Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

2026 ಮಾರ್ಚ್ ಅಂತ್ಯಕ್ಕೆ ತಿರುಮಲ ಕಾಮಗಾರಿ ಪೂರ್ಣಗೊಳಿಸಬೇಕು: ಸಚಿವ ರಾಮಲಿಂಗಾರೆಡ್ಡಿ

ತಿರುಪತಿ ಡಿ.24:
ರಾಜ್ಯದಿಂದ ತಿರುಪತಿ ಶ್ರೀವೆಂಕಟರಮಣಸ್ವಾಾಮಿ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಮುಂದಿನ ವರ್ಷದ 2026 ಮಾರ್ಚ್ ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿಿನ ಸೂಚನೆ ನೀಡಿದ್ದಾರೆ.
ಬುಧವಾರ ಶ್ರೀಕ್ಷೇತ್ರ ತಿರುಪತಿ ತಿರುಮಲಕ್ಕೆೆ ಅಧಿಕಾರಿಗಳ ಜೊತೆ ಖುದ್ದು ಭೇಟಿ ನೀಡಿ ಇಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಎಷ್ಟು ಸಾಧ್ಯವೊ ಅಷ್ಟು ಬೇಗ ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ಯಾತ್ರೆೆಗಳಿಗೆ ಅನುಕೂಲ ಕಲ್ಪಿಿಸಿ ಕೊಡಬೇಕೆಂದು ನಿರ್ದೇಶನ ನೀಡಿದರು.
ತಿರುಮಲದಲ್ಲಿ ಕರ್ನಾಟಕ ಸರ್ಕಾರ ನಿರ್ಮಾಣ ಮಾಡುತ್ತಿರುವ ಮೂರು ಅತಿಥಿಗೃಹಗಳು ಹಾಗೂ ಛತ್ರದ ಕಾಮಗಾರಿಯನ್ನು ಪರಿಶೀಲನೆ ನಡೆಸಿದ ಅವರು, ಕೂಡಲೇ ಸಣ್ಣ ಲೋಪ ದೋಷಗಳನ್ನು ಸರಿಪಡಿಸಿ ಯಾತ್ರಿಿಗಳ ಬಳಕೆಗೆ ಸಿದ್ಧಪಡಿಸಬೇಕೆಂದು ಸೂಚನೆ ಕೊಟ್ಟರು.
ಈಗಾಗಲೇ ಸಾಕಷ್ಟು ವಿಳಂಬವಾಗಿರುವುದರಿಂದ ತಿರುಪತಿ ತಿರುಮಲಕ್ಕೆೆ ಬರುವ ಯಾತ್ರೆೆಗಳಿಗೆ ಅನಾನುಕೂಲ ಆಗಲಿದೆ ಪ್ರತಿಯೊಬ್ಬರು ಹೆಚ್ಚಿಿನ ದರದಲ್ಲಿ ಹಣ ನೀಡಿ ಖಾಸಗಿ ಕೊಠಡಿಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ ಹೀಗಾಗಿ ಅತಿಥಿಗೃಹಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕೆಂದು ಹೇಳಿದರು.
ಈ ವೇಳೆ ಸ್ಥಳದಲ್ಲಿ ಹಾಜರಿದ್ದ ಟಿಟಿಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ರಾಮಲಿಂಗಾರೆಡ್ಡಿಿ ಅವರು ಗುಣಮಟ್ಟದ ಕಾಮಗಾರಿಯಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವ ಪ್ರಶ್ನೆೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ರಾಮಲಿಂಗ ರೆಡ್ಡಿಿ ಅವರು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಕೆಲವು ಮಹತ್ವದ ವಿಷಯಗಳ ಬಗ್ಗೆೆ ಚರ್ಚೆ ನಡೆಸಿದರು.
ತಿರುಮಲದಲ್ಲಿನ ಭೂಮಿಯನ್ನು ಗುತ್ತಿಿಗೆಗೆ ಪಡೆಯುವುದು, ಟಿಟಿಡಿ ವಾಪಸ್ ಪಡೆದ ಭೂಮಿಗೆ ಬದಲಾಗಿ ತಿರುಪತಿಯಲ್ಲಿ 30 ಸೆಂಟ್ಸ್ ಪರ್ಯಾಯ ಭೂಮಿ ಒದಗಿಸುವುದ ಕುರಿತು ಚರ್ಚೆ ನಡೆಸಲಾಯಿತು.
ತಿರುಮಲದಲ್ಲಿ ಟಿಟಿಡಿ ಕೈಗೊಂಡ ನಾಗರಿಕ ಕಾಮಗಾರಿಗಳ ಮೇಲೆ ವಿಧಿಸಲಾಗುವ ಸೆಂಟೇಜ್ ಶುಲ್ಕಕ್ಕೆೆ ವಿನಾಯಿತಿ ನೀಡುವುದು. ತಿರುಮಲದಲ್ಲಿರುವ ಎಲ್ಲಾ ಅತಿಥಿ ಗೃಹಗಳ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಹಸ್ತಾಾಂತರಿಸುವುದರ ಬಗ್ಗೆೆಯೂ ಮಾತುಕತೆ ನಡೆಸಿದರು.
ಎಲ್ಲಾ ಸ್ನಾಾನಗೃಹಗಳಲ್ಲಿ ಇರುವ ಪಿಒಪಿ ಮೇಲ್ಚಾಾವಣಿಯನ್ನು ಪಿವಿಸಿ ಮೇಲ್ಚಾಾವಣಿಯಾಗಿ ಬದಲಿಸುವುದು. ಛತ್ರಕ್ಕೆೆ ಅಗ್ನಿಿಶಾಮಕ ಇಲಾಖೆಯಿಂದ ಪ್ರಮಾಣಪತ್ರವನ್ನು ಕಡ್ಡಾಾಯವಾಗಿ ಪಡೆಯಬೇಕು ಎಂದು ತಿಳಿಸಿದರು.
ಎಚ್‌ಟಿ ಲೈನ್ ಅನುಮತಿ ಪಡೆಯಲು ಅಗತ್ಯವಿರುವ ಎಲ್ಲಾ ಪ್ರಕ್ರಿಿಯೆಗಳನ್ನು ಪೂರ್ಣಗೊಳಿಸುವುದು. ,ಕರ್ನಾಟಕದಿಂದ ಆಗಮಿಸುವ ಭಕ್ತರಿಗೆ ದರ್ಶನ ಸೌಲಭ್ಯ ಒದಗಿಸಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿಿ ಅವರು ಸ್ಪಷ್ಟ ಸೂಚನೆ ನೀಡಿದರು.
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಪರಿಷತ್ ಸದಸ್ಯ ಶರವಣ ತಿರುಪತಿ ತಿರುಮಲದಲ್ಲಿ ನಡೆಯುತ್ತಿಿರುವ ಕಾಮಗಾರಿಗಳಲ್ಲಿ ನ್ಯೂನತೆಗಳಿರುವುದಾಗಿ ಪ್ರಸ್ತಾಾಪಿಸಿದ್ದರು. ಆ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿಿ ತಾವೇ ಖುದ್ದು ಭೇಟಿ ನೀಡಿ ಪರಿವೀಕ್ಷಣೆ ನಡೆಸುವುದಾಗಿ ಸದನದಲ್ಲಿ ಆಶ್ವಾಾಸನೆ ನೀಡಿದ್ದರು. ಅದರಂತೆ ಮಂಗಳವಾರದಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿಿ ಅವರು ತಿರುಮಲಕ್ಕೆೆ ಭೇಟಿ ನೀಡಿ, ಟಿಟಿಡಿ ಅಧಿಕಾರಿಗಳೊಂದಿಗೆ ತಿರುಮಲದಲ್ಲಿರುವ ಕರ್ನಾಟಕ ಸರ್ಕಾರದ 3 ಅತಿಥಿ ಗೃಹಗಳು ಹಾಗೂ ಛತ್ರದ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆ ಆಯುಕ್ತರಾದ ಶರತ್, ಟಿಟಿಡಿ ಟ್ರಸ್ಟ್ ಸದಸ್ಯ ದರ್ಶನ್ ಸೇರಿದಂತೆ ಇತರರು ಉಪಸ್ಥಿಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ