Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವರುಣಾ ಕ್ಷೇತ್ರದ ಬಗ್ಗೆ ಸ್ವಲ್ಪ ಮಾಹಿತಿ ಇದೆ: ವಿ.ಸೋಮಣ್ಣ

ಸುದ್ದಿಮೂಲ ವಾರ್ತೆ
ಮೈಸೂರು, ಏ.13: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ವರುಣಾದಲ್ಲಿ ಸುತ್ತಾಡಿದ್ದೇನೆ. ಕ್ಷೇತ್ರದ ಬಗ್ಗೆ ನನಗೆ ಸ್ವಲ್ಪ ಮಾಹಿತಿ ಇದೆ ಎಂದು ಸಚಿವ ಮತ್ತು ವರುಣಾ ಕ್ಷೇತ್ರದ ಬಿಜೆಪಿ ನಿಯೋಜಿತ ಅಭ್ಯರ್ಥಿ ವಿ. ಸೋಮಣ್ಣ ಹೇಳಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ವರುಣಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಮೈಸೂರಿಗೆ ಹೊಂದಿಕೊಂಡಿರುವ ಅನೇಕ ಭಾಗಗಳು  ಇನ್ನೂ ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿವೆ. ಮೈಸೂರು ತನ್ನದೇ ಇತಿಹಾಸ ಹೊಂದಿದ್ದು, ಶಾಂತಿ - ನೆಮ್ಮದಿ, ಮೂಲಭೂತ ಸೌಕರ್ಯಗಳು ಅಗತ್ಯವಾಗಿವೆ ಎಂದು ತಿಳಿಸಿದರು.

ತಾವು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದಾಗ ಅನೇಕ ಮೂಲಭೂತ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇದೇ ಕೆಲಸವನ್ನು ಇಲ್ಲಿಯೂ ಮುಂದುವರೆಸಲು ಜನರು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

ರಾಷ್ಟ್ರೀಯ ನಾಯಕರು ಅನೇಕ ವಿಚಾರಗಳನ್ನು ಕೈಗೆತ್ತಿಕೊಂಡು ಅರ್ಹತೆ ಇರುವ ಅನೇಕರಿಗೆ ಅವಕಾಶ ನೀಡಿದ್ದಾರೆ. ಸಾಮಾನ್ಯರೂ ಸಹ ಲೋಕಸಭೆ ಮತ್ತು ವಿಧಾನಸಭೆಗೆ ಹೋಗಬಹುದು ಎಂಬ ಸಂದೇಶವನ್ನು ಬಿಜೆಪಿ ನೀಡಿದೆ. ಶ್ರಮ, ಅನುಭವಗಳನ್ನು ಗುರುತಿಸಿ ಎರಡೂ ಕಡೆ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ. ತಮ್ಮ ವಿರುದ್ಧ ಯಾರು ನಿಲ್ಲುತ್ತಾರೆ ಎಂಬುದು ಗೌಣ. ಎರಡೂ ಕಡೆ ಸಮನಾಗಿ ಸಮಯ ಮೀಸಲಿಟ್ಟು ಪ್ರಚಾರ ಮಾಡಲಿದ್ದೇನೆ. 17ರಂದು ವರುಣಾದಲ್ಲಿ, 19 ರಂದು ಚಾಮರಾಜನಗರದಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದರು.

ಜನಪರ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಕೆಲಸ ಮಾಡುತ್ತಿವೆ. ಜನ್‍ಧನ್, ಕಿಸಾನ್ ಸಮ್ಮಾನ್, ವಿದ್ಯಾಸಿರಿ ಸೇರಿದಂತೆ  ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಯೋಜನೆಗಳ ಫಲಾನುಭವಿಗಳ ಸಮಾವೇಶಗಳನ್ನು ನಡೆಸಲಾಗಿದೆ.  ಸ್ವಾತಂತ್ರ್ಯ ಬಂದ ನಂತರ ಎಲ್ಲ ವರ್ಗಗಳಿಗೆ ಸಮಾನತೆ ನೀಡಿದ್ದು ನರೇಂದ್ರ ಮೋದಿಯವರ ಸರ್ಕಾರ. ತರ್ಕಬದ್ಧತೆಯಿಂದ ಕಾನೂನು ಚೌಕಟ್ಟಿನಡಿ ಸಾಮಾನ್ಯರಿಗೂ ಅವಕಾಶಗಳನ್ನು ಒದಗಿಸುವುದು ಸರ್ಕಾರದ ಸಂಕಲ್ಪವಾಗಿದೆ ಎಂದು ವಿ.ಸೋಮಣ್ಣ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ, ನಗರ ಜಿಲ್ಲಾಧ್ಯಕ್ಷ ಶ್ರೀವತ್ಸ, ಗ್ರಾಮಾಂತರ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್ ಮುಂತಾದವರು ಇದ್ದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ