Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧ್ಯಾತ್ಮಕ್ಕೆ ಹೆಚ್ಚಿನ ಒತ್ತು ಅಗತ್ಯ : ಟಿಎಸ್ ರಾಜಶೇಖರ್

ಸುದ್ದಿಮೂಲ ವಾರ್ತೆ

ಹೊಸಕೋಟೆ,ನ.19: ನುಡಿಗಳನ್ನು ನಡೆಯಲ್ಲಿ ಅಳವಡಿಸಿಕೊಂಡಾಗ ಜೀವನ ಪಾವನವಾಗುತ್ತದೆ ಅಧ್ಯಾತ್ಮಿಕ ದಾರಿಯಲ್ಲಿ ನಡೆದರೆ ಯಾವುದೇ ಜೀವನದಲ್ಲಿ ತೊಂದರೆಯಾಗುವುದಿಲ್ಲ ಎಂದು ಮಾಜಿ ತಾ.ಪಂ ಅಧ್ಯಕ್ಷ ಟಿ.ಎಸ್.ರಾಜಶೇಖರ್ ಹೇಳಿದರು.

ಹೊಸಕೋಟೆ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿಯ ಕಾಳಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜ್ಞಾನ ಧಾರ್ಮಿಕತೆ ಅಧ್ಯಾತ್ಮಿಕತೆಗೆ ಹೆಚ್ಚಿನ ಒತ್ತನ್ನು ಗ್ರಾಮೀಣ ಭಾಗದ ಜನತೆ ನೀಡುತ್ತಿದ್ದಾರೆ. ದೇವರ ಸ್ಮರಣೆಯಿಂದ ಮಾತ್ರ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತದೆ. ಆಧುನಿಕ

ಯುಗದಲ್ಲಿ ಮನುಷ್ಯನ ಮನಸ್ಸು ಚಂಚಲವಾಗಿದ್ದು. ಏಕಾಗ್ರತೆಯಿಂದ ಎಲ್ಲರೂ ದೈವಭಕ್ತಿಯನ್ನು ಅನುಸರಿಸಬೇಕು ಎಂದು ಹೇಳಿದರು.

ತಾವರೆಕೆರೆ ಗ್ರಾ.ಪಂ ಅಧ್ಯಕ್ಷ ಎನ್.ರಮೇಶ್ ಮಾತನಾಡಿ, ಎಲ್ಲರೂ ದೈವ ಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು ಯಾವುದೇ ಕ್ಷೇತ್ರಗಳಲ್ಲಿದ್ದರು ದೇವಾನುಗ್ರಹ ಪಡೆಯಲೇ ಬೇಕು. ಪ್ರತಿಯೊಬ್ಬರು ಅರಿತುಕೊಂಡು ನ್ಯಾಯ, ನೀತಿ, ಧರ್ಮದ ಹಾದಿಯಲ್ಲಿ ನಡೆದುಜೀವನ ಸಾಗಿಸುವಂತಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಭಕ್ತರಿಗೆ ಅನ್ನ ದಾಸೋಹ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷ ಆರ್.ರವಿಕುಮಾರ್, ಎಸ್‌.ಎಚ್‌.ಟಿ ಮಂಜುನಾಥ್, ಮಾಜಿ ಉಪಾಧ್ಯಕ್ಷ ಸುಧಾಕರ್, ಮಾಜಿ ಸದಸ್ಯ ಎಂ.ನಾರಾಯಣಸ್ವಾಮಿ ಸದಸ್ಯರಾದ ಪ್ರಿಯಾಂಕ ಡಿ.ರಮೇಶ್, ಕೃಷ್ಣಪ್ಪ, ಜಗದೀಶ್, ಪೂಜಾರಿ ನಾಗಪ್ಪ ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ