Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಸಾಮಾನ್ಯರಿಗೂ ಕಾನೂನಿನ ಜಾಗೃತಿ ಮೂಡಿಸಿ: ವಿ.ಸೋಮಣ್ಣ

 

ಜನಸಾಮಾನ್ಯರಿಗೂ ಕಾನೂನಿನ ಜಾಗೃತಿ ಮೂಡಿಸಿ: ವಿ.ಸೋಮಣ್ಣ

ಬೆಂಗಳೂರು: ಜನಸಾಮಾನ್ಯರಿಗೂ ಕಾನೂನಿನ ಅರಿವು ಮೂಡಿಸಿ ಎಂದು ರಾಜ್ಯದ ಮಾಜಿ ಸಚಿವ ವಿ. ಸೋಮಣ್ಣ ಅವರು ಮನವಿ ಮಾಡಿದರು.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ನಡೆದ ಕಾನೂನು ಪ್ರಕೋಷ್ಠದ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾನೂನಿನ ಪ್ರತಿಪಾದನೆ, ಅದರ ಪ್ರತಿಪಾದನೆಯಿಂದ ಆಗುವ ಸಾಧಕ- ಬಾಧಕಗಳ ಅರಿವು ಮೂಡಿಸುವುದು ಶ್ಲಾಘನೀಯ ಎಂದರು.

ಭಾರತದ ಸಾರ್ವಭೌಮತೆ, ಅಖಂಡತೆ, ಈ ದೇಶವನ್ನು ಮುಂದಿನ ಪೀಳಿಗೆ ಎಂಥ ಸಂದರ್ಭದಲ್ಲೂ ವಿಚಲಿತರಾಗದೆ ಕೆಲಸ ಮಾಡುವ ಮಾದರಿಯಲ್ಲಿ ಸಮರ್ಪಕ ಸಂದೇಶವನ್ನು ನಮ್ಮೆಲ್ಲರ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದಾರೆ ಎಂದು ತಿಳಿಸಿದರು.

ರಾಜಕಾರಣದಲ್ಲಿ ಅಧಿಕಾರ, ಅಧಿಕಾರ ಇದ್ದಾಗ ನಡವಳಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರಲ್ಲದೆ, ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಹೇರಿ ಕರಾಳ ದಿನಗಳನ್ನು ನಮ್ಮೆದುರಿಗೆ ಇಟ್ಟಿದ್ದರು ಎಂದು ನೆನಪಿಸಿದರು. ಅಂಥ ಸಂದರ್ಭ ಬರದಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಿಯವರು ತಿಳಿಸಿದ್ದಾರೆ ಎಂದರು.

ಹೊಟ್ಟೆಪಾಡಿಗಾಗಿ ಅಪಚಾರದ ಜೀವನ ಮಾಡಬಾರದು ಎಂದ ಅವರು, ಜನರಿಗೆ ಕಾನೂನಿನ ಅರಿವು ಸರಿಯಾಗಿ ತಲುಪಿಲ್ಲ. ಗಳಿಕೆ, ಆದಾಯ, ಸಂಪಾದನೆ ಮುಖ್ಯವಲ್ಲ. ನಿಜವಾದ ಅಗತ್ಯ ಇರುವವರಿಗೆ ಸಹಾಯ ಮಾಡಿದರೆ ಅದರಿಂದ ಮಾನಸಿಕ ತೃಪ್ತಿ ಸಿಗುತ್ತದೆ ಎಂದು ವಿಶ್ಲೇಷಿಸಿದರು.

ಬುದ್ಧಿಜೀವಿ ವಕೀಲರು ಕಾನೂನನ್ನು ಸರಿಯಾದ ದಾರಿಯಲ್ಲಿ ಒಯ್ಯಬಲ್ಲರು ಎಂದು ನುಡಿದ ಅವರು, ಬಡತನ ಶಾಶ್ವತ ಶಾಪವಲ್ಲ. ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ಪ್ರಕೋಷ್ಠ ತನ್ನನ್ನು ತೊಡಗಿಸಿಕೊಳ್ಳಲಿ ಎಂದು ಆಶಿಸಿದರು. ಕಾನೂನು ಡಾ. ಅಂಬೇಡ್ಕರ್ ಅವರ ದೊಡ್ಡ ಕೊಡುಗೆ. ನಿಮ್ಮ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಿ ಎಂದು ಮನವಿ ಮಾಡಿದರು.

ಪಕ್ಷಕ್ಕಿಂತ ದೊಡ್ಡದು ಯಾವುದೂ ಇಲ್ಲ. ಪಕ್ಷದ ನೆಲೆ, ಗಟ್ಟಿತನ, ಸಂದೇಶ ವಿಸ್ತರಣೆಗೆ ಪ್ರಯತ್ನಿಸಿದರೆ ಅದರ ಪ್ರತಿಫಲ ನಮಗೆ ಸಿಗುತ್ತದೆ ಎಂದರು. ತಮಗೆ ರಾಜಕೀಯ ತಿರುವು ನೀಡಿದ ಸಂದರ್ಭಗಳನ್ನು ವಿವರಿಸಿದರು. ನರೇಂದ್ರ ಮೋದಿಜಿ ಅವರಿಗೆ ಅಮೆರಿಕದ ಆಹ್ವಾನ ಬಹುದೊಡ್ಡದು ಎಂದು ಶ್ಲಾಘಿಸಿದರು.

ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಯೋಗೇಂದ್ರ ಹೂಡಘಟ್ಟ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಹಾಗೂ ಕಾನೂನು ಪ್ರಕೋಷ್ಠದ ಪದಾಧಿಕಾರಿಗಳು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ