Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೌರ ಕಾರ್ಮಿಕರಂತೆ ಚಾಲಕರು, ಸಹಾಯಕರನ್ನು ಖಾಯಂಗೊಳಿಸುವಂತೆ ಒತ್ತಾಯ

ಸುದ್ದಿಮೂಲ ವಾರ್ತೆ

ಬೆಂಗಳೂರು,ಸೆ.6:ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು 5 ರ ಒಳಗಾಗಿ ನೇರ ವೇತನ ಪಾವತಿ ಮಾಡುವ ಜೊತೆಗೆ ಚಾಲಕರು, ಹೆಲ್ಪರ್ ಗಳು, ಕ್ಲೀನರ್ ಗಳನ್ನು ಪೌರ ಕಾರ್ಮಿಕರಂತೆ ಖಾಯಂಗೊಳಿಸಬೇಕೆಂದು ಆಗ್ರಹಿಸಿ ನಾರಾಯಣ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆ ಪೌರ ಕಾರ್ಮಿಕರ ಮಹಾ ಸಂಘ ಬೃಹತ್ ಹಕ್ಕೊತ್ತಾಯ ಸಮಾವೇಶ ಆಯೋಜಿಸಲಾಗಿತ್ತು.

ಬಗಲಗುಂಟೆಯ ಮಲ್ಲಸಂದ್ರ ವಾರ್ಡ್ ನ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ನೂರಾರು ಪೌರ ಕಾರ್ಮಿಕರು ಸಮಾವೇಶದಲ್ಲಿ ಭಾಗವಹಿಸಿ ಕಸ ಸಾಗಾಟ ಮಾಡುವ ಆಟೋ, ಲಾರಿ ಚಾಲಕರು, ಹೆಲ್ಪರ್ ಗಳು ಹಾಗೂ ಕ್ಲಿನರ್‌ಗಳ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಹಕ್ಕೊತ್ತಾಯ ಮಂಡಿಸಿದರು.

ಸಭೆಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಮೈಸೂರು ನಾರಾಯಣ, ಬಡ ಪೌರ ಕಾರ್ಮಿಕರಿಗೆ ವೇತನ ಪಾವತಿ ವಿಳಂಬವಾಗುತ್ತಿದ್ದು, ಇದರಿಂದ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಪೌರ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ನಡಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಳೆದ ಹಲವು ವರ್ಷಗಳಿಂದ ಪೌರ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವಂತೆ ನಡೆಸಿದ ಹೋರಾಟದ ಫಲವಾಗಿ ಇಂದು ಪೌರ ಕಾರ್ಮಿಕರನ್ನು ಸರ್ಕಾರ ಹಂತ ಹಂತವಾಗಿ ಖಾಯಂಗೊಳಿಸುವ ನಿರ್ಧಾರಕ್ಕೆ ಬಂದಿದೆ. ಆದರೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಇತರೆ ಪೂರಕ ಸಿಬ್ಬಂದಿಯನ್ನು ಸಹ ಖಾಯಂಗೊಳಿಸಬೇಕೆಂದು ಬೆಂಗಳೂರು ನಗರ ಅಧ್ಯಕ್ಷ ಬಿ.ಎಂ ಸುರೇಶ್ ಬಾಬು, ರಾಜ್ಯ ಪ್ರಧಾನ ಕಾರ್ಯದರ್ಶಿ ಅಂಜನೇಯಲು, ಒತ್ತಾಯಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ