Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಲೈಮಹದೇಶ್ವರ ಬೆಟ್ಟ ಕಾಡಿನಲ್ಲಿ ಹುಲಿ ಹತ್ಯೆೆ: ತನಿಖೆ ಸಚಿವ ಖಂಡ್ರೆೆ ಸೂಚನೆ

ಸುದ್ದಿಮೂಲ ವಾರ್ತೆ ಬೆಂಗಳೂರು, ಅ.03:
ಮಲೈ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದಲ್ಲಿ ಪತ್ತೆೆಯಾಗಿರುವ ಹುಲಿ ಕಳೇಬರ ಪ್ರಕರಣವನ್ನು ತನಿಖೆ ನಡೆಸುವಂತೆ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆೆ ಸೂಚಿಸಿದ್ದಾರೆ.
ಪಿಸಿಸಿಎ್ ನೇತೃತ್ವದ ತಂಡ ತನಿಖೆ ನಡೆಸುವಂತೆ ಸೂಚಿಸಿ ಅವರು ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅವರಿಗೆ ಲಿಖಿತ ಆದೇಶ ನೀಡಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿಿನಲ್ಲಿರುವ ಪಚ್ಚೆೆದೊಡ್ಡಿಿ ಗ್ರಾಾಮದ ಬಳಿ ನಿನ್ನೆೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆೆಯಾಗಿರುವ ಬಗ್ಗೆೆ ಪಿಸಿಸಿಎ್ ಸ್ಮಿಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸುವಂತೆ ಸೂಚಿಸಿದ್ದಾರೆ.
ಮಲೈ ಮಹದೇಶ್ವರ ಬೆಟ್ಟದ ಕಾಡಿನಲ್ಲಿ ಕಳೆದ 3 ವರ್ಷದಲ್ಲಿ ದಾಖಲಾಗಿರುವ ಕಳ್ಳಬೇಟೆ ಪ್ರಕರಣಗಳ ಬಗ್ಗೆೆಯೂ ಗಮನ ಹರಿಸಿ, ಹಿಂದಿನ ತನಿಖಾ ವರದಿಗಳನ್ನೂ ಪರಾಮರ್ಶಿಸಿ ಮುಂದೆ ಈ ಭಾಗದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಲು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮದ ಶಿಾರಸಿನೊಂದಿಗೆ 8 ದಿನಗಳಲ್ಲಿ ವರದಿ ಸಲ್ಲಿಸಲು ಮತ್ತು ಹುಲಿ ಹಂತಕರನ್ನು ಪತ್ತೆೆಮಾಡಿ ಅವರಿಗೆ ಕಾನೂನು ರೀತ್ಯ ದಂಡನೆ ಕೊಡಿಸಲು ತುರ್ತು ಕ್ರಮ ವಹಿಸಲು ಆದೇಶ ಹೊರಡಿಸುವಂತೆ ಈಶ್ವರ ಖಂಡ್ರೆೆ ಸೂಚಿಸಿದ್ದಾರೆ.
ಈ ಘಟನೆ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ನಿರಂತರವಾಗಿ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿಿರುವುದನ್ನು ದೃಢಪಡಿಸುತ್ತಿಿದ್ದು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ವನ್ಯಜೀವಿ ಸಪ್ತಾಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊೊಂದು ಹುಲಿ ಹತ್ಯೆೆ ಆಗಿರುವ ಬಗ್ಗೆೆ ಸಚಿವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ