Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್!

 

ಬೆಂಗಳೂರು, ಸೆ.12: ಮಿನ್ನಲ್ ಮುರಳಿ' ಮತ್ತು '2018 - ಎವ್ರಿಒನ್​​ ಈಸ್ ಎ ಹೀರೋ' ಚಿತ್ರಗಳ ಮೂಲಕ ರಾಷ್ಟ್ರವ್ಯಾಪಿ ಗಮನ ಸೆಳೆದಿರುವ ಮಲೆಯಾಳಂ ನಟ ಟೊವಿನೋ ಥಾಮಸ್.‌ ಸದಾ ವಿಭಿನ್ನ ಕಥೆ ಆಯ್ಕೆ ಮಾಡಿಕೊಳ್ಳುವ ಜನಪ್ರಿಯ ನಟನೀಗ "ಎಆರ್​​ಎಂ​​" (Ajayante Randam Moshanam /ಅಜಯಂತೇ ರಂದಮ್ ಮೋಷನಂ) ಎಂಬ ಫ್ಯಾಂಟಸಿ ಪ್ಯಾನ್ ಇಂಡಿಯಾ ಚಿತ್ರದೊಂದಿಗೆ ಮತ್ತೊಮ್ಮೆ ಪ್ರೇಕ್ಷಕರೆದುರು ಬರುತ್ತಿದ್ದಾರೆ.

ಜಿತಿನ್ ಲಾಲ್ ನಿರ್ದೇಶನದ ಚೊಚ್ಚಲ ಚಿತ್ರ. ಸಿನಿಮಾ ಸಂಪೂರ್ಣವಾಗಿ 3ಡಿಯಲ್ಲಿ ತಯಾರಾಗಿದೆ. ಮಲಯಾಳಂ ಇತಿಹಾಸದಲ್ಲೇ ತಾಂತ್ರಿಕ ವಿಷಯದಲ್ಲಿ ಶ್ರೀಮಂತ ಚಿತ್ರಗಳಲ್ಲಿ ಒಂದಾಗಿದೆ. ಈಗಾಗಲೇ ಬಿಡುಗಡೆಯಾಗಿ ಟ್ರೇಲರ್ ಚಿತ್ರದ ಸುತ್ತಲಿನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ.

ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಹಿಂಸಾಚಾರ ಮತ್ತು ನಾಯಕನ ಪ್ರವೇಶವನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಎಆರ್​​ಎಂ ಭರ್ಜರಿ ಆ್ಯಕ್ಷನ್​ ಸೀನ್​ಗಳೊಂದಿಗೆ ಅದ್ಭುತ ಸಿನಿಮೀಯ ಅನುಭವ ನೀಡಲಿದೆ ಎಂಬ ಸುಳಿವನ್ನು ಈ ಟ್ರೇಲರ್​​ ಕೊಟ್ಟಿದೆ.

ಟೊವಿನೋ ಥಾಮಸ್​​​ ಮೂರು ವಿಭಿನ್ನ ಪಾತ್ರಗಳನ್ನು ಚಿತ್ರಿಸಿದ್ದಾರೆ. ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೂಮಿಯ ಸಂಪತ್ತನ್ನು ರಕ್ಷಿಸುವ ಹೋರಾಟವಿದೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸುತ್ತದೆ. ಒಂದು ಬಲವಾದ ಕಥೆಯೊಂದಿಗೆ ದೃಶ್ಯ ಚಮತ್ಕಾರವಿರಲಿದೆ ಎಂಬ ಭರವಸೆ ನೀಡಿದೆ.



ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು, ಟ್ರೇಲರ್​ನಿಂದ ಸಾಕಷ್ಟು ಕುತೂಹಲ ಹುಟ್ಟಿಸಿದೆ‌. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ.

ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್‌ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್ ಸಂಯೋಜಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ