Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರ ಕಂಬನಿ ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ ನಿಧನ

ಸುದ್ದಿಮೂಲ ವಾರ್ತೆ ಬೆಂಗಳೂರು, ಅ.03:
ಹಲವು ದಿನಗಳಿಂದ ಅನಾರೋಗ್ಯಕ್ಕೆೆ ತುತ್ತಾಾಗಿದ್ದ ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ (97) ಅವರು ಖಾಸಗಿ ಆಸ್ಪತ್ರೆೆಯಲ್ಲಿ ಹೃದಯಾಘಾತದಿಂದ ಶುಕ್ರವಾರ ನಿಧನರಾದರು.
ಥೈಲ್ ಜಾಕೋಬ್ ಸೋನಿ ಜಾರ್ಜ್ ( ಟಿಜೆಎಸ್ ಜಾರ್ಜ್) ಎಂದೇ ಅವರು ಪತ್ರಿಿಕೋದ್ಯಮದಲ್ಲಿ ಚಿರಪರಿಚಿತರು.
ಕೆಲ ದಿನಗಳಿಂದ ಅನಾರೋಗ್ಯಕ್ಕೆೆ ಒಳಗಾಗಿದ್ದ ಅವರನ್ನು ಚಿಕಿತ್ಸೆೆಗಾಗಿ ಖಾಸಗಿ ಆಸ್ಪತ್ರೆೆಗೆ ದಾಖಲಿಸಲಾಗಿತ್ತು. ಜಾರ್ಜ್ ನಿಧನಕ್ಕೆೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಟಿಜೆಎಸ್ ಜಾರ್ಜ್ 1928 ಮೇ 7 ರಂದು ಕೇರಳದಲ್ಲಿ ಜನಿಸಿದ್ದರು. ಮದ್ರಾಾಸ್ ಕ್ರಿಿಶ್ಚಿಿಯನ್ ಕಾಲೇಜಿನಿಂದ ಇಂಗ್ಲಿಿಷ್ ಸಾಹಿತ್ಯದಲ್ಲಿ ಪದವಿ ಪಡೆದುಕೊಂಡಿದ್ದರು. ನಂತರ ಮುಂಬೈನ ಫ್ರೀೀ ಪ್ರೆೆಸ್ ಜರ್ನಲ್‌ನಲ್ಲಿ ವೃತ್ತಿಿಜೀವನ ಆರಂಭಿಸಿದ್ದರು.
ಪದ್ಮ ವಿಭೂಷಣ ಪ್ರಶಸ್ತಿಿಗೆ ಭಾಜನ: ಜಾರ್ಜ್ ಅವರು ಸಾಮಾಜಿಕ ಅನ್ಯಾಾಯ, ಭ್ರಷ್ಟಾಾಚಾರ, ಧಾರ್ಮಿಕ ಅಸಹಿಷ್ಣುತೆ ಸೇರಿದಂತೆ ಹಲವು ವಿಚಾರಗಳ ಬಗ್ಗೆೆ ಧ್ವನಿ ಎತ್ತಿಿದ್ದರು. ಪಾಯಿಂಟ್ ಆ್ ವ್ಯೂೆ’ ಎಂಬ ಸಾಪ್ತಾಾಹಿಕ ಅಂಕಣವನ್ನು 25 ವರ್ಷಗಳ ಕಾಲ ಬರೆದಿದ್ದರು.
ಭಾರತೀಯ ಪತ್ರಿಿಕೋದ್ಯಮ ಸೇರಿದಂತೆ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆೆ ನೀಡಿದ ಅತ್ಯುತ್ತಮ ಕೊಡುಗೆ ಹಿನ್ನಲೆ 2011ರಲ್ಲಿ ಪದ್ಮವಿಭೂಷಣ ಪ್ರಶಸ್ತಿಿಗೆ ಭಾಜನರಾಗಿದ್ದರು. 2019ರಲ್ಲಿ ಕೇರಳದ ಅತ್ಯುನ್ನತ ಮಾಧ್ಯಮದ ಸ್ವದೇಶಾಭಿಮಾನಿ ಕೇಸರಿ ಪ್ರಶಸ್ತಿಿಯನ್ನು ಸಹ ಪಡೆದಿದ್ದರು. ಅವರು ಹಾಂಗ್ ಕಾಂಗ್‌ನಲ್ಲಿ ಏಷ್ಯಾಾವೀಕ್ ಸಂಸ್ಥೆೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ