Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರು: ಚುನಾವಣಾ ಅಕ್ರಮ, 81.33 ಲಕ್ಷ ನಗದು ಜಪ್ತಿ

ಸುದ್ದಿಮೂಲ ವಾರ್ತೆ
ತುಮಕೂರು, ಏ.11: ಕರ್ನಾಟಕ ವಿಧಾನಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾದ ದಿನ ಅಂದರೆ ಮಾರ್ಚ್ 29 ರಿಂದ ಏಪ್ರಿಲ್ 11ರವರೆಗೆ ಜಿಲ್ಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಡಿ 81.33ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪಾರದರ್ಶಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಚುನಾವಣಾ ಅಕ್ರಮವನ್ನು ತಡೆಯಲು 156 ವಿಚಕ್ಷಣ ದಳ, 135 ಸ್ಥಿರ ಕಣ್ಗಾವಲು ತಂಡ ಹಾಗೂ 9 ಅಬಕಾರಿ ತಂಡವನ್ನು ರಚಿಸಿ ನಿಯೋಜಿಸಲಾಗಿದೆ.

ಜಿಲ್ಲಾದ್ಯಂತ ನಿಯೋಜಿತ ತಂಡಗಳು ಮಾರ್ಚ್ 29 ರಿಂದ ಏಪ್ರಿಲ್ 11ರವರೆಗೆ ಪೊಲೀಸರ ಸಹಕಾರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಎಸ್‌ಎಸ್‌ಟಿ ತಂಡದಿಂದ 5.08ಲಕ್ಷ ರೂ. ಹಾಗೂ ಪೊಲೀಸ್ ಇಲಾಖೆಯಿಂದ 76.25ಲಕ್ಷ ರೂ. ಸೇರಿ 81.33ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ದಾಖಲೆಯಿಲ್ಲದ 75 ಲಕ್ಷ ರೂ. ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಸೂಕ್ತ ದಾಖಲೆ ಒದಗಿಸಿದವರಿಗೆ 3.70 ಲಕ್ಷ
ರೂ. ಹಣವನ್ನು ಹಿಂದಿರುಗಿಸಲಾಗಿದೆ ಎಂದು ವಿವರಿಸಿದರು.

ಅದೇ ರೀತಿ ಈ ವರೆಗೆ 89.92 ಲಕ್ಷ ರೂ. ಮೌಲ್ಯದ ಮದ್ಯ ಹಾಗೂ 50 ಲೀ. ಸೇಂದಿ ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ಅಕ್ರಮಗಳಿಗಾಗಿ ಬಳಸಿಕೊಂಡಿದ್ದ 50 ದ್ವಿಚಕ್ರ ವಾಹನ, 2 ನಾಲ್ಕು ಚಕ್ರ ವಾಹನ, ಮತದಾರರಿಗೆ ಹಂಚಿಕೆ ಮಾಡಲು ಸಂಗ್ರಹಿಸಿಟ್ಟಿದ್ದ ವಸ್ತು, ದವಸ-ಧಾನ್ಯ, ಉಡುಪುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಡಿ ದಾಖಲಾದ ಪ್ರಕರಣಗಳಲ್ಲಿ ಒಟ್ಟು 27 ಹಾಗೂ ಅಬಕಾರಿ ಕಾಯ್ದೆಯನ್ನು ಉಲ್ಲಂಘಿಸಿದ 249 ಪ್ರಕರಣಗಳಿಗೆ ಪ್ರಥಮ ವರ್ತಮಾನ ವರದಿ(ಎಫ್‌ಐಆರ್) ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ