Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಸ್ತಿ ವಿವಾದ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಸುದ್ದಿಮೂಲ ವಾರ್ತೆ

ಮೈಸೂರು, ಜೂ. 23 : ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದಿದೆ.

ಪತಿ ಮಹಾದೇವಸ್ವಾಮಿ (42), ಪತ್ನಿ ಸವಿತಾ(33) ಹಾಗೂ ಮಗಳು ಸಿಂಚನಾ(15) ಮೃತ ದುರ್ದೈವಿಗಳು‌. ಶುಕ್ರವಾರ ಬೆಳಗ್ಗೆ ಈ ದುರ್ಘಟನೆ ನಡೆದಿದೆ.

ಡೆತ್‌ ನೋಟ್‌ ಪತ್ತೆ

ಡೆತ್‌ ನೋಟ್‌ ಸಹ ಬರೆದಿಟ್ಟಿದ್ದು, ಮೃತ ತನ್ನ ಅಕ್ಕ- ತಂಗಿಯರ ಹೆಸರು ಉಲ್ಲೇಖಿಸಿ ಇವರಿಗೆಲ್ಲಾ ಶಿಕ್ಷೆ ಆಗಬೇಕು ಎಂದು ಕೋರಿಕೊಂಡಿದ್ದಾರೆ. ಮಹಾದೇವಸ್ವಾಮಿ ಮೂಲತಃ ಕೃಷಿಕರಾಗಿದ್ದು, ಅವರ ಪತ್ನಿ ಸವಿತಾ ಟೈಲರಿಂಗ್ ಮಾಡುತ್ತಿದ್ದರಂತೆ. ಇವರಿಗೆ ಇಬ್ಬರು ಪುತ್ರಿಯರಿದ್ದು ಓರ್ವ ಪುತ್ರಿ ಕಾಲೇಜು ವ್ಯಾಸಂಗ ಮಾಡುತ್ತಾ ತಾತನ ಮನೆಯಲ್ಲಿದ್ದಾರೆ. ಕಿರಿಯ ಮಗಳು ಸಿಂಚನಾ ತಂದೆ ಬಳಿ ಇದ್ದು, 9 ನೇ ತರಗತಿ ಓದುತ್ತಿದ್ದು, ಅಪ್ಪ-ಅಮ್ಮನ ಜೊತೆ ಇದ್ದಳು‌. ಸದ್ಯಕ್ಕೆ ಮೂವರು ಸಾವಿಗೆ ಶರಣಾಗಿದ್ದಾರೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಬೆಚ್ಚಿ ಬಿದ್ದ ಗ್ರಾಮ

ಈ ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ. ಮೇಲ್ನೋಟಕ್ಕೆ ಹೆಂಡತಿ ಮತ್ತು ಮಗಳು ಮೊದಲು ಸಾವಿಗೆ ಶರಣಾಗಿದ್ದು, ಬಳಿಕ ಮಾಹದೇವಸ್ವಾಮಿ ನೇಣಿಗೆ ಕೊರಳೊಡ್ಡಿದ್ದಾರೆ. ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಜಿಲ್ಲಾ ಎಸ್ಪಿ ಪದ್ಮಿನಿ ಸಾಹು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆ ತಡೆಗಟ್ಟಲು ಮತ್ತು ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ಸಹಯೋಗದೊಂದಿಗೆ SAHAI ಸಹಾಯವಾಣಿ ಕಾರ್ಯನಿರ್ವಹಿಸುತ್ತಿದೆ. ಸಂಪರ್ಕಸಂಖ್ಯೆ: 080 - 25497777

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ