Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಬಿಎಂಪಿ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಕುರಿತು ತುಷಾರ್ ಗಿರಿನಾಥ್ ಸಭೆ

ಸುದ್ದಿಮೂಲ ವಾರ್ತೆ
ಬೆಂಗಳೂರು, ಮಾ.30: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಸರ್ಕಾರಿ ಕಛೇರಿ, ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು ಹಾಗೂ ಭಾವಚಿತ್ರಗಳನ್ನು ತೆಗೆಯಲು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ವಲಯ ಜಂಟಿ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಡೆಸಿದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ ಕಛೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಬಿತ್ತಿಪತ್ರಗಳು, ಗೋಡೆ ಬರಹಗಳು ಇರುವಂತಿಲ್ಲ. ಯಾರಾದರು ಪೋಸ್ಟರ್, ಬ್ಯಾನರ್ ಹಾಕಿದರೆ ಸಂಬಂಧಪಟ್ಟವರಿಗೆ ಕೇಸ್ ಬುಕ್ ಮಾಡಿ ಎಂದು ಸೂಚನೆ ನೀಡಿದರು.

ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಯಾವುದಾದರು ಕಾರ್ಯಕ್ರಮ ಆಯೋಜಿಸಿದ್ದಲ್ಲಿ ತತ್‌ಕ್ಷಣ ಅದನ್ನು ರದ್ದುಪಡಿಸಬೇಕು. ಚುನಾವಣೆ ಮುಗಿಯುವವರೆಗೆ ಯಾವುದೇ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಶುದ್ಧ ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ. ಇದ್ದರೆ ಕೂಡಲೆ ಅದನ್ನು ತೆಗೆಯುವುದು ಅಥವಾ ಬಟ್ಟೆಯ ಮೂಲಕ ಕಾಣದಂತೆ ಮುಚ್ಚಬೇಕೆಂದು ಸೂಚನೆ ನೀಡಿದರು.

ರಸ್ತೆ ಬದಿಯಿರುವ ನಾಮಫಲಕಗಳಲ್ಲಿರುವ ಜನಪ್ರತಿನಿಧಿಗಳ ಹೆಸರುಗಳನ್ನು ತೆಗೆಯಬೇಕು. ಎಲ್ಲೂ ಜನಪ್ರತಿನಿಧಿಗಳ ಹೆಸರಾಗಲಿ, ಸಂಪರ್ಕ ಸಂಖ್ಯೆಯಾಗಲಿ ಇರುವಂತಿಲ್ಲ ಎಂದು ತಿಳಿಸಿದರು.

ಪ್ರಗತಿಯಲ್ಲಿ ಕಾಮಗಾರಿಗಳ ಪಟ್ಟಿಕೊಡಿ:
ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 8 ವಲಯಗಳ ವ್ಯಾಪ್ತಿಯಲ್ಲಿ ಯೋಜನಾ ವಿಭಾಗ, ಕೆರೆಗಳ ವಿಭಾಗ, ರಾಜಕಾಲುವೆ ವಿಭಾಗ ಸೇರಿದಂತೆ ಇನ್ನಿತರೆ ವಿಭಾಗಗಳಿಗೆ ಸಂಬಂಧಿಸಿದಂತೆ ಪ್ರಗತಿಯಲ್ಲಿರುವ ಕಾಮಗಾರಿಗಳ ಪಟ್ಟಿಯನ್ನು ಕೂಡಲೆ ಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಗಾಗಲೇ ಕಾರ್ಯಾದೇಶ ನೀಡಿ ಕೆಲಸ ಪ್ರಾರಂಭಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಾರದು. ಹೊಸದಾಗಿ ಟೆಂಡರ್ ಕರೆಯುವುದಾಗಲಿ, ಹೊಸದಾಗಿ ಕಾರ್ಯಾದೇಶ ನೀಡುವುದಾಗಲಿ ಮಾಡುವಂತಿಲ್ಲ. ಚುನಾವಣಾ ನೀತಿ ಸಂಹಿತೆ ನಿಯಮ ಉಲ್ಲಂಘಿಸುವುದು ಕಂಡಬಂದರೆ ಚುನಾವಣಾ ಆಯೋಗದಿಂದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಶ್ರೀ ಜಯರಾಮ ರಾಯಪುರ, ಎಲ್ಲಾ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಕಾರ್ಯಫಾಲಕ ಅಭಿಯಂತರರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ