Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕರ್ನಾಟಕದ ಕೃಷಿ ಬಲಪಡಿಸಲು ಕೇಂದ್ರ ಸರ್ಕಾರ ಬದ್ಧ : ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್

 ಸುದ್ದಿಮೂಲ ವಾರ್ತೆ ಬೆಂಗಳೂರು, ೆ.08:
ಕೇಂದ್ರ ಸರ್ಕಾರ ರಾಜಕೀಯ ಬದಿಗಿಟ್ಟು ಕೃಷಿ ಬಲಪಡಿಸಲು ಕರ್ನಾಟಕದ ಜೊತೆ ಹೆಗಲು ಕೊಟ್ಟು ಕೆಲಸ ಮಾಡಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅಂತಾರಾಷ್ಟ್ರೀಯ ಕೃಷಿ ಮೇಳದಲ್ಲಿ ಅವರು ಮಾತನಾಡಿದರು.
ಕರ್ನಾಟಕದಲ್ಲಿ ಕೃಷಿಯನ್ನು ಬಲಪಡಿಸಲು, ರೈತರ ಆದಾಯ ಹೆಚ್ಚಿಿಸಲು ಮತ್ತು ಸಂಸ್ಕರಣೆ ಹಾಗೂ ಮೌಲ್ಯವರ್ಧನೆ ಚಟುವಟಿಕೆಗಳನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಯಾವುದೇ ಭೇದಭಾವವಿಲ್ಲದೆ ರಾಜ್ಯ ಸರ್ಕಾರದೊಂದಿಗೆ ಹೆಗಲಿಗೆ ಹೆಗಲು ಸೇರಿಸಿ ಕೆಲಸ ಮಾಡಲಿದೆ . ರೈತರಿಗೆ ಅರ್ಥಪೂರ್ಣ ಕೆಲಸ, ನ್ಯಾಾಯಸಮ್ಮತ ಬೆಲೆ ಮತ್ತು ಸಮಯೋಚಿತ ನೆರವು ಬೇಕು. ಯಾವ ಪಕ್ಷ ಅಧಿಕಾರದಲ್ಲಿದ್ದರೂ, ರೈತರಿಗೆ ಸೇವೆ ಸಲ್ಲಿಸುವುದು ಕೇಂದ್ರ ಮತ್ತು ರಾಜ್ಯಗಳ ಸಂಯುಕ್ತ ಜವಾಬ್ದಾಾರಿಯಾಗಿದೆ ಎಂದು ಹೇಳಿದರು. ಕಳೆದ ಅನುಭವಗಳನ್ನು ನೆನಪಿಸಿಕೊಂಡ ಅವರು, ಮಾವು, ಮೆಣಸಿನಕಾಯಿ ಮತ್ತು ತೊಗರಿ ಖರೀದಿ ಸೇರಿದಂತೆ ಕರ್ನಾಟಕ ಕೃಷಿ ಸಚಿವರು ಕಳುಹಿಸಿದ ಪ್ರಸ್ತಾಾಪಗಳಿಗೆ ಕೇಂದ್ರವು ಯಾವತ್ತೂ ನಿರಾಕರಿಸಿಲ್ಲ ಎಂದು ಹೇಳಿದರು.
ರೈತರು ರಾಜಕೀಯಕ್ಕಿಿಂತ ಮೇಲಿದ್ದಾರೆ ಎಂಬುದನ್ನು ಪುನರುಚ್ಚರಿಸಿದ ಅವರು, ಕರ್ನಾಟಕದ ಜನರು ಮತ್ತು ರೈತರಿಗೆ ಸೇವೆ ಸಲ್ಲಿಸಲು ಹಿಂದೇಟು ಹಾಕದೆ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಪ್ರಧಾನಮಂತ್ರಿಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆೆ ಸಂಪೂರ್ಣ ಸಹಕಾರ ನೀಡಲಿದೆ ಹಾಗೂ ಸಹಕಾರಾತ್ಮಕ ಸಂಯುಕ್ತ ಮನೋಭಾವದೊಂದಿಗೆ ಕೆಲಸ ಮಾಡಲಿದೆ ಎಂದರು.
ರಾಜ್ಯದ ಮಣ್ಣು ಅತ್ಯುತ್ತಮವಾಗಿದೆ. ಅನ್ನ ಮತ್ತು ಸಿರಿಧಾನ್ಯಗಳ ಪ್ರಚಾರ ಕರ್ನಾಟಕದಲ್ಲೇ ಆರಂಭವಾಗಿ ದೇಶ ಮತ್ತು ವಿಶ್ವದ ಮಟ್ಟಿಿಗೆ ವಿಸ್ತರಿಸಿದೆ. ಸಿರಿಧಾನ್ಯ ಬೆಳೆಗಾರರಿಗೆ ಬೆಂಬಲ ಮುಂದುವರಿಯಲಿದೆ ಹಾಗೂ ಅಗತ್ಯವಿದ್ದಲ್ಲಿ ಹೆಚ್ಚುವರಿ ಯೋಜನೆಗಳನ್ನು ತರಲಾಗುವುದು ಎಂದು ಭರವಸೆ ನೀಡಿದರು.
ವಿಶ್ವಕ್ಕೆೆ ಕರ್ನಾಟಕದ ಕಾಫಿ ಶಕ್ತಿಿ:
ರಾಜ್ಯದ ಕಾಫಿ ವಿಶ್ವಕ್ಕೆೆ ಶಕ್ತಿಿ ನೀಡುತ್ತದೆ, ಚಂದನ ತಾಜಾತನ ನೀಡುತ್ತದೆ, ರೇಷ್ಮೆೆ ಜಾಗತಿಕ ಮಾನ್ಯತೆ ತಂದುಕೊಡುತ್ತದೆ, ತೆಂಗು ಆರೋಗ್ಯ ಮತ್ತು ರುಚಿಯನ್ನು ನೀಡುತ್ತದೆ ಹಾಗೂ ಅನ್ನ ಮತ್ತು ಸಿರಿಧಾನ್ಯಗಳು ವಿಶ್ವದ ಮಟ್ಟದಲ್ಲಿ ಪೌಷ್ಟಿಿಕತೆ ಮತ್ತು ಆರೋಗ್ಯಕ್ಕೆೆ ಸಹಕಾರಿಯಾಗಿವೆ ಎಂದು ಹೇಳಿದರು.
ತೆಂಗು ಬೆಳೆ ಕುರಿತು ಮಾತನಾಡಿದ ಸಚಿವರು, ಕರ್ನಾಟಕಕ್ಕೆೆ ವಿಶಿಷ್ಟ ಸ್ಥಾಾನವಿದ್ದರೂ ರಾಜ್ಯದಲ್ಲಿ ಇತ್ತೀಚೆಗೆ ಹಳೆಯ ತೋಟಗಳು ಮತ್ತು ರೋಗಗಳಿಂದ ಉತ್ಪಾಾದನೆ ಕುಂಠಿತವಾಗಿದೆ. . ಹೆಚ್ಚಿಿನ ಉತ್ಪಾಾದನೆ ನೀಡುವ ಹೊಸ ತಳಿಗಳನ್ನು ನೆಡುವ ಮೂಲಕ ಹಳೆಯ ತೋಟಗಳನ್ನು ಬದಲಿಸಲು ತೆಂಗು ಅಭಿವೃದ್ಧಿಿ ಯೋಜನೆ ಜಾರಿಗೊಳ್ಳಲಿದೆ ಹಾಗೂ ರೋಗ ನಿಯಂತ್ರಣಕ್ಕಾಾಗಿ ವೈಜ್ಞಾನಿಕ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು. ಯೋಜನೆಯ ಪೂರ್ಣ ಪ್ರಯೋಜನ ಪಡೆಯಲು ರಾಜ್ಯವು ಪ್ರಸ್ತಾಾಪಗಳನ್ನು ಕಳುಹಿಸಬೇಕು ಎಂದು ಹೇಳಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ