ವೆಂಕಟೇಗೌಡ ಬೆಳೆದಿದ್ದರು. ಸುಮಾರು ಒಂದು ವರ್ಷ 2 ತಿಂಗಳಿನ ದಾಳಿಂಬೆ ಗಿಡ ಇದಾಗಿದ್ದು, ಒಂಬತ್ತು ತಿಂಗಳು ಹೋಗಿದ್ದರೆ ಒಳ್ಳೆಯ ಫಸಲು ಸಿಕ್ಕುತ್ತಿತ್ತು. ಆದ್ರೆ, ಕಿಡಿಗೇಡಿಗಳು 200 ಗಿಡಗಳ ಕಟ್ ಮಾಡಿದ್ದಾರೆ. ಇದರಿಂದ ರೈತನಿಗೆ ಸುಮಾರು ಐದರಿಂದ 6 ಲಕ್ಷ ಲಾಸ್ ಆಗಿದೆ. ದಾಳಿಂಬೆ ಗಿಡಗಳನ್ನ ಪೋಷಿಸಲು ವರ್ಷಾನುಗಟ್ಟಲೇ ಔಷಧಿ, ಕಳೆ ತೆಗೆಯುವುದು ಸೇರಿದಂತೆ ಲಕ್ಷಾಂತರ ಬಂಡವಾಳ ಹಾಕಿದ್ದರು. ಆದರೆ, ರಾತ್ರೋರಾತ್ರಿ ಕಿಡಿಗೇಡಿಗಳು ದಾಳಿಂಬೆ ನಾಶದಿಂದ ರೈತನ ಕುಟುಂಬಕ್ಕೆ ದಿಕ್ಕು ತೋಚದಂತಾಗಿದೆ. ಕಟಾವು ಮಾಡಿರೋ ಗಿಡಗಳನ್ನ ಹಿಡಿದುಕೊಂಡು ರೈತನ ಕುಟುಂಬ ಕಣ್ಣಿರಾಕಿದೆ. ಇನ್ನು ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ