Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಯಚರಣೆ ನಡುವೆ ಮೇಕೆ ತಿಂದ ಹುಲಿ

ಸುದ್ದಿಮೂಲ ವಾರ್ತೆ

ಮೈಸೂರು, ನ. 04:ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಮಹದೇವನಗರ ಗ್ರಾಮದಲ್ಲಿ ಹಸು, ಕುರಿಗಳನ್ನು ಬಲಿ ಪಡೆದು ಜನರ ಮೇಲೆ ದಾಳಿ ನಡೆಸುತ್ತಿರುವ ಹುಲಿ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಆದರೂ ಹುಲಿ ಸಿಗದೇ ಅರಣ್ಯ ಇಲಾಖೆ ಸಿಬ್ಬಂದಿಗೆ ಚಳ್ಳೇಹಣ್ಣು ತಿನ್ನಿಸುತ್ತಿದೆ.

ಮಹದೇವನಗರ ಗ್ರಾಮದ ಸುತ್ತಮುತ್ತಲಿನ 7 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಸಾಕಾನೆಗಳ ಸಹಕಾರದಿಂದ ಹುಲಿ ಸೆರೆಗೆ ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಯತ್ತಿದೆ. ಈ ನಡುವೆ ಹುಲಿ ಮತ್ತೆ ಮೇಕೆಯನ್ನು ತಿಂದು, ಮತ್ತಷ್ಟು ಆತಂಕ ಸೃಷ್ಟಿಸಿದೆ. ಆರ್.ಎಫ್.ಒ. ನಾರಾಯಣರಾವ್‌ ಮತ್ತು ಎಸಿಎಫ್ ಪರಮೇಶ್ ನೇತೃತ್ವದಲ್ಲಿ 30 ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಮಹದೇವ ನಗರದ ವೀರಭದ್ರ ಬೋವಿ ಅವರ ಮನೆ ಮೇಲೆ ದಾಳಿ ನಡೆಸಿ ನಂತರ ಸನಿಹದ ಜಮೀನಿನಲ್ಲಿ ರಾಜಾರೋಷವಾಗಿ ಓಡಾಡಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿಂದೆ ಹಾದನೂರು ಒಡೆಯನಪುರ ಗ್ರಾಮದಲ್ಲಿ ವ್ಯಕ್ತಿಯನ್ನ ಹುಲಿ ಬಲಿ ಪಡೆದಿತ್ತು. ಆಗ ನಡೆಸಿದ ಕಾರ್ಯಾಚರಣೆಯಲ್ಲಿ ಹುಲಿ ಸೆರೆ ಸಿಕ್ಕಿರಲಿಲ್ಲ.

ಇದೀಗ ಮಹದೇವನಗರದಲ್ಲಿ ಇದೇ ರೀತಿ ದಾಳಿ ನಡೆಸಿ ದನಗಾಹಿಯನ್ನ ಗಾಯಗೊಳಿಸಿದೆ.

ಈಗಾಗಲೇ ಹತ್ತು ಸಿಸಿ ಕ್ಯಾಮರಾಗಳನ್ನ ಬಳಸಿಕೊಳ್ಳಲಾಗಿದ್ದು ಇನ್ನೂ ಹತ್ತು ಕ್ಯಾಮರಾ ಬಳಸಿಕೊಂಡು, ಸಾಕಾನೆಗಳಾದ ಪಾರ್ಥ ಹಾಗೂ ಧರ್ಮ ಆನೆಗಳನ್ನು ಕಾರ್ಯಾಚರಣೆಗೆ ತೊಡಗಿಸಿಕೊಳ್ಳಲಾಗಿದೆ.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ