Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಲ್ಮೀಕಿ ನಿಗಮ ಹಗರಣ: ಸಿಬಿಐ ಬಂಧನ ಭೀತಿಯಿಂದ ತಾತ್ಕಾಾಲಿಕ ಪಾರು ಮಾಜಿ ಸಚಿವ ನಾಗೇಂದ್ರಗೆ ನಿರೀಕ್ಷಣಾ ಜಾಮೀನು

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.14:
ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಾಯಾಲಯ ಮಂಗಳವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಬಳಿಕ ಬಂಧನ ಭೀತಿಯಲ್ಲಿದ್ದ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ ಇಂದು ಬುಧವಾರಕ್ಕೆೆ ಆದೇಶ ಕಾಯ್ದಿಿರಿಸಿತ್ತು. ಅದರಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಾಯಾಲಯದ ನ್ಯಾಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶ ಪ್ರಕಟಿಸಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.
ತನಿಖೆಗೆ ಪೂರ್ಣ ಸಹಕಾರ ನೀಡಬೇಕು ಮತ್ತು ಸಾಕ್ಷ್ಯ ನಾಶಪಡಿಸುವ ಪ್ರಯತ್ನ ಮಾಡಬಾರದು, ನ್ಯಾಾಯಾಲಯದ ಅನುಮತಿ ಇಲ್ಲದೆ ಕೋರ್ಟ್ ವ್ಯಾಾಪ್ತಿಿ ಬಿಟ್ಟು ಪ್ರವಾಸ ಮಾಡಬಾರದು, ಮುಂದಿನ ಮೂರು ತಿಂಗಳುಗಳ ಕಾಲ ಪ್ರತಿ ಎರಡನೇ ಭಾನುವಾರ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಸೇರಿದಂತೆ ನ್ಯಾಾಯಾಲಯವು ಹಲವು ಷರತ್ತುಗಳ ಅನುಸಾರ ಜಾಮೀನು ಮಂಜೂರು ಮಾಡಿದೆ.
ವಾಲ್ಮೀಕಿ ನಿಗಮದ ಹಣ ದುರುಪಯೋಗ ಪ್ರಕರಣವನ್ನು ಸಿಬಿಐ ಗಂಭೀರವಾಗಿ ತನಿಖೆ ನಡೆಸುತ್ತಿಿದ್ದು, ಈ ಹಿಂದೆ ನಾಗೇಂದ್ರ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು. ಬಂಧನದ ಭೀತಿಯಲ್ಲಿದ್ದ ಮಾಜಿ ಸಚಿವರು ಜನಪ್ರತಿನಿಧಿಗಳ ವಿಶೇಷ ನ್ಯಾಾಯಾಲಯಕ್ಕೆೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಸಿಬಿಐ ಅಧಿಕಾರಿಗಳು ನಾಗೇಂದ್ರ ಅವರನ್ನು ವಿಚಾರಣೆಗೆ ಒಳಪಡಿಸಲು ಈಗಲೂ ಸ್ವತಂತ್ರರಾಗಿದ್ದರೂ, ಪ್ರಕರಣಕ್ಕೆೆ ಸಂಬಂಧಿಸಿದಂತೆ ನಾಗೇಂದ್ರ ಅವರನ್ನ ತಾತ್ಕಾಾಲಿಕವಾಗಿ ಮತ್ತು ತಕ್ಷಣ ಬಂಧಿಸುವಂತಿಲ್ಲ. ಇದರಿಂದ ಮಾಜಿ ಸಚಿವ ನಾಗೇಂದ್ರ ಅವರಿಗೆ ತಾತ್ಕಾಾಲಿಕ ನೆಮ್ಮದಿ ಸಿಕ್ಕಂತಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ