Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿ ಸ್ಪಂದಕರ ತರಬೇತಿ ಪ್ರತಿಯೊಬ್ಬರಿಗೂ ಅನುಕೂಲ: ಡಾ. ಪರಿಮಳ ಮರೂರು

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.17: ಭಾರತದಂತಹ ರಾಷ್ಟ್ರಗಳಲ್ಲಿ ಸಾಮಾನ್ಯರಿಗೂ ಆರೋಗ್ಯದ ತರಬೇತಿಗಳು ಅವಶ್ಯಕವಾಗಿದ್ದು, ಇತ್ತೀಚಿನ ದಿನಗಳಲ್ಲಿ ಹೃದಯ ಸ್ತಂಭನ, ಎದನೋವು, ಪಾಶ್ರ್ವವಾಯು, ವಿಷ ಸೇವನೆಯಂತಹ ಪ್ರಕರಣಗಳು ಗಂಭೀರವಾಗಿ ಅಧಿಕವಾಗುತ್ತಿದ್ದು, ಇಂತಹ ಪ್ರಕರಣಗಳು ಸಮುದಾಯದಲ್ಲಿಯೇ ಸೂಕ್ತ ರೀತಿಯ ಜ್ಞಾನ ಕೌಶಲಗಳಿಂದ ಸಾವು ನೋವುಗಳನ್ನು, ತಡೆಯಲು ಅವಶ್ಯಕವಾಗಿದೆ ಎಂದು ಬೆಂಗಳೂರಿನ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ನಿರ್ದೇಶಕರಾದ ಡಾ. ಪರಿಮಳ ಎಸ್. ಮರೂರು ತಿಳಿಸಿದರು.

ಇಂದು ಮಾಗಡಿ ರಸ್ತೆಯ ಆರೋಗ್ಯ, ಮತ್ತು ಕುಟುಂಬ ಕಲ್ಯಾಣ ತರಬೇತಿ ಸಂಸ್ಥೆ ವತಿಯಿಂದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಹಾಗೂ ನಮ್ಮ ಮೆಟ್ರೋ ಬೆಂಗಳೂರಿನ ಸಿಬ್ಬಂದಿಗೆ ಆಯೋಜಿಸಿದ್ದ ಪ್ರತಿಸ್ಪಂದಕರ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನಿರೀಕ್ಷಿತವಾಗಿ ಉಂಟಾಗುವ ಸಾವು ನೋವುಗಳನ್ನು ಕಡಿಮೆ ಮಾಡಲು ಎಲ್ಲರಿಗೂ ಪ್ರಥಮ ಪ್ರತಿ ಸ್ಪಂದಕರ ತರಬೇತಿ ಅನುಕೂಲವಾಗಲಿದೆ ಎಂದು ಹೇಳಿದರು.

ಪ್ರಸ್ತುತ ದಿನಗಳಲ್ಲಿ ಸ್ವಾಭಾವಿಕ ಹಾಗೂ ಸಾಂದರ್ಭಿಕ ಅವಗಡಗಳಲ್ಲಿ ಸಾವು-ನೋವುಗಳು ಅಧಿಕವಾಗುತ್ತಿದ್ದು, ಇಂತಹ ಪ್ರಕರಣಗಳನ್ನು ತ್ವರಿತವಾಗಿ ಆರೈಕೆ ಮಾಡಲು ಪ್ರಥಮ ಪ್ರತಿಸ್ಪಂದಕರ ತರಬೇತಿ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಭಾಗವಹಿಸಿರುವ ಎಲ್ಲಾ ಪ್ರಶಿಕ್ಷಣಾರ್ಥಿಗಳು ತರಬೇತಿಯನ್ನು ಗರಿಷ್ಠ, ಪ್ರಮಾಣದಲ್ಲಿ ಉಪಯೋಗಿಸಿಕೊಂಡು ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲು ಸಹಕರಿಸಬೇಕಾಗಿ ಎಂದು ಬೆಂಗಳೂರಿನ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ಅಪರ ನಿರ್ದೇಶಕರಾದ ಡಾ. ಪುಷ್ಪಲತಾ ಬಿ.ಎಸ್ ಕರೆ ನೀಡಿದರು.

ಈ ಪ್ರಥಮ ಪ್ರತಿಸ್ಪಂದಕರ ತರಬೇತಿಯು ಕೇಂದ್ರ ಸರ್ಕಾರದ ನಿಯಮಗಳಂತೆ ಸಾರ್ವಜನಿಕರಿಗೂ, ಸಂಘ - ಸಂಸ್ಥೆಗಳಿಗೂ ಮತ್ತು ಎಲ್ಲ್ಲರಿಗೂ ನೀಡಿದರೆ ಎಲ್ಲಾ ರೀತಿಯ ಅವಗಡಗಳನ್ನು ತಪ್ಪಿಸಲು ಸಹಕಾರಿಯಾಗುತ್ತದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ಉಪನಿರ್ದೇಶಕರಾದ ಡಾ. ಚಿದಾನಂದ ಹೆಚ್. ಗುಡೂರ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾದೇಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರ ಪ್ರಾಂಶುಪಾಲರಾದ ಡಾ. ಮಂಜುಳ ದೇವಿ ಸೇರಿದಂತೆ ಸುಮಾರು 50 ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ