Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇ.ವಿ ಬ್ಯಾಟರಿ ಉತ್ಪಾದನೆ: ಐಬಿಸಿ ಜತೆ ಒಡಂಬಡಿಕೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.1: ಮರುಬಳಕೆ ಮಾಡಬಹುದಾದ ಎಲೆಕ್ಟ್ರಿಕ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್‌ ಬ್ಯಾಟರಿ ಕಂಪನಿ (ಐಬಿಸಿ) ಮತ್ತು ರಾಜ್ಯ ಸರಕಾರ 8,000 ಕೋಟಿ ರೂ. ಹೂಡಿಕೆಗೆ ಅವಕಾಶ ಮಾಡಿಕೊಡುವ ಒಡಂಬಡಿಕೆಗೆ ಮಂಗಳವಾರ ಇಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಸಮ್ಮುಖದಲ್ಲಿ ಅಂಕಿತ ಹಾಕಿದವು.

ಸರಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಐಬಿಸಿ ಇಂಡಿಯಾ ಪರವಾಗಿ ಅದರ ಭಾರತದ ವ್ಯವಹಾರಗಳ ಮುಖ್ಯಸ್ಥ ವೆಂಕಟೇಶ ವಲ್ಲೂರಿ ಸಹಿ ಹಾಕಿದರು.

ಮರುಬಳಕೆಗೆ ಬರುವಂಥ ಲಿಥಿಯಾನ್‌ ಬ್ಯಾಟರಿಗಳ ಉತ್ಪಾದನೆಯನ್ನು ಈ ಕಂಪನಿಯು ಇನ್ನು ಒಂದು ವರ್ಷದಲ್ಲಿ ರಾಜ್ಯದಲ್ಲಿ ಪ್ರಾರಂಭಿಸಲಿದೆ. ಈ ಉದ್ದೇಶಕ್ಕಾಗಿ ಕಂಪನಿಯ ಕೋರಿಕೆಯಂತೆ ಬೆಂಗಳೂರು ಗ್ರಾಮಾಂತರ ವಲಯದಲ್ಲಿ 100 ಎಕರೆ ಜಮೀನನ್ನು ಕೊಡಲಿದೆ. ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಈ ಕಂಪನಿಯೊಂದಿಗೆ ಮೂರು ಸುತ್ತು ಮಾತುಕತೆ ನಡೆಸಿ, ರಾಜ್ಯದಲ್ಲೇ ಹೂಡಿಕೆ ಮಾಡುವಂತೆ ಮನದಟ್ಟು ಮಾಡಿಕೊಡಲಾಗಿತ್ತು ಎಂದು ಸಚಿವರು ತಿಳಿಸಿದ್ದಾರೆ.

ಈ ಕಂಪನಿಯು ಇಂತಹ ಬ್ಯಾಟರಿಗಳನ್ನು ದಕ್ಷಿಣ ಕೊರಿಯಾದಲ್ಲಿ ಪರೀಕ್ಷಾರ್ಥವಾಗಿ ತಯಾರಿಸುವ ಘಟಕವನ್ನು ಹೊಂದಿದ್ದು, ಅದು ಕೂಡ ಸದ್ಯದಲ್ಲೇ ಕಾರ್‍ಯಾರಂಭ ಮಾಡಲಿದೆ. ಅತ್ಯುತ್ತಮ ಬ್ಯಾಟರಿಗಳ ಉತ್ಪಾದನೆಗೆ ಡ್ರೈರೂಮ್‌ ಮತ್ತು ಕ್ಲೀನ್‌ ರೂಮ್‌ಗಳನ್ನು ಕಂಪನಿ ಸ್ಥಾಪಿಸಲಿದೆ. ಇದು ರಾಜ್ಯದಲ್ಲಿ ಇಂತಹ ಎರಡನೇ ಘಟಕವಾಗಿದ್ದು, ಈ ಕ್ಷೇತ್ರದಲ್ಲಿ ರಾಜ್ಯವು ಇಡೀ ದೇಶಕ್ಕೇ ಅಗ್ರಸ್ಥಾನದಲ್ಲಿದೆ ಎಂದು ಅವರು ವಿವರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್‌ ಕೃಷ್ಣ, ಐಬಿಸಿ ಸಂಸ್ಥಾಪಕ ಮತ್ತು ಸಿಇಒ ಡಾ.ಪ್ರಿಯದರ್ಶಿ ಪಾಂಡಾ, ಕಂಪನಿಯ ಸಿಒಒ ಶಶಿ ಕುಪ್ಪಣ್ಣಗಾರಿ ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ