Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈ ಬಾರಿ ಸಮಾಜಮುಖಿ ಚಿತ್ರಗಳ ಪ್ರದರ್ಶನ

ಸುದ್ದಿಮೂಲ ವಾರ್ತೆ

ಮೈಸೂರು, ಅ.9:ವಿಶ್ವವಿಖ್ಯಾತ ದಸರಾ ಅಂಗವಾಗಿ ನಡೆಯುವ ದಸರಾ ಚಲನಚಿತ್ರೋತ್ಸವ ಅ.16 ರಿಂದ 22 ರವರೆಗೆ ನಗರದ ನಾಲ್ಕು ಕಡೆ ನಡೆಯಲಿದೆ.

ಈ ಬಾರಿ ಸಾಮಾಜಿಕ ಸಂದೇಶ ಸಾರುವ ಸಮಾಜಮುಖಿ ಚತ್ರಗಳ ಪ್ರದರ್ಶನಕ್ಕೆ ಆದ್ಯತೆ ನೀಡಿದ್ದು, ಚಿತ್ರಗಳು ನಗರದ ಎಂ.ಜಿ. ರಸ್ತೆಯ ಮಾಲ್‌ ಆಫ್‌ ಮೈಸೂರ್‌ನ ಐನಾಕ್ಸ್‌ ಹಾಗೂ ಜಯಲಕ್ಷ್ಮಿಪುರಂನ ಬಿಎಂ ಹ್ಯಾಬಿಟೆಟ್ ಮಾಲ್‌ ನಲ್ಲಿ ಪ್ರದರ್ಶವಾಗುತ್ತವೆ.

ಸೋಮವಾರ ದಸರಾ ಚಲನಚಿತ್ರೋತ್ಸವದ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಚಿತ್ರೋತ್ಸವ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಎಂ.ಕೆ. ಸವಿತಾ ಅವರು, ಸದಭಿರುಚಿಯ, ಸಾಮಾಜಿಕ ಸಂದೇಶ ಸಾರುವ ಹಾಗೂ ರಾಷ್ಟ್ರ ಪ್ರಶಸ್ತಿ ಪಡೆದ 112 ಚಲನಚಿತ್ರಗಳನ್ನು ಪ್ರದರ್ಶಿಸಲಾಗುವುದು. ಇದಕ್ಕಾಗಿ ತಯಾರಿ ಮಾಡಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಅ.15ರಂದು ಬೆಳಿಗ್ಗೆ 11.30ಕ್ಕೆ ಕಲಾಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಉದ್ಘಾಟಿಸುವರು. ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ತಾರಾ ದಂಪತಿ ಕೃಷ್ಣ–ಮಿಲನಾ ನಾಗರಾಜ್‌, ನಟಿಯರಾದ ಮಾನ್ವಿತಾ ಕಾಮತ್, ಮಯೂರಿ ಹಾಗೂ ವೈಭವಿ ಶಾಂಡಿಲ್ಯ ಭಾಗವಹಿಸುವರು. ‘ಹಾಸ್ಯ ಚಕ್ರವರ್ತಿ’ ಎಂದೇ ಖ್ಯಾತಿ ಗಳಿಸಿದ್ದ ನಟ ನರಸಿಂಹರಾಜು ಅವರ 100ನೇ ಜನ್ಮ ದಿನದ ಅಂಗವಾಗಿ ಅವರ ಪುತ್ರಿ ಸುಧಾ ನರಸಿಂಹರಾಜು ಅವರನ್ನು ಗೌರವಿಸಲಾಗುವುದು. ಅಂದು ಬೆಳಿಗ್ಗೆ 10ರಿಂದ ಚಲನಚಿತ್ರ ಸಂಗೀತ ನಿರ್ದೇಶಕ, ನಟ ಸಾಧುಕೋಕಿಲಾ ಹಾಗೂ ತಂಡದಿಂದ ಸಂಗೀತ ಮತ್ತು ಮನರಂಜನಾ ಕಾರ್ಯಕ್ರಮ ನಡೆಯಲಿದೆ’ ಎಂದು ಮಾಹಿತಿ ನೀಡಿದರು.

ಮೇರು ನಟರಾದ ರಾಜ್‌ಕುಮಾರ್‌, ವಿಷ್ಣುವರ್ಧನ್‌, ಅಂಬರೀಷ್ ಹಾಗೂ ಶಂಕರ್‌ನಾಗ್ ಸಿನಿಮಾಗಳನ್ನು ವೀಕ್ಷಿಸಬಹುದಾಗಿದೆ. ಮಕ್ಕಳ ಸಿನಿಮಾಗಳೂ ಇರಲಿವೆ. ರಾಷ್ಟ್ರೀಯ ಪ್ರಶಸ್ತಿ ಪಡೆದ ಸಿನಿಮಾಗಳ ನಿರ್ದೇಶಕರೊಂದಿಗೆ ಸಂವಾದಕ್ಕೆ ಅವಕಾಶವಿದೆ. ಇನ್ನೂ ತೆರೆ ಕಾಣದ ಐದು ಚಲನಚಿತ್ರಗಳನ್ನೂ ಪ್ರದರ್ಶಿಸಲಾಗುವುದು’ ಎಂದರು.

ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಸಂಬಂಧ ನಡೆಸಲಾಗಿದ್ದ ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ದ ಹತ್ತನ್ನು ಪ್ರದರ್ಶಿಸಲಾಗುವುದು. ಅ.20ರಂದು ಐನಾಕ್ಸ್‌ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮೊದಲ ಮೂರು ಬಹುಮಾನಗಳನ್ನು ನೀಡಲಾಗುವುದು. ಅತ್ಯುತ್ತಮ ಸಂಕಲನ, ಛಾಯಾಗ್ರಹಣ ಮಾಡಿದವರಿಗೂ ಬಹುಮಾನ ಕೊಡಲಾಗುವುದು. ಈ ಕಾರ್ಯಕ್ರಮದಲ್ಲಿ ನಟಿ ಮಿಲನಾ ಭಾಗವಹಿಸುವರು ಎಂದು ತಿಳಿಸಿದರು.

‘ನರಸಿಂಹರಾಜು ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸತ್ಯಹರಿಶ್ಚಂದ್ರ ಮತ್ತು ಶ್ರೀಕೃಷ್ಣದೇವರಾಯ ಚಲನಚಿತ್ರವನ್ನು ಪ್ರದರ್ಶಿಸಿ ಅವರಿಗೆ ಗೌರವ ಸಲ್ಲಿಸಲಾಗುವುದು’ ಎಂದರು.

ಪಾಸ್‌ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರಿಗೆ 500 ರು. ಹಾಗೂ ವಿದ್ಯಾರ್ಥಿಗಳಗೆ 300 ರು. ನಿಗದಿಪಡಿಸಲಾಗಿದೆ. ಈ ಪಾಸ್ ಪಡೆದವರು ಎಲ್ಲ ಸಿನಿಮಾಗಳನ್ನೂ ವೀಕ್ಷಿಸಬಹುದಾಗಿದೆ. ಜೊತೆಗೆ, ಸಿನಿಮಾಗಳ ಮಾಹಿತಿಯ ಕಿರುಹೊತ್ತಿಗೆ ನೀಡಲಾಗುವುದು. ಅ.10ರಿಂದ ಆನ್‌ಲೈನ್‌ನಲ್ಲೂ ಟಿಕೆಟ್ ಖರೀದಿಗೆ ಅವಕಾಶವಿದೆ. ದಿನದ ಪಾಸ್‌ ಅನ್ನು 100 ರೂ. ಕೊಡಲಾಗುವುದು. ರಿಯಾಯ್ತಿ ದರದಲ್ಲಿ ಸಿನಿಮಾ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ’ ಎಂದು ತಿಳಿಸಿದರು.

ಉಪ ಸಮಿತಿಯ ಕಾರ್ಯಾಧ್ಯಕ್ಷೆ ವಿ. ಪ್ರಿಯದರ್ಶಿನಿ, ಕಾರ್ಯದರ್ಶಿ ಡಿ. ಅಶೋಕ್‌ಕುಮಾರ್‌ ಹಾಗೂ ಸಹ ಕಾರ್ಯದರ್ಶಿ ಟಿ.ಕೆ.ಹರೀಶ್‌ . ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ