Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವವಿದ್ಯಾಲಯಗಳು ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಮಾರ್ಚ್ 28: ಇಂದು ಆರಂಭಿಸಿರುವ ಎಲ್ಲ ವಿಶ್ವವಿದ್ಯಾಲಯಗಳು ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಜ್ಞಾನಜ್ಯೋತಿ ಸಭಾಂಗಣದಲ್ಲಿ ಒಂಭತ್ತು ನೂತನ ವಿಶ್ವವಿದ್ಯಾಲಯಗಳನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ. ಶಿಕ್ಷಣ ಬೆಳವಣಿಗೆ ಆಗಬೇಕು.

ಈ ರೀತಿಯ ವಿಶ್ವ ವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ. ಮುಂದಿನ ದಿನಗಳಲ್ಲಿ ಎಲ್ಲರೂ ಕರ್ನಾಟಕದ ಮಾದರಿ ಅಳವಡಿಸಿಕೊಳ್ಳುವಂತಾಗಬೇಕು ಎಂದರು.

ದೇಶದಲ್ಲಿ ಉನ್ನತ ಶಿಕ್ಷಣ ಅಂದರೆ ಐಐಟಿ ಅದಕ್ಕೆ ಸಿಇಟಿ ಮೂಲಕ ಆಯ್ಕೆ ಆಗಬೇಕು. ನಮ್ಮ ಮಕ್ಕಳೂ ಐಐಟಿ ಮಾದರಿಯಲ್ಲಿ ಶಿಕ್ಷಣ ಪಡೆಯಬೇಕು ಎಂದು ಕೆಐಟಿ ಸ್ಥಾಪನೆ ಮಾಡಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಎಲ್ಲಾ ಸಂಸ್ಥೆಗಳು ಐಐಟಿ ಮಾದರಿಯಲ್ಲಿ ಇರಲಿವೆ. ಐಐಟಿ ಹುಡುಕಿಕೊಂಡು ಹೋಗುವ ಬದಲು ಇಲ್ಲಿಯೇ ಐಐಟಿ ಸೃಷ್ಟಿಸುತ್ತಿದ್ದೇವೆ. ಜಗತ್ತಿನ ಉನ್ನತ ವಿವಿಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದರು.

ವಿದ್ಯಾರ್ಥಿಗಳು ನಾಡಿನ ಭವಿಷ್ಯ

ವಿದ್ಯಾರ್ಥಿಗಳು ನಾಡಿನ ಭವಿಷ್ಯ. ಈಗ 21 ನೇ ಶತಮಾನ ಜ್ಞಾನದ ಶತಮಾನ .ಮುಂದಿನ ದಿನಗಳಲ್ಲಿ ಭಾರತ ವಿಶ್ವ ಗುರುವಾಗಲಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಪಾಕಿಸ್ತಾನದ ಪ್ರಜೆಗಳು ಮೋದಿಯಂಥ ಪ್ರಧಾನಿ ಬೇಕು ಅಂತ ಹೇಳುತ್ತಿದ್ದಾರೆ. ಚೀನಾನ ಕೂಡ ಭಾರತ ಕೊರೊನಾ ನಿಯಂತ್ರಣ ಮಾಡಿದ್ದನ್ನು ಮೆಚ್ಚಿಕೊಂಡಿದೆ ಎಂದರು. ಶಿಕ್ಷಣ ಸಂಸ್ಥೆ ಅಂದರೆ ಪಾವಿತ್ಯತೆ. ಸಂಸ್ಥೆಗಳು ಸರಸ್ವತಿಯ ವಾಹನ ಪರಮಹಂಸ ಕೂಡ ಪವಿತ್ರವಾಗಿದ್ದು ವಿದ್ಯಾರ್ಥಿಗಳು ಅಷ್ಟೇ ಎತ್ತರಕ್ಕೆ ಬೆಳೆಯಬೇಕು ಎಂದರು

ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವ ಮುರುಗೇಶ್ ನಿರಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ