Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಜೊತೆ ಕೇಂದ್ರ ಸಚಿವ ಖೂಬಾ ಸಮಾಲೋಚನೆ

ಬೆಂಗಳೂರು: ಬೀದರ್ ಜಿಲ್ಲೆಯಲ್ಲಿ ಸಿಪೆಟ್ (ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪ್ಲಾಸ್ಟಿಕ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ) ಕೇಂದ್ರದ ಕಟ್ಟಡ ಕಾಮಗಾರಿಗೆ ಚಾಲನೆ ನೀಡುವ ಸಂಬಂಧ ಕೇಂದ್ರ ಸರ್ಕಾರದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವರಾಗಿರುವ ಭಗವಂತ ಖೂಬಾ ಹಾಗೂ ಭಾರಿ & ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಬುಧವಾರ ಸಮಾಲೋಚನೆ ನಡೆಸಿದರು.

ಕೇಂದ್ರ ಸಚಿವ ಖೂಬಾ ಅವರು ಸಚಿವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ, ಸಿಪೆಟ್ ಕೇಂದ್ರದ ಸ್ಥಾಪನೆಗಾಗಿ ಜಿಲ್ಲಾಡಳಿತವು ಬೀದರ್ ಜಿಲ್ಲೆ ಔರಾದ ತಾಲ್ಲೂಕಿನ ಬಲ್ಲೂರ ಹತ್ತಿರ 10 ಎಕರೆ ಜಾಗವನ್ನು ಈಗಾಗಲೇ ಗುರುತಿಸಿದೆ. ಅಲ್ಲದೇ, ಕಳೆದ ವರ್ಷ ಇದರ ಭೂಮಿಪೂಜೆಯೂ ನಡೆದಿದೆ ಎಂದರು.

ಮಂಜೂರಾಗಿರುವ ಸಿಪೆಟ್ ಕಟ್ಟಡಕ್ಕಾಗಿ ಕೇಂದ್ರ ಸರ್ಕಾರ ತನ್ನ ಪಾಲಿನ ಶೇಕಡ 50ರಷ್ಟು ಅನುದಾನವನ್ನು ಕೊಟ್ಟಿದೆ. ರಾಜ್ಯ ಸರ್ಕಾರವು ತನ್ನ ಪಾಲಿನ ಶೇಕಡ 50ರಷ್ಟು ಹಣ ನೀಡಿ ಕಟ್ಟಡ ಕಾಮಗಾರಿಗೆ ಚಾಲನೆ ಕೊಡಬೇಕು ಎಂದರು.

ಇದೇ ಸಂದರ್ಭದಲ್ಲಿ ಖೂಬಾ ಅವರು ಬೀದರ್ ಜಿಲ್ಲೆಯಲ್ಲಿ ಕೈಗಾರಿಕೋದ್ಯಮಗಳ ನಿರ್ಮಾಣಕ್ಕೆ ಒತ್ತು ನೀಡುವಂತೆ ಕೋರಿದರು.

ಜಿಲ್ಲೆಯಲ್ಲಿ ಉದ್ದಿಮೆಗಳ ಸ್ಥಾಪನೆಗೆ ಹೂಡಿಕೆ ಮಾಡಲು ಕೆಲವರು ಈ ಹಿಂದೆ ಆಸಕ್ತಿ ತೋರಿದ್ದರು. ಆದರೆ ಕೋವಿಡ್ ನಿಂದಾಗಿ ಅದಕ್ಕೆ ಹಿನ್ನಡೆಯಾಗಿತ್ತು. ಈಗ ಪುನಃ ಆಸಕ್ತರನ್ನು ಜಿಲ್ಲೆಯಲ್ಲಿ ಉದ್ಯಮಿಗಳ ಸ್ಥಾಪನೆಗೆ ಆಹ್ವಾನಿಸಬೇಕು ಎಂದು ಅಭಿಪ್ರಾಯಪಟ್ಟರು.

ಬೀದರ್ ಭಾಗದ ಜನ ಉದ್ಯೋಗ ಹುಡುಕಿಕೊಂಡು ತೆಲಂಗಾಣ ಮತ್ತು ಮಹಾರಾಷ್ಟ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಹೋಗುತ್ತಿದ್ದಾರೆ. ಜಿಲ್ಲೆಯಲ್ಲಿಯೇ ಉದ್ದಿಮೆಗಳು ಸ್ಥಾಪನೆಯಾದರೆ ಈ ವಲಸೆಗೆ ತಡೆ ಬೀಳುತ್ತದೆ ಎಂದು ವಿವರಿಸಿದರು.

ಶಾಸಕರಾದ ಶೈಲೇಂದ್ರ ಬೆಲ್ದಾಳೆ ಮತ್ತು ಸಿದ್ದು ಪಾಟೀಲ್ ಅವರು ಈ ಸಂದರ್ಭದಲ್ಲಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ