Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಕ್ಕುಂಡಿಗೆ ಯುನೆಸ್ಕೋೋ ಸ್ಥಾಾನಮಾನ: ಎಚ್.ಕೆ. ಪಾಟೀಲ

ಸುದ್ದಿಮೂಲ ವಾರ್ತೆ ಉದಯಪುರ - ರಾಜಸ್ಥಾಾನ, ಅ.14:
ಗದಗ ಜಿಲ್ಲೆಯ ಲಕ್ಕುಂಡಿಯನ್ನು ಯುನೆಸ್ಕೋೋ ಜಾಗತಿಕ ಪಾರಂಪರಿಕ ತಾಣದ ಸ್ಥಾಾನಮಾನವನ್ನು ದೊರಕಿಸಲು ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ ತನ್ಮೂಲಕ ಕರ್ನಾಟಕವನ್ನು ಪಾರಂಪರಿಕ ಪ್ರವಾಸೋದ್ಯಮದ ಮುಂಚೂಣಿ ರಾಜ್ಯವನ್ನಾಾಗಿ ಪರಿವರ್ತಿಸಲು ಶ್ರಮಿಸುತ್ತಿಿದೆ ಎಂದು ಕಾನೂನು, ನ್ಯಾಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು ಇಂದು ಪ್ರಕಟಿಸಿದ್ದಾರೆ.
ರಾಜಸ್ಥಾಾನದ ಉದಯಪುರದಲ್ಲಿ ಇಂದು ಮತ್ತು ನಾಳೆ (14 ಮತ್ತು 15 ಅಕ್ಟೋೋಬರ್, 2025) ನಡೆಯುತ್ತಿಿರುವ ಪ್ರವಾಸೋದ್ಯಮದ ಹೊಸ ಉಪಕ್ರಮಗಳ ಬಗ್ಗೆೆ ರಾಜ್ಯ ಪ್ರವಾಸೋದ್ಯಮ ಸಚಿವರ ಸಮ್ಮೇಳನದಲ್ಲಿ ಸಚಿವರು ಇಂದು ಮಾತನಾಡುತ್ತಿಿದ್ದರು.
ಜಾಗತಿಕ ಸ್ಪರ್ಧಾತ್ಮಕ ಪ್ರವಾಸೋದ್ಯಮ 50 ತಾಣಗಳನ್ನು ಅಭಿವೃದ್ಧಿಿಪಡಿಸುವ ಕೇಂದ್ರ ಸರ್ಕಾರದ ರಾಷ್ಟ್ರೀಯ ಮಿಷನ್‌ನ ಅಡಿಯಲ್ಲಿ ಕರ್ನಾಟಕ ಸರ್ಕಾರವು ಗದಗ, ಹಂಪಿ, ಮೈಸೂರು ಮತ್ತು ಉಡುಪಿಗಳನ್ನು ಭವಿಷ್ಯೋೋತ್ತರ ಜಾಗತಿಕ ತಾಣಗಳೆಂದು ಪರಿಗಣಿಸಬೇಕೆಂದು ಕರ್ನಾಟಕ ಸರ್ಕಾರ ಪ್ರಸ್ತಾಾಪಿಸಿದೆ.
ಪಾರಂಪರಿಕ ಜಾಗತಿಕ ತಾಣದ ಎಲೆಮರೆಯ ಕಾಯಿಯಂತೆ ಅನರ್ಘ್ಯ ರತ್ನದಂತಹ ತಾಣವಾಗಿರುವ ಗದಗ ಪರಂಪರೆ, ನಿಸರ್ಗ ಮತ್ತು ಸಂಸ್ಕೃತಿಗಳ ಸಮ್ಮಿಿಲನವಾಗಿ ಪರಿಪಕ್ವವಾದ ಸೌಹಾರ್ದತೆಯನ್ನು ಪಡೆದಿರುವ ಗದಗ ಜಿಲ್ಲೆ ಹುಬ್ಬಳ್ಳಿಿ ವಿಮಾನ ನಿಲ್ದಾಾಣದಿಂದ ಕೇವಲ 40 ನಿಮಿಷಗಳ ಪ್ರಯಾಣದ ದೂರದಲ್ಲಿದೆ. ಗದಗನಿಂದ ಕೇವಲ 08 ಕಿ.ಮೀ ದೂರದಲ್ಲಿರುವ ಲಕ್ಕುಂಡಿ ಚಾಲುಕ್ಯರ ಶಿಲ್ಪಕಲೆಯ ಬಯಲು ವಸ್ತುಸಂಗ್ರಹಾಲಯವೆಂದು ಕರೆಯಲ್ಪಡುತ್ತದೆ. 100 ಗಹನವಾದ ಕೆತ್ತನೆಯ ದೇವಾಲಯಗಳು, ಆಳವಾದ ಬಾವಿಗಳು, ಜೈನಬಸದಿಗಳು ಮತ್ತು ಪ್ರಾಾಚೀನ ಯುಗದ ಶಿಲ್ಪಕಲೆಯ ಚಾಣಾಕ್ಷತನವನ್ನು ಪ್ರತಿಬಿಂಬಿಸುವ ಶಿಲಾಶಾಸನಗಳನ್ನು ಹೊಂದಿದೆ.
ಗದಗ ನಗರವು ತ್ರಿಿಕೋಟೇಶ್ವರ ದೇವಸ್ಥಾಾನ, ಸರಸ್ವತಿ ದೇವಸ್ಥಾಾನ ಮತ್ತು ವೀರನಾರಾಯಣ ದೇವಸ್ಥಾಾನ ಹಾಗೂ ಡಂಬಳದ ದೊಡ್ಡಬಸಪ್ಪನ ದೇವಸ್ಥಾಾನಗಳು ಮತ್ತು ಪ್ರಾಾಚೀನ ಕೋಟೆಗಳು ಭಾರತೀಯ ಶಿಲ್ಪಕಲೆಯನ್ನು ಶ್ರೀಮಂತಗೊಳಿಸಿದ ರಾಜಮನೆತನಗಳ ಕಥೆಗಳನ್ನು ವರ್ಣಿಸುತ್ತಿಿವೆ ಎಂದು ವಿವರಿಸಿದರು. ಗದುಗಿನ ಭಾರತ ರತ್ನ ಪಂಡಿತ ಭೀಮಸೇನ್ ಜೋಷಿ ರವರು ಹಿಂದೂಸ್ತಾಾನಿ ಶಾಸೀಯ ಸಂಗೀತಕ್ಕೆೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆ ದೊರಕಿಸಿಕೊಡುವಲ್ಲಿ ಬಹುದೊಡ್ಡ ಕೊಡುಗೆ ನೀಡಿ, ಕರ್ನಾಟಕದ ಶ್ರೀಮಂತ ಸಂಗೀತ ಪರಂಪರೆಯನ್ನು ವಿಶ್ವದಲ್ಲಿ ಹಾಸುಹೊಕ್ಕಾಾಗುವಂತೆ ಮಾಡಿದರು ಎಂದು ಸಚಿವರು ವಿವರಿಸಿದರು.
ಕಳೆದ 2 ವರ್ಷಗಳಲ್ಲಿ ಕರ್ನಾಟಕ ಸರ್ಕಾರವು ಸವದತ್ತಿಿ ಯಲ್ಲಮ್ಮನ ಗುಡ್ಡದ ಸಮಗ್ರ ಅಭಿವೃದ್ಧಿಿಗೆ, ಅಂಜನಾದ್ರಿಿ ಬೆಟ್ಟದ ಮತ್ತು ಹಂಪಿ, ಮೈಸೂರು, ಬೀದರ ಮತ್ತು ಉಡುಪಿ ಹಾಗೂ ಬೆಂಗಳೂರು ಬಳಿಯ ರೋರಿಕ್ ಎಸ್ಟೇಟ್‌ಗಳ ಅಭಿವೃದ್ಧಿಿ ಕಾರ್ಯವನ್ನು ಕೈಗೆತ್ತಿಿಕೊಂಡಿದ್ದು, ಕಾಲಮಿತಿಗೊಳಪಟ್ಟು ಈ ಯೋಜನೆಗಳನ್ನು ಪೂರ್ಣಗೊಳಿಸಲು ಶ್ರಮಿಸುತ್ತಿಿದೆ. 343 ಕಿ.ಮೀ ಉದ್ದದ ಕರಾವಳಿಯನ್ನು ಕೇಂದ್ರೀೀಕೃತವಾಗಿಸಿ, ಅಭಿವೃದ್ಧಿಿಪಡಿಸಿ ಉನ್ನತ ಸ್ಥರದ ಪ್ರವಾಸೋದ್ಯಮ ತಾಣವನ್ನಾಾಗಿ ಪರಿವರ್ತಿಸಲು ಪ್ರತ್ಯೇಕ ಕರಾವಳಿ ಪ್ರವಾಸೋದ್ಯಮ ನೀತಿಯನ್ನು ಸಿದ್ದಪಡಿಸುತ್ತಿಿದೆ ಎಂದು ವಿವರಿಸಿದರು.
ಭಾರತ ದೇಶವನ್ನು ಜಾಗತಿಕ ಪ್ರವಾಸೋದ್ಯಮ ತಾಣವನ್ನಾಾಗಿ ಪರಿವರ್ತಿಸಲು ಕರ್ನಾಟಕ ಬದ್ಧವಾಗಿದೆ. ಕೇಂದ್ರ ಮತ್ತು ಇತರ ರಾಜ್ಯಗಳ ಸಂಯೋಜನೆಯೊಂದಿಗೆ ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮದ ಶಕ್ತಿಿ ಕೇಂದ್ರವನ್ನಾಾಗಿಸಲು ಕರ್ನಾಟಕವು ತನ್ನೆೆಲ್ಲಾ ಶಕ್ತಿಿಯನ್ನು ಧಾರೆ ಎರೆಯುತ್ತದೆ ಎಂದು ಸಚಿವರು ವಿವರಿಸಿದರು.
ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರಸಿಂಗ್ ಶೇಖಾವತ್ ಹಾಗೂ ಎಲ್ಲಾ ರಾಜ್ಯದ ಪ್ರವಾಸೋದ್ಯಮ ಸಚಿವರು ಸಮ್ಮೇಳನದಲ್ಲಿ ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ