Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಟೌನ್‌ಶಿಪ್ ನಿರ್ಮಾಣ: ಜಮೀರ್ ಅಹಮದ್

ಬೆಂಗಳೂರು, ಸೆ.12: ರಾಜಧಾನಿ ಬೆಂಗಳೂರು ಹೊರವಲಯದ ಐದು ಕಡೆ ಗೃಹಮಂಡಳಿ ವತಿಯಿಂದ ಟೌನ್ ಶಿಪ್ ನಿರ್ಮಾಣ ಸಂಬಂಧ ರೈತರನ್ನು ವಿಶ್ವಾಸ ಕ್ಕೆ ತೆಗೆದುಕೊಂಡು ಮುಂದುವರಿಯಲು ತೀರ್ಮಾನಿಸಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.

ಗೃಹಮಂಡಳಿ ಕಚೇರಿಯಲ್ಲಿ ಶಾಸಕರ ಜತೆ ಈ ಸಂಬಂಧ ಸಭೆ ನಡೆಸಿದ ಅವರು, ಟೌನ್‌ಶಿಪ್ ನಿರ್ಮಾಣಕ್ಕೆ ಜಮೀನು ಸ್ವಾಧೀನ ಸಂಬಂಧ ರೈತರ ಅದಾಲತ್ ನಡೆಸಿ ಅವರ ಒಪ್ಪಿಗೆ ಪಡೆದ ನಂತರ ಮುಂದಿನ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಯಿತು.

ದಾಬಸ್‌ಪೇಟೆ, ಸೋಲೂರು, ಹೊಸಕೋಟೆ, ಬಿಡದಿ, ರಾಮನಗರ ಭಾಗದಲ್ಲಿ ಜಮೀನು ಲಭ್ಯತೆ ಆಧಾರದಲ್ಲಿ ಟೌನ್‌ಶಿಪ್ ನಿರ್ಮಾಣಕ್ಕೆ ತೀರ್ಮಾನ ಮಾಡಲಾಗಿದ್ದು, ಪೂರ್ವಭಾವಿಯಾಗಿ ರೈತರ ಅದಾಲತ್ ನಡೆಸೋಣ ನಂತರ ಶಾಸಕರ ಸಮ್ಮುಖದಲ್ಲಿ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳೋಣ ಎಂದು ತಿಳಿಸಿದರು.

ಸಭೆಯಲ್ಲಿ ಹಾಜರಿದ್ದ ಶಾಸಕರಾದ ಶರತ್ ಬಚ್ಚೇಗೌಡ, ಮಾಗಡಿ ಬಾಲಕೃಷ್ಣ, ನೆಲಮಂಗಲ ಶ್ರೀನಿವಾಸ್, ದೊಡ್ಡಬಳ್ಳಾಪುರ ಧೀರಜ್ ಮುನಿರಾಜು, ರೈತರು ಜಮೀನು ಕೊಡಲು ಸ್ವಯಂ ಪ್ರೇರಿತ ರಾಗಿ ಮುಂದೆ ಬಂದು 50: 50 ಹಂಚಿಕೆ ಆಧಾರದಲ್ಲಿ ಒಪ್ಪಿದರೆ ನಮ್ಮ ವಿರೋಧ ಇಲ್ಲ ಎಂದು ಹೇಳಿದರು.

ಗೃಹ ಮಂಡಳಿ ವತಿಯಿಂದ ಐದು ಕಡೆ ತಲಾ ಎರಡು ಸಾವಿರ ಎಕರೆ ಜಾಗದಲ್ಲಿ ಟೌನ್‌ಶಿಪ್ ನಿರ್ಮಾಣಕ್ಕೆ ತೀರ್ಮಾನ ಮಾಡಲಾಗಿದ್ದು ಆದಷ್ಟು ಬೇಗ ಈ ಸಂಬಂಧ ಪ್ರಕ್ರಿಯೆ ಪೂರ್ಣ ಗೊಳಿಸಲು ಸಚಿವರು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.

ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ, ಆಯುಕ್ತರಾದ ಕವಿತಾ ಮಣ್ಣಿಕೇರಿ, ಮುಖ್ಯ ಎಂಜಿನಿಯರ್ ರವಿಕುಮಾರ್ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ