Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳಮಾಚನಹಳ್ಳಿ ಗ್ರಾಮದ ಗಂಗಮ್ಮ ದೇವಾಲಯದಲ್ಲಿಕಳ್ಳತನ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಜು 19 : ಮಳಮಾಚನಹಳ್ಳಿ ಗ್ರಾಮದ ಗ್ರಾಮ ದೇವತೆಯಾದ ಗಂಗಮ್ಮ ತಾಯಿ ದೇವಾಲಯದಲ್ಲಿ ಕಳ್ಳತನ ನಡೆದಿದೆ.

ಹಲವಾರು ವರ್ಷಗಳಿಂದ ದೇಗುಲವಿಲ್ಲದೆ ಇದ್ದು ಭಕ್ತಾದಿಗಳ ಸಹಕಾರದಿಂದ ವರ್ಷದ ಹಿಂದೆ ಸುಂದರವಾದ ದೇವಾಲಯ ನಿರ್ಮಿಸಲಾಗಿತ್ತು. ದೇವರಿಗೆ ವಿಶೇಷ ಪೂಜೆಗಳು ನಡೆಯುತ್ತಿದ್ದು ದೇವಾಲಯದ ಅಭಿವೃದ್ಧಿಗೆ ದೇವಾಲಯದಲ್ಲಿ ಹುಂಡಿಯನ್ನು ಇಟ್ಟಿದ್ದರು.

ಭಕ್ತಾದಿಗಳು ಮಂಗಳಾರತಿ ತಟ್ಟೆಗೆ ಹಾಕಿದಂತಹ ಹಣವನ್ನು ಸಹ ಹುಂಡಿಯಲ್ಲೆ ಹಾಕುತ್ತಿರುವುದರಿಂದ ಹುಂಡಿಗೆ ಹಣ ಹೆಚ್ಚಿಗೆ ಸಂಗ್ರಹವಾಗುತ್ತಿತ್ತು. ಇದನ್ನೇ ತಮ್ಮ ಗುರಿಯಾಗಿಟ್ಟುಕೊಂಡ ಕಳ್ಳರು ಮಂಗಳವಾರ ರಾತ್ರಿ ದೇವಾಲಯದಎಲ್ಲಿ ತಮ್ಮ ಕೈ ಚಳಕ ತೋರಿಸಿದ್ದಾರೆ. ದೇವಾಲಯಕ್ಕೆ ಸಿ ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು,ಇದರಲ್ಲಿ ಎರಡು ಸಿಸಿ ಕ್ಯಾಮೆರಾ ಗಳನ್ನು ನಾಶ ಮಾಡಿ ದೇವಾಲಯದ ಬಾಗಿಲು ಒಡೆದು ಒಳಹೊಕ್ಕಿ ಉಂಡಿ ಹೊಡೆದು ಹಣದೋಚಿದ್ದಾರೆ.

ದೇವರಿಗೆ ಹಾಕಿದಂತಹ ಮಾಂಗಲ್ಯ ಸರ, ಬೆಳ್ಳಿ ಕಿರೀಟ, ಮುಖವಾಡ,ಹಾಗೂ ಬಂಗಾರದ ನೆಕ್ಲೆಸ್ ತೆಗೆದುಕೊಂಡಂತಹ ಕಳ್ಳರು ಪವಾಡ ಎಂಬಂತೆ ಅಲ್ಲೇ ಬಿಸಾಡಿ ಹೋಗಿದ್ದಾರೆ. ಬುಧವಾರ ಬೆಳಗ್ಗೆ ದೇವಾಲಯದ ಅರ್ಚಕರಾದ ಗ್ರಾಮದ ಮುನಿಕೃಷ್ಣರವರು ದೇವಾಲಯಕ್ಕೆ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣ ಗ್ರಾಮಸ್ಥರಿಗೆ ತಿಳಿಸಿ ನಂತರ ಪೊಲೀಸರಿಗೆ ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಪರಿಶೀಲನೆ ಮಾಡಿ, ಶ್ವಾನದಳ ಆಗಮಿಸಿ ಪರಿಶೀಲನೆ ಮಾಡುವವರೆಗೂ ದೇವಾಲಯದ ಒಳಗಡೆ ಯಾರು ಹೋಗಬಾರದೆಂದು ಸದ್ಯಕ್ಕೆ ದೇವಾಲಯದ ಬಾಗಿಲು ಮುಚ್ಚಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ