Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಿಪಟೂರು: ನಿವೃತ್ತ ನೌಕರರು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಸುದ್ದಿಮೂಲ ವಾರ್ತೆ

ತಿಪಟೂರು, ಜು.30: ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ನಿವೃತ್ತಿ ನೌಕರರಿಗೆ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇಕಡ 85 ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.

ನಗರದ ಒಕ್ಕಲಿಗರ ಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ನೂರಕ್ಕೂ ಹೆಚ್ಚು ಸಮಾಜದ ಮಕ್ಕಳು ಭಾಗಿಯಾಗಿದ್ದರು 30ಕ್ಕೂ ಹೆಚ್ಚು ನಿವೃತ್ತ ನೌಕರರು ಸನ್ಮಾನ ಸ್ವೀಕರಿಸಿದರು

ಈ ಒಂದು ಸಮಾರಂಭಕ್ಕೆ ಶಾಸಕ ಷಡಕ್ಷರಿ , ಬೆಳ್ಳಾವಿಯ ಶ್ರೀಕಾರದ ಗುರುಸ್ವಾಮಿಗಳು, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪ್ರಭುಸ್ವಾಮಿ, ತಿಪಟೂರು ತಾಲೂಕು ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸ್ವಾಮಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಕುಮಾರ್ ಸಂಗಮೇಶ್, ತುಮಕೂರಿನ ಜ್ಯೋತಿಗಣೇಶ್, ಕೆಎಂಎಫ್ ನಿರ್ದೇಶಕರಾದ ಮಾದಿಹಳ್ಳಿ ಪ್ರಕಾಶ್, ಕೌನ್ಸಿಲ್ಲರ್ ಆದ ಯಮುನಾ ಧರಣೇಶ್, ಯೋಗೀಶ್ ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ಈ ಒಂದು ಕಾರ್ಯಕ್ರಮದಲ್ಲಿ ಹಾಜರಿದ್ದರು

ಬೆಳ್ಳಾವಿಯ ಶ್ರೀ ಕಾರದ ಗುರುಗಳು ಮಾತನಾಡಿ, ನಮ್ಮ ಸಮಾಜದಲ್ಲಿ ಇಷ್ಟೊಂದು ಪ್ರತಿಭೆಗಳು ದಿನೇ ದಿನೇ ಉದ್ಭವಿಸುತ್ತಿರುವುದು ನಮಗೆ ಸಂತೋಷದ ಸುದ್ದಿ. ಪ್ರತಿಯೊಬ್ಬರೂ ಎದೆ ಮೇಲೆ ಲಿಂಗವನ್ನು ಕಟ್ಟಿ ತಂದೆ ತಾಯಿಗಳು ಮಕ್ಕಳಿಗೆ ಉತ್ತಮ ಸಂಸ್ಕಾರ ಬೋಧನೆ ಮಾಡಿ ನಿಮ್ಮ ಎದೆಯ ಮೇಲೆ ಲಿಂಗ ಇದ್ದರೆ ಯಾವುದೇ ಪಿಶಾಚಿ ಯಾವುದೇ ದುಷ್ಟ ಶಕ್ತಿಗಳು ಯಾವುದೇ ಒಂದು ಕೆಟ್ಟ ಚಟಗಳು ನಿಮ್ಮ ಹತ್ತಿರ ಬರದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ. ಈ ಕಾರ್ಯಕ್ರಮದಲ್ಲಿ ಎಲ್ಲಾ ಪ್ರತಿಭಾನ್ವಿತ ಮಕ್ಕಳಿಗೆ ರುದ್ರಾಕ್ಷಿ ಸರವನ್ನು ವಿತರಿಸಲಾಯಿತು.

ನಂತರ ಶಾಸಕ ಷಡಕ್ಷರಿ ಮಾತನಾಡಿ, ನಾನು ಸುಮಾರು ಕಾಲೇಜುಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಎಲ್ಲಾ ಕಾಲೇಜಿನ ಮಕ್ಕಳು ಸಹ ನೂರಕ್ಕೆ ನೂರು ಫಲಿತಾಂಶವನ್ನು ತೆಗೆದು ತೇರ್ಗಡೆ ಗೊಂಡಿರುತ್ತಾರೆ. ಆದ್ದರಿಂದ ಎಲ್ಲಾ ಮಕ್ಕಳು ಉತ್ತಮ ಸಾಧನೆ ಮತ್ತು ಗುರಿ ಹಾಗೂ ಅವರ ಒಂದು ಈ ಸಂದರ್ಭದಲ್ಲಿ ಸಂತೋಷ ವ್ಯಕ್ತಪಡಿಸಿದರು.

ತಿಪಟೂರು ತಾಲೂಕು ವೀರಶೈವ ಲಿಂಗಾಯತ ನೌಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸ್ವಾಮಿ ಮಾತನಾಡಿ, ನಾವು ಪ್ರತಿ ಬಾರಿಯಂತೆ ಈ ಬಾರಿಯೂ 17ನೇ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ಉದ್ದೇಶ ನಮ್ಮ ಸಮಾಜದ ಮಕ್ಕಳು ಮುಂದೆ ಬಂದು ಎಲ್ಲರಲ್ಲೂ ಪ್ರೀತಿ ವಿಶ್ವಾಸದಿಂದ ಬೆಳೆದು ಉತ್ತಮ ಸಮಾಜದ ನಾಗರಿಕ ಪ್ರಜೆಗಳಾಗಬೇಕು ಎಂಬುದೇ ನಮ್ಮ ಉದ್ದೇಶ ಎಂದು ಕಿವಿ ಮಾತನ್ನು ಹೇಳಿದರು

ಈ ಕಾರ್ಯಕ್ರಮಕ್ಕೆ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಎಲ್ಲಾ ಅಧಿಕಾರಿಗಳು ಹಾಗೂ ಮಕ್ಕಳು ಪೋಷಕರು ನಿವೃತ್ತ ನೌಕರರು ಸಮಾಜದ ಬಂದು ಬಾಂದವರೆಲ್ಲರೂ ಸುಮಾರು ಸಂಖ್ಯೆಯಲ್ಲಿ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ