Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಗರಾಜ್ ಯಾದವ್‌ ಅವರಿಗೆ ಸಚಿವ ಸ್ಥಾನ ನೀಡಲು ಉಮೇಶ್ ಒತ್ತಾಯ

ಸುದ್ದಿಮೂಲ ವಾರ್ತೆ

ಕೆಜಿಎಫ್, ಮೇ 25: ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ಇಂದಿನ ವಿಧಾನ ಪರಿಷತ್ ಸದಸ್ಯರಾಗಿರುವವರೆಗೂ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ಮತ್ತು ಯಾದವ ಸಮುದಾಯದ ಹಿರಿಯ ನಾಯಕ ನಾಗರಾಜ್ ಯಾದವ್ ರವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಬೇಕೆಂದು ಕೆಜಿಎಫ್ ತಾಲೂಕು ಯಾದವ ಯುವ ವೇದಿಕೆ ಅಧ್ಯಕ್ಷ ಉಮೇಶ್ ಯಾದವ್ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಕಾ ಹೇಳಿಕೆ ನೀಡಿರುವ ಉಮೇಶ್ ಯಾದವ್, ನಾಗರಾಜ್ ಯಾದವ್ ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷ ನಿಷ್ಠೆಯಿಂದ ಪಕ್ಷದ ಕಾರ್ಯಕ್ರಮಗಳನ್ನು ರಾಜ್ಯದ ಮೂಲೆ ಮೂಲೆಗಳಿಂದ ಸಂಘಟನೆ ಮಾಡುತ್ತಾ ಸುಮಾರು 4 ವರ್ಷಗಳಿಂದ ಮಾಧ್ಯಮದ ಮುಖ್ಯ ವಾಹಿನಿಗಳಲ್ಲಿ ಸುಮಾರು 4500 ಹೆಚ್ಚು ಸಂವಾದಗಳನ್ನು ಮಾಡಿ ಕಾಂಗ್ರೆಸ್ ಪಕ್ಷವನ್ನು ಸಾರ್ವಜನಿಕ ವಲಯದಲ್ಲಿ ಆತ್ಮ ವಿಶ್ವಾಸ ಮೂಡಿಸುವ ಉತ್ತಮ ವಾಗ್ಮಿ ಎಂದೇ ಗುರುತಿಸಿಕೊಂಡಿದ್ದಾರೆ.

2013ರ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ರಾಜ್ಯದ ಜನತೆ ಮತ್ತು ಬೇರೆ ರಾಜ್ಯದ ಪ್ರತಿನಿಧಿಗಳು ಬೆಂಗಳೂರು ಸಾರಿಗೆ ಯತ್ತ ಮುಖ ಮಾಡಿ ನೋಡುವಂತೆ ಸಾಧನೆಗೈದಿದ್ದ ಅನೇಕ ವಿಚಾರಗಳು ನಮ್ಮ ಮುಂದಿದೆ. ಈ ಬಾರಿ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕೆಂದು ಕಾಂಗ್ರೆಸ್ ಹೈಕಮಾಂಡ್‌ಗೆ ಈ ಮೂಲಕ ಕೆಜಿಎಫ್ ತಾಲೂಕು ಯುವ ವೇದಿಕೆ ಅಧ್ಯಕ್ಷ ಉಮೇಶ ಯಾದವ್ ಮನವಿ ಮಾಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ