Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿಯ ರೈತ ಮುಖಂಡರ ಸಭೆಯಲ್ಲಿ ಚಿಂತನೆ

ಸುದ್ದಿಮೂಲ ವಾರ್ತೆ

ಮೈಸೂರು, ನ.6 : ಬರುವ 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶದಲ್ಲಿ ಒಮ್ಮೆ ರೈತರ ಸಾಲ ಮನ್ನಾ ಮಾಡುವ ಮತ್ತು ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ, ಕಾನೂನು ಜಾರಿ ಮಾಡುವವರಿಗೆ ಬೆಂಬಲ ನೀಡುವ ಬಗ್ಗೆ ಸೋಮವಾರ ದೆಹಲಿಯಲ್ಲಿ ನಡೆದ ಸಂಯುಕ್ತ ಕಿಸಾನ್ ಮೋರ್ಚಾ ಸಭೆಯಲ್ಲಿ ಚಿಂತನೆ ನಡೆಸಲಾಯಿತು.

ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳ ರೈತ ಪ್ರತಿನಿಧಿಗಳು ಭಾಗವಹಿಸಿದ್ದ ಸಭೆಯಲ್ಲಿ ಎಲ್ಲಾ ಕೃಷಿ ಉತ್ಪನ್ನಗಳಿಗೆ ಕಡ್ಡಾಯವಾಗಿ ಬೆಳೆ ವಿಮೆಯನ್ನು ಜಾರಿಗೊಳಿಸುವ, 60 ವರ್ಷ ಪೂರೈಸಿದ ರೈತರಿಗೆ ತಿಂಗಳಿಗೆ ಕನಿಷ್ಠ 5ಸಾವಿರ ಪಿಂಚಣಿ ನೀಡುವವರಿಗೆ ಬೆಂಬಲ ಬಗ್ಗೆ ಚರ್ಚಿಸಿ, ಕೃಷಿಪಂಪ್ ಸೆಟ್‌ ವಿದ್ಯುತ್ ಖಾಸಗಿಕರಣ ನೀತಿಯನ್ನು ಕೇಂದ್ರ ಸರ್ಕಾರ ಕೈ ಬಿಡುವಂತೆ ಒತ್ತಾಯಿಸಲಾಯಿತು.

ಕರ್ನಾಟಕದಿಂದ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ರೈತ ಕುರುಬೂರು ಶಾಂತಕುಮಾರ್, ಧರ್ಮರಾಜ್ ,ದೇವನೂರು ವಿಜೇಂದ್ರ ಚುಂಚರಾಯನಹುಂಡಿ ಗಿರಿ, ಮಹದೇವಸ್ವಾಮಿ, ಪಂಜಾಬ್ ಜಗಜಿತ್ ಸಿಂಗ್ ದಲೈವಾಲಾ, ಮಧ್ಯ ಪ್ರದೇಶದ ಶಿವಕುಮಾರ್ ಕಕ್ಕ, ಹರಿಯಾಣದ ಅಭಿಮನ್ಯುಕೊಹರ್, ಕೇರಳ ಕೆ ವಿ ಬಿಜು, ಗುಜರಾತಿನ ಜೆ ಕೆ ಪಟೇಲ್ಉತ್ತರ ಪ್ರದೇಶ ಒರಿಸ್ಸಾ ಆರುಣಕುಮಾರ ಹಿಮಾಚಲ ಪ್ರದೇಶ ಮಹಾರಾಷ್ಟ್ರ ಬಿಹಾರ್ ಮುಂತಾದ ರಾಜ್ಯಗಳ ರೈತ ಮುಖಂಡರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ