Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೀತ್ಸೆ ಪ್ರೀತ್ಸೆ ಎಂದು ಪೀಡನೆ : ಬೇಸತ್ತ ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ


ಸುದ್ದಿಮೂಲ ವಾರ್ತೆ




ಮೈಸೂರು,ಜೂ.17:ದಿನನಿತ್ಯ ಶಾಲೆಗೆ ಹೋಗುವಾಗ ಮತ್ತು ಬರುವಾಗ ಯುವಕನೊಬ್ಬ ವಿದ್ಯಾರ್ಥಿನಿಯನ್ನು  ಪ್ರೀತಿಸುವಂತೆ ಪೀಡಿಸುತ್ತಿದ್ದ ಇದರಿಂದ ಬೇಸತ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ನಂಜನಗೂಡು ತಾಲೂಕಿನ ಬಂಚಹಳ್ಳಿಹುಂಡಿ ಗ್ರಾಮದಲ್ಲಿ ನಡೆದಿದೆ.


ಬಂಚಹಳ್ಳಿ ಹುಂಡಿ ಗ್ರಾಮದ ರಮೇಶ್ ಎಂಬುವರ ಪುತ್ರಿ ಚಂದನ (15) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಮೃತ ವಿದ್ಯಾರ್ಥಿನಿ ಚಂದನ ತಾಂಡವಪುರ ಸರ್ಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದು, ಅದೇ  ಗ್ರಾಮದ ವೆಂಕಟೇಶ್ ಎಂಬುವರ ಪುತ್ರ ಶರತ್ ಎಂಬ ಯುವಕ  ಚಂದನಾಳನ್ನು ಶಾಲೆಗೆ ಹೋಗುವಾಗ ಬರುವಾಗ ಹಿಂಬಾಲಿಸಿಕೊಂಡು ಚುಡಾಯಿಸುತ್ತಿದ್ದ ಎನ್ನಲಾಗಿದೆ.


ಈ ಬಗ್ಗೆ ಚಂದನಾ ತನ್ನ ತಂದೆ ರಮೇಶ್ ರವರಿಗೆ ವಿಷಯ ತಿಳಿಸಿದ್ದು, ರಮೇಶ್ ಆರೋಪಿ ವೆಂಕಟೇಶನಿಗೆ ಬುದ್ದಿವಾದ ಹೇಳಿದ್ದರು. ನಂತರವೂ ಸಹ ವಿದ್ಯಾರ್ಥಿನಿಯನ್ನು ಚುಡಾಯಿಸುತ್ತಿದ್ದ ಕಾರಣ ರಮೇಶ್ ತನ್ನ ಮಗಳನ್ನು ಶಾಲೆಯಿಂದ ಬಿಡಿಸಿ ಮನೆಯಲ್ಲಿಯೇ ಉಳಿಸಿಕೊಂಡಿದ್ದರು.


ಇದರಿಂದ ಮನನೊಂದ ವಿದ್ಯಾರ್ಥಿನಿ ಚಂದನಾ ಶುಕ್ರವಾರ ಬೆಳಿಗ್ಗೆ ಮನೆಯ ತೀರಿಗೆ ತನ್ನ ವೇಲ್‍ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮೃತ ಚಂದನಾಳ ತಂದೆ ರಮೇಶ್ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ  ದೂರು ನೀಡಿದ್ದಾರೆ.


ಆತ್ಮಹತ್ಯೆ ತಡೆಗಟ್ಟಲು ಮತ್ತು ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ಸಹಯೋಗದೊಂದಿಗೆ SAHAI ಸಹಾಯವಾಣಿ ಕಾರ್ಯನಿರ್ವಹಿಸುತ್ತಿದೆ. ಸಂಪರ್ಕಸಂಖ್ಯೆ: 080 - 25497777







Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ